Homeಕರ್ನಾಟಕಮೀಸಲಾತಿ ಹೆಚ್ಚಳ ಸಂಬಂಧ ರಾಜ್ಯ ಬಿಜೆಪಿಯ ಬಣ್ಣ ಕೇಂದ್ರ ಸಚಿವರಿಂದ ಬಯಲಾಗಿದೆ: ಸಿದ್ದರಾಮಯ್ಯ

ಮೀಸಲಾತಿ ಹೆಚ್ಚಳ ಸಂಬಂಧ ರಾಜ್ಯ ಬಿಜೆಪಿಯ ಬಣ್ಣ ಕೇಂದ್ರ ಸಚಿವರಿಂದ ಬಯಲಾಗಿದೆ: ಸಿದ್ದರಾಮಯ್ಯ

- Advertisement -
- Advertisement -

ಮೀಸಲಾತಿ ಪ್ರಮಾಣವನ್ನು 50%ಕ್ಕಿಂತ ಹೆಚ್ಚಿಸುವ ಪ್ರಸ್ತಾಪ ಇಲ್ಲವೆಂದು ಲೋಕಸಭೆಯಲ್ಲಿ ಕೇಂದ್ರ ಸಚಿವರೇ ಹೇಳುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್‌ಗೆ ಕೇಂದ್ರ ಸರ್ಕಾರವೇ ಸೂಜಿ ಚುಚ್ಚಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಾಮಾಜಿಕ ನ್ಯಾಯ ಸಚಿವಾಲಯದ ಪ್ರತಿಕ್ರಿಯೆಯನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳುವ ಮೂಲಕ ಪೋಸ್ಟ್ ಮಾಡಿರುವ ಅವರು, “ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರ ಹಿಂದೆ ಇದ್ದದ್ದು ಆ ಸಮುದಾಯದ ಬಗೆಗಿನ ಕಾಳಜಿ ಅಲ್ಲ, ಅದು ರಾಜಕೀಯ ಲಾಭದ ದುರುದ್ದೇಶ ಮಾತ್ರ ಎನ್ನುವುದನ್ನು ನಾವು ಹೇಳುತ್ತಲೇ ಬಂದಿದ್ದೇವೆ. ಈಗ ಕೇಂದ್ರ ಸರ್ಕಾರವೇ ರಾಜ್ಯ ಬಿಜೆಪಿಯ ಬಣ್ಣ ಬಯಲು ಮಾಡಿದೆ” ಎಂದು ತಿಳಿಸಿದ್ದಾರೆ.

“ಶೇಕಡಾ 50ರ ಒಟ್ಟು ಮೀಸಲಾತಿ ಪ್ರಮಾಣದ ಮಿತಿಯನ್ನು ಕಿತ್ತುಹಾಕದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಹೇಗೆ ಹೆಚ್ಚಿಸಲು ಸಾಧ್ಯ? ಕೆಲವರನ್ನು ಕೆಲವು ಕಾಲ ಮರುಳು ಮಾಡಬಹುದು, ಎಲ್ಲರನ್ನೂ ಎಲ್ಲ ಕಾಲದಲ್ಲಿಯೂ ಮರುಳು ಮಾಡಲು ಸಾಧ್ಯವಿಲ್ಲ” ಎಂದಿದ್ದಾರೆ.

“ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುವ ಮತ್ತು ಕಡಿಮೆ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇರುವುದರಿಂದ ರಾಜ್ಯದ ಸರ್ಕಾರ ಮೊದಲು ಇದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ಒಪ್ಪಿಸಬೇಕಿತ್ತು. ಈ ಕರ್ತವ್ಯದಲ್ಲಿ ರಾಜ್ಯ ಸರ್ಕಾರ ಸೋತಿದೆ” ಎಂದು ಟೀಕಿಸಿದ್ದಾರೆ.

“ಪರಿಶಿಷ್ಟ ಜಾತಿ ಮತ್ತು ಪಂಗಡದ ಬಗ್ಗೆ ರಾಜ್ಯ ಸರ್ಕಾರಕ್ಕೆ ಪ್ರಾಮಾಣಿಕವಾದ ಕಾಳಜಿ ಇದ್ದಿದ್ದರೆ ತಕ್ಷಣ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಮೀಸಲಾತಿ ಹೆಚ್ಚಳಕ್ಕೆ ಕೈಗೊಳ್ಳಬೇಕಾಗಿರುವ ಉಪಕ್ರಮಗಳ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಶುರುಮಾಡುವಂತೆ ಮನವರಿಕೆ ಮಾಡಿಕೊಡಬೇಕು. ಮತ್ತೆ ಯಾವ ಕರ್ಮಕ್ಕೆ ಡಬಲ್ ಎಂಜಿನ್ ಸರ್ಕಾರ?” ಎಂದು ಪ್ರಶ್ನಿಸಿದ್ದಾರೆ.

“ಪ್ರಧಾನ ಮಂತ್ರಿಯವರ ಜೊತೆ ಮಾತನಾಡುವ ಧೈರ್ಯ ಇಲ್ಲದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲಿ, ಮೀಸಲಾತಿ ಹೆಚ್ಚಳದ ಅವಶ್ಯಕತೆ ಬಗ್ಗೆ ನಾವು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಡುತ್ತೇವೆ. ಇದನ್ನು ಬಿಟ್ಟು ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಾ ಬಣ್ಣ ಬಯಲು ಮಾಡಿಕೊಳ್ಳಬೇಡಿ” ಎಂದು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಕಾರದ ಮಾತಿಗೆ ಮರುಳಾಗೀರುವ ಜನಕ್ಕೆ ಇನ್ನಾದರೂ ಎಚ್ಚರವಾಗುತ್ತಾ?

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...