ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಪ್ರತಿಕ್ರಿಯೆ ನೀಡಿದ್ದು, “ಮೋದಿ ಜೀ, ಕರ್ನಾಟಕದ ಬಿಜೆಪಿ ಸರ್ಕಾರವನ್ನು ಶೇ. 40 ಕಮಿಷನ್ ಸರ್ಕಾರ ಎಂದು ಕರೆಯಲಾಗುತ್ತದೆ. ಎಂಬುದನ್ನು ನಾನು ನಿಮಗೆ ನೆನಪಿಸುತ್ತೇನೆ” ಎಂದಿದ್ದಾರೆ.
ರಾಜ್ಯ ಚುನಾವಣಾ ಪ್ರಚಾರ ಆರಂಭವಾಗುತ್ತಿದ್ದಂತೆ ಪ್ರಧಾನಿ ಮೋದಿ ಮತ್ತೆ ‘ಡಬಲ್ ಇಂಜಿನ್’ ಜುಮ್ಲಾ ಹೆಸರಿನಲ್ಲಿ ಮತ ಕೇಳಲು ಆರಂಭಿಸಿದ್ದಾರೆ. ಮೋದಿ ಜೀ, ಕರ್ನಾಟಕದ ಬಿಜೆಪಿ ಸರ್ಕಾರವನ್ನು ಶೇ. 40 ಕಮಿಷನ್ ಸರ್ಕಾರ ಎಂದು ಕರೆಯಲಾಗುತ್ತದೆ. ಎಂಬುದನ್ನು ನಾನು ನಿಮಗೆ ನೆನಪಿಸುತ್ತೇನೆ” ಎಂದು ಖರ್ಗೆ ತಿಳಿಸಿದ್ದಾರೆ.
“ಪ್ರತಿ ಇಂಜಿನ್‌ಗೆ ಎಷ್ಟು ಕಮಿಷನ್ ನೀಡಲಾಗುತ್ತದೆ ಎಂಬುದನ್ನು ದಯವಿಟ್ಟು ಮತದಾರರಿಗೆ ತಿಳಿಸಿ” ಎಂದು ಕೇಳಿದ್ದಾರೆ.
ಸೋಮವಾರ ಹಿಮಾಚಲ ಪ್ರದೇಶದಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು, ‘ಡಬ್ಬಲ್ ಇಂಜಿನ್’ ಸರ್ಕಾರದ ಬಗ್ಗೆ ಹೇಳಿದ್ದರು. “ಕಳೆದ ನಾಲ್ಕು ವರ್ಷಗಳಲ್ಲಿ ಗುಡ್ಡಗಾಡು ರಾಜ್ಯದ ಜನರು ವಿವಿಧ ಕಲ್ಯಾಣ ಯೋಜನೆಗಳಿಂದ ಸಾಕಷ್ಟು ಪ್ರಯೋಜನ ಪಡೆದಿದ್ದಾರೆ” ಎಂದಿದ್ದರು.
ಕೇಂದ್ರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಪ್ರಾರಂಭಿಸಿದೆ. ಹಿಮಾಚಲ ಪ್ರದೇಶ ಸರ್ಕಾರವು ಹಿಮ್‌ಕೇರ್ ಎಂಬ ಇದೇ ರೀತಿಯ ಯೋಜನೆಯನ್ನು ಪ್ರಾರಂಭಿಸಿದೆ. ಈ ಎರಡು ಯೋಜನೆಗಳ ಅಡಿಯಲ್ಲಿ ರಾಜ್ಯದ ಒಟ್ಟು 1.25 ಲಕ್ಷ ನಿವಾಸಿಗಳು ಉಚಿತ ಚಿಕಿತ್ಸೆಯನ್ನು ಪಡೆದರು ಎಂದು ತಿಳಿಸಿದ್ದರು. ಅಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮೋದಿ ಚಾಲನೆ ನೀಡಿದ್ದರು.
ಇದನ್ನೂ ಓದಿರಿ: ಜೇನು ಕುರುಬರ ಕಲೆಯನ್ನು ಝೀ ವಾಹಿನಿಯಲ್ಲಿ ಪ್ರದರ್ಶಿಸೋಣ: ಹಂಸಲೇಖ


