Homeಕರೋನಾ ತಲ್ಲಣಸೆಪ್ಟೆಂಬರ್ 23 ರೊಳಗೆ ರಾಜ್ಯ ವಿಧಾನಸಭಾ ಅಧಿವೇಶನ: ಈ ಬಾರಿ ಸದನ ಬೆಂಗಳೂರಿನ ಹೊರಗೆ?

ಸೆಪ್ಟೆಂಬರ್ 23 ರೊಳಗೆ ರಾಜ್ಯ ವಿಧಾನಸಭಾ ಅಧಿವೇಶನ: ಈ ಬಾರಿ ಸದನ ಬೆಂಗಳೂರಿನ ಹೊರಗೆ?

ಕೊರೊನಾದ ಉಪಟಳ ಎಲ್ಲೆಡೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ವಿಧಾನ ಸಭಾ ಅಧಿವೇಶನವನ್ನು ನಡೆಸುವುದು ಹೇಗೆ ? ಎಂಬ ಬಗ್ಗೆ  ವಿವಿಧ ಸ್ತರಗಳಲ್ಲಿ ವಿಸ್ತೃತ ಚರ್ಚೆಗಳು ನಡೆಯುತ್ತಿವೆ.

- Advertisement -
- Advertisement -

ಕಳೆದ ಮಾರ್ಚ್‍ನಲ್ಲಿ ರಾಜ್ಯ ವಿಧಾನ ಸಭಾ ಅಧಿವೇಶನವು ನಡೆದಿದ್ದು, ಸಂವಿಧಾನಬದ್ದವಾಗಿ ಆರು ತಿಂಗಳ ಒಳಗೆ ಅಂದರೆ ಸೆಪ್ಟೆಂಬರ್ 23 ರೊಳಗೆ ನಡೆಯಬೇಕಾದ ಕಾರಣ, ಅಷ್ಟರೊಳಗೆ ಸದನ ನಡೆಸಲು ತಯಾರಿ ಆರಂಭವಾಗಿದೆ.

ಸದನದಲ್ಲಿ ಭಾಗವಹಿಸುವ ರಾಜ್ಯ ಸಚಿವ ಸಂಪುಟದ ಸದಸ್ಯರು, ಸದನದ ಸದಸ್ಯರು, ಅಧಿಕಾರಿಗಳು ಹಾಗೂ ಮಾಧ್ಯಮದವರಿಗೆ ಕೊರೊನಾ ಸೋಂಕು ತಗುಲದಂತೆ ಕ್ರಮ ವಹಿಸುವುದರ ಕುರಿತು ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ಸದನದಲ್ಲಿನ ವ್ಯವಸ್ಥೆಗಳನ್ನು ಖುದ್ದು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

ಕೊರೊನಾ ಸೋಂಕು ಎಲ್ಲೆಡೆ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ವಿಧಾನ ಸಭಾ ಅಧಿವೇಶನವನ್ನು ನಡೆಸುವುದು ಹೇಗೆ ? ಎಂಬ ಬಗ್ಗೆ ವಿವಿಧ ಸ್ತರಗಳಲ್ಲಿ ವಿಸ್ತೃತ ಚರ್ಚೆಗಳು ನಡೆಯುತ್ತಿವೆ.

ರಾಜ್ಯದ ರಾಜಧಾನಿಯ ವಿಧಾನಸೌಧ ಹೊರತುಪಡಿಸಿ ಬೇರೆಲ್ಲಾದರೂ ಅಧಿವೇಶನ ನಡೆಸಲು ಸೂಕ್ತ ಸ್ಥಳ ಇದೆಯೇ? ಎಂಬ ಬಗ್ಗೆಯೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ವಿಧಾನ ಸೌಧದ ಮೊದಲನೇಯ ಮಹಡಿಯಲ್ಲಿರುವ ವಿಧಾನ ಸಭಾ ಸಭಾಂಗಣದಲ್ಲಿ ಪ್ರಸ್ತುತ ಇರುವ ಆಸನ ವ್ಯವಸ್ಥೆಗಳ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಗಾಜಿನ ಕವಚಗಳನ್ನು ಅಳವಡಿಸಿದರೆ ಹೇಗೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.

ಮುಖ್ಯಮಂತ್ರಿಗಳೂ ಒಳಗೊಂಡಂತೆ ಸದನಕ್ಕೆ ಆಗಮಿಸುವ ಅವರ ಸಂಪುಟದ ಎಲ್ಲಾ ಸದಸ್ಯರು, ಪ್ರತಿಪಕ್ಷ ನಾಯಕರೂ ಒಳಗೊಂಡಂತೆ ಸದನದ ಎಲ್ಲಾ ಸದಸ್ಯರೂ, ಅಧಿವೇಶನ ನಡೆಯುವ ದಿನಗಳಂದು ಕಡ್ಡಾಯವಾಗಿ ಮುಖಗವಸು ಧರಿಸಿಬರಬೇಕೆಂದು ವಿನಂತಿಸುವುದರ ಬಗ್ಗೆ ಅಧಿಕಾರಿಗಳು ತಮಗೆ ಸಲಹೆ ನೀಡಿದ್ದಾರೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಲೋಕಸಭೆ ಮತ್ತು ರಾಜ್ಯ ಸಭೆ ಹಾಗೂ ಇತರೆ ರಾಜ್ಯಗಳಲ್ಲಿನ ವಿಧಾನ ಸಭೆ ಮತ್ತು ವಿಧಾನ ಪರಿಷತ್ತು ಸಮಾವೇಶಗೊಳ್ಳಲು ಹೇಗೆ ಸಿದ್ದತೆಗಳನ್ನು ನಡೆಸುತ್ತಿವೆ ಎಂಬುದರ ಬಗ್ಗೆಯೂ ಮಾಹಿತಿ ಕಲೆ ಹಾಕಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಹೇಳಿದ್ದಾರೆ.

ಮುಂದಿನ ವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳ ಜೊತೆಗೆ ಸಮಾಲೋಚನೆ ನಡೆಸಿ ಸ್ಥಳ ನಿಷ್ಕರ್ಷೆ ಮಾಡುವುದಾಗಿಯೂ ಸಭಾಧ್ಯಕ್ಷರು ತಿಳಿಸಿದರು.  


ಇದನ್ನೂ ಓದಿ: ಮನೋಜ್ ಸಿನ್ಹಾ ಜಮ್ಮು ಕಾಶ್ಮೀರದ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...