Homeಕರ್ನಾಟಕರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ‍‍ಷಾಮೀಲಾಗಿದೆ: ಸಿದ್ದರಾಮಯ್ಯ ಸರಣಿ ಟ್ವೀಟ್

"ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲ. ತರಗತಿಗಳಿಲ್ಲದೆ ಇದ್ದರೂ ಪೋಷಕರಿಂದ ಪೂರ್ಣಶುಲ್ಕ ವಸೂಲಿ‌ ಮಾಡಲಾಗುತ್ತಿದೆ. ಇದಕ್ಕಾಗಿ ಆನ್‌ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿ ಪೋಷಕರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ"

- Advertisement -
- Advertisement -

ರಾಜ್ಯ ಸರ್ಕಾರ ಖಾಸಗಿ ಶಾಲೆಗಳೊಂದಿಗೆ ಷಾಮೀಲಾಗಿದೆ ಎಂದು ಆರೋಪಿಸಿರುವ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡುವ ಮೂಲಕ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಾಜ್ಯ ಸರ್ಕಾರದ ಎಡಬಿಡಂಗಿ ನಿಲುವುಗಳಿಂದಾಗಿ ವಿದ್ಯಾರ್ಥಿಗಳು, ಪೋಷಕರು ಮತ್ತು ಖಾಸಗಿ ಶಾಲೆಗಳ ಮಾಲೀಕರು ಎಲ್ಲರೂ ಬೀದಿಗಿಳಿದಿದ್ದಾರೆ. ಮುಖ್ಯಮಂತ್ರಿಗಳು
ಮತ್ತು ಶಿಕ್ಷಣ ಸಚಿವರು ಈ ಕುರಿತು ತಕ್ಷಣ ಸ್ಪಷ್ಟ ನಿರ್ಧಾರ ಕೈಗೊಂಡು ಈ ಬಿಕ್ಕಟ್ಟನ್ನು ಬಗೆಹರಿಸಿ ವಿದ್ಯಾರ್ಥಿಗಳನ್ನು ರಕ್ಷಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆಯ ಶಿಕ್ಷಕರು ನಮ್ಮ ವಿದ್ಯಾರ್ಥಿಗಳನ್ನು ಸೆಳೆಯುತ್ತಿದ್ದಾರೆ ಎಂದು ದೂರಿದ ಖಾಸಗಿ ಶಾಲೆಗಳು!

ಇದನ್ನೂ ಓದಿ: ಶುಲ್ಕ ಪಾವತಿಸದಿದ್ದರೆ ದಾಖಲಾತಿ ರದ್ದು ಬೆದರಿಕೆ: ಸರ್ಕಾರದ ಆದೇಶಕ್ಕೆ ಕ್ಯಾರೇ ಎನ್ನದ ಖಾಸಗಿ ಶಾಲೆಗಳು

“ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿನ ಈಗಿನ ಬಿಕ್ಕಟ್ಟಿಗೆ ಮುಖ್ಯಮಂತ್ರಿಗಳು ಮತ್ತು ಶಿಕ್ಷಣ ಸಚಿವ ಸುರೇಶ್‌ ಕುಮಾರ್ ಅವರೇ ನೇರ ಹೊಣೆಗಾರರು. ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ಜಗಳ ತಂದು ಹಾಕಿ ಇವರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಕಾಲದಲ್ಲೂ ನಿಲ್ಲದ ಸುಲಿಗೆ; ಖಾಸಗಿ ಶಾಲೆಗಳಲ್ಲಿ ‘ಕೋವಿಡ್ ಫೀಸ್’ ವಸೂಲಿ ಆರಂಭ

“ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲ. ತರಗತಿಗಳಿಲ್ಲದೆ ಇದ್ದರೂ ಪೋಷಕರಿಂದ ಪೂರ್ಣಶುಲ್ಕ ವಸೂಲಿ‌ ಮಾಡಲಾಗುತ್ತಿದೆ. ಇದಕ್ಕಾಗಿ ಆನ್‌ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿ ಪೋಷಕರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ಸರ್ಕಾರ ಕಣ್ಣುಮುಚ್ಚಿಕೊಂಡು ಕೂತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಹೀಗೆ ಮಾಡಿದರೆ ಸರ್ಕಾರಿ ಶಾಲೆಗಳು ಉತ್ತಮವಾಗಬಹುದಲ್ಲವೇ? 

“ತರಗತಿಗಳು ನಡೆಯದೆ ಇದ್ದರೂ ಬೋದನಾ ಶುಲ್ಕದ ಜೊತೆಯಲ್ಲಿ ಪ್ರಯೋಗಶಾಲೆ, ಲೈಬ್ರೆರಿ ಮತ್ತಿತರ ಪಠ್ಯೇತರ ಶುಲ್ಕ ವಸೂಲಿಗೆ ಹೊರಟಿರುವ ಖಾಸಗಿ ಶಾಲೆಗಳು ಸರ್ಕಾರದ ಪೊಳ್ಳುಬೆದರಿಕೆಗೆ ಜಗ್ಗುತ್ತಿಲ್ಲ. ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆ ಷಾಮೀಲಾಗಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಜನವರಿ 1 ರಿಂದ ವಿದ್ಯಾಗಮ ಪುನರಾರಂಭ- ಸಚಿವ ಸುರೇಶ್ ಕುಮಾರ್‌

“ಶಾಲೆ ಪುನರಾರಂಭದ ಬಗ್ಗೆ ಸರಣಿ ಸಭೆಗಳು, ಶಿಕ್ಷಣ ಸಚಿವರು ಮತ್ತು ಅಧಿಕಾರಿಗಳ ತರಹೇವಾರಿ ಹೇಳಿಕೆಗಳು ಪೋಷಕರನ್ನು ಗೊಂದಲಕ್ಕೆ ನೂಕಿವೆ. ತಕ್ಷಣ ಸಚಿವ ಸುರೇಶ್‌ ಕುಮಾರ್ ಅವರು ಖಾಸಗಿ ಶಾಲೆಗಳು ಮತ್ತು ಪೋಷಕರ ಸಭೆ ಕರೆದು ಪಾರದರ್ಶಕವಾಗಿ ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಗ್ರಾಮೀಣ ಮೀಸಲಾತಿಯ ಮೋಸಗಳು!!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...