Homeಮುಖಪುಟರಾಜ್ಯ ವಿಧಾನಸಭಾ ಚುನಾವಣೆ: ಜೆಡಿಎಸ್‌ಗೆ ಬಿಆರ್‌ಎಸ್‌ ಬೆಂಬಲ

ರಾಜ್ಯ ವಿಧಾನಸಭಾ ಚುನಾವಣೆ: ಜೆಡಿಎಸ್‌ಗೆ ಬಿಆರ್‌ಎಸ್‌ ಬೆಂಬಲ

- Advertisement -
- Advertisement -

ತೆಲಂಗಾಣದ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ಗೆ ಬೆಂಬಲ ನೀಡಲು ನಿರ್ಧರಿಸಿದೆ. ಮೇ 10ರಂದು ನಡೆಯುವ ಚುನಾವಣೆಯಲ್ಲಿ ತನ್ನ ಮಿತ್ರ ಪಕ್ಷವು ಕಣದಲ್ಲಿರುವುದರಿಂದ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ಬಿಆರ್‌ಎಸ್ ತೀರ್ಮಾನಿಸಿದೆ.

ಬಿಆರ್‌ಎಸ್ ಪಕ್ಷವು ಈ ಹಿಂದೆ ಟಿಆರ್‌ಎಸ್ (ತೆಲಂಗಾಣ ರಾಷ್ಟ್ರ ಸಮಿತಿ) ಹೆಸರಿನಲ್ಲಿತ್ತು. ರಾಷ್ಟ್ರೀಯ ರಾಜಕೀಯಕ್ಕೆ ಕಾಲಿಡುವುದಕ್ಕಾತಿ ತನ್ನ ಹೆಸರನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಮರುನಾಮಕರಣ ಮಾಡಿತು. ಬಿಆರ್‌ಎಸ್‌ ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದೆಂದು ನಿರೀಕ್ಷಿಸಲಾಗಿತ್ತು.

ಆದರೆ ಜೆಡಿಎಸ್, ಬಿಆರ್‌ಎಸ್‌ನ ಮಿತ್ರ ಪಕ್ಷವಾಗಿದೆ. ಜೊತೆಗೆ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಾಕಷ್ಟು ಸಮಯದ ಕೊರತೆ ಬಿಆರ್‌ಎಸ್‌ಗೆ ಎದುರಾಯಿತು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ಅದು ನಿರ್ಧರಿಸಿತ್ತು ಎಂದು ಬಿಆರ್‌ಎಸ್ ಮೂಲಗಳು ಶುಕ್ರವಾರ ತಿಳಿಸಿವೆ.

ಸಾಕಷ್ಟು ಸಿದ್ಧತೆ ಮತ್ತು ಯೋಜನೆ ಇಲ್ಲದೆ ಚುನಾವಣೆ ಎದುರಿಸಲು ಪಕ್ಷವು ಒಲವು ಹೊಂದಿಲ್ಲ ಎಂದು ಮೂಲಗಳು ಹೇಳಿದ್ದು, ನೆರೆಯ ಮಹಾರಾಷ್ಟ್ರದಲ್ಲಿ ನೆಲೆಯೂರಲು ಬಿಆರ್‌ಎಸ್ ಮಾಡುತ್ತಿರುವ ಪ್ರಯತ್ನಗಳನ್ನು ಉಲ್ಲೇಖಿಸಲಾಗಿದೆ.

ಬಿಆರ್‌ಎಸ್ ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಇದುವರೆಗೆ ಮಹಾರಾಷ್ಟ್ರದ ನಾಂದೇಡ್ ಪ್ರದೇಶದಲ್ಲಿ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಏಪ್ರಿಲ್ 24 ರಂದು ಛತ್ರಪತಿ ಸಂಭಾಜಿ ನಗರದಲ್ಲಿ (ಔರಂಗಾಬಾದ್) ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಅವರು ಭಾಷಣ ಮಾಡಿದ್ದರು.

ಜೆಡಿಎಸ್‌ ಅಭ್ಯರ್ಥಿಗಳು ಕೋರಿದರೆ, ಆದರೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳದಿದ್ದರೆ ಅವರನ್ನು ಬೆಂಬಲಿಸಿ ಪ್ರಚಾರ ಮಾಡುವ ಬಗ್ಗೆ ಚಂದ್ರಶೇಖರ್‌ ರಾವ್‌ ಯೋಚಿಸಬಹುದು.

ತಾನು ಪ್ರಚಾರ ಮಾಡುವುದರಿಂದ ಬಿಜೆಪಿ ವಿರೋಧಿ ಮತಗಳ ವಿಭಜನೆಯಾದರೆ ಕರ್ನಾಟಕದಲ್ಲಿ ಬಿಜೆಪಿಗೆ ವರದಾನವಾಗಲಿದೆ ಎಂಬ ಅಭಿಪ್ರಾಯದ ಬಗ್ಗೆಯೂ ಬಿಆರ್‌ಎಸ್ ಕಳವಳ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಟಿಆರ್‌ಎಸ್ ಹೆಸರನ್ನು ಬಿಆರ್‌ಎಸ್‌ ಎಂದು ಬದಲಾಯಿಸಲು ಹೈದ್ರಾಬಾದ್‌ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲೂ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿಯವರು ಪಾಲ್ಗೊಂಡಿದ್ದರು ಎಂಬುದು ಗಮನಾರ್ಹ.

‘ಭಾರತ್‌ ರಾಷ್ಟ್ರ ಸಮಿತಿ’ ಪಕ್ಷವನ್ನು ಪ್ರಾರಂಭಿಸಿದ ತೆಲಂಗಾಣ ಭವನದಲ್ಲಿ ನಡೆದ ಸಮಾರಂಭದಲ್ಲಿ ಜೆಡಿಎಸ್‌ನ 20 ಶಾಸಕರು ಸಹ ಭಾಗವಹಿಸಿದ್ದರು. ಇಷ್ಟೆ ಅಲ್ಲದೆ ತಮಿಳುನಾಡಿನ ದಲಿತ ನಾಯಕ ತಿರುಮಾವಲವನ್‌ ಅವರ ಪಕ್ಷದ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ)ಯ ಇಬ್ಬರು ಸಂಸದರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕರ್ನಾಟಕದಲ್ಲಿ ಮೇ 10ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಗುರುವಾರ ಅಂತ್ಯಗೊಂಡಿದೆ.

ಇದನ್ನೂ ಓದಿರಿ: ರಾಷ್ಟ್ರ ರಾಜಕಾರಣದ ಗುರಿ: ಟಿಆರ್‌ಎಸ್ ಅನ್ನು ‘ಭಾರತ ರಾಷ್ಟ್ರ ಸಮಿತಿ’ಯನ್ನಾಗಿ ಪರಿವರ್ತಿಸಿದ ತೆಲಂಗಾಣ ಸಿಎಂ ಕೆಸಿಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...