Homeಕರ್ನಾಟಕರಾಜ್ಯ ಬಜೆಟ್-2022: ಜನರ ನಿರೀಕ್ಷೆ ಏನು? ಏನಾಗಲಿದೆ ಈ ವರ್ಷದ ಆಯವ್ಯಯ?

ರಾಜ್ಯ ಬಜೆಟ್-2022: ಜನರ ನಿರೀಕ್ಷೆ ಏನು? ಏನಾಗಲಿದೆ ಈ ವರ್ಷದ ಆಯವ್ಯಯ?

- Advertisement -
- Advertisement -

ಕೇಂದ್ರ ಬಜೆಟ್ ಬೆನ್ನಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ (ಮಾರ್ಚ್ 04) ತಮ್ಮ ಮೊದಲ ಪೂರ್ಣ ಪ್ರಮಾಣದ ಬಜೆಟ್ ಅನ್ನು ಅಧಿವೇಶನದಲ್ಲಿ ಮಂಡಿಸಲಿದ್ದಾರೆ. ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಚುನಾವಣೆ ದೃಷ್ಟಿಕೋನದಿಂದ ಮತ್ತು ಕೊರೊನಾದಿಂದ ಈಗಾಗಲೇ ಪಾತಾಳಕ್ಕೆ ಕುಸಿದಿರುವ ರಾಜ್ಯದ ಆರ್ಥಿಕತೆ ಸುಧಾರಿಸುವ ನಿಟ್ಟಿನಿಂದಲೂ ಈ ವರ್ಷದ ಬಜೆಟ್ ಮೇಲೆ ಜನಸಾಮಾನ್ಯರಿಗೆ ಸಾಕಷ್ಟು ನಿರೀಕ್ಷೆಗಳಿವೆ.

ರೈತರಿಗೆ ನೆರವಾಗಲಿದೆಯೇ ಬಜೆಟ್?

ಕಳೆದ ಹಲವು ವರ್ಷಗಳಿಂದ ರಾಜ್ಯದಲ್ಲಿ ಅಕಾಲಿಕ ಮಳೆ ತೀರಾ ಸಾಮಾನ್ಯವಾದ ಸಂಗತಿ ಎಂಬಂತಾಗಿದೆ. 2021 ರಿಂದ ಈವರೆಗೆ ಅಕಾಲಿಕ ಮಳೆಗೆ ರಾಣಿಬೆನ್ನೂರಿನಲ್ಲಿ 892.3 ಹೆಕ್ಟೇರ್ ಭೂಮಿಯಲ್ಲಿ ಬೆಳೆದಿದ್ದ ಹತ್ತಿ, ಭತ್ತ, ಶೇಂಗಾ, ಜೋಳ ಸೇರಿದಂತೆ ನಾನಾ ಬೆಳೆಗಳು ನಾಶವಾಗಿವೆ. ಧಾರವಾಡ ಜಿಲ್ಲೆಯಲ್ಲಿ 90 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಭಿತ್ತನೆ ಮಾಡಲಾಗಿದ್ದ ನಾನಾ ಬೆಳೆಗಳು ಕೈಗೆಟುಕದಂತಾಗಿದೆ.

ಗದಗ, ಲಕ್ಷ್ಮೇಶ್ವರ ಭಾಗದಲ್ಲಿ ನೂರಾರು ಹೆಕ್ಟೇರ್‌ನಲ್ಲಿ ಬೆಳೆಯಲಾಗಿದ್ದ ಶೇಂಗಾ, ಈರುಳ್ಳಿ ಮತ್ತು ಜೋಳವೂ ಮಣ್ಣು ಪಾಲಾಗಿದೆ. ಇನ್ನೂ ಮಲೆನಾಡಿನ ಭಾಗದಲ್ಲಿ ಅಡಿಕೆ ಬೆಳೆಗಾರರು ಕೋಂಟ್ಯಾಂತರ ರೂ. ನಷ್ಟ ಅನುಭವಿಸಿದ್ದಾರೆ. ರಾಜ್ಯದ ಇತರೆ ಭಾಗದಲ್ಲಿರುವ ರೈತರ ಸಮಸ್ಯೆಯೂ ಇದಕ್ಕಿಂತ ಭಿನ್ನವಾಗೇನು ಇಲ್ಲ.

ಈ ನಡುವೆ ರೈತರಿಗೆ ರಾಜ್ಯ ಸರ್ಕಾರ ಸರಿಯಾದ ಸಮಯಕ್ಕೆ ವಿದ್ಯುತ್ ನೀಡಲಾಗುತ್ತಿಲ್ಲ. ಗೊಬ್ಬರ ಬಿತ್ತನೆ ಬೀಜದ ಬೆಲೆ ಇಳಿಕೆ ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ಸಾಲಮನ್ನಾ ಸೇರಿದಂತೆ ರಾಜ್ಯದ ಬಜೆಟ್ ಮೇಲೆ ರೈತರಿಗೆ ಸಾಕಷ್ಟು ನಿರೀಕ್ಷೆ ಮತ್ತು ಬೇಡಿಕೆಗಳಿವೆ. ಆದರೆ, ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಲಿದೆ ಎಂಬುದು ಬಜೆಟ್ ನಂತರ ಸ್ಪಷ್ಟವಾಗಲಿದೆ.

ಕಾರ್ಮಿಕರ ಕೂಗೇನು?

ಕೊರೊನಾ ಕಾರಣದಿಂದಾಗಿ ಅಸಂಘಟಿತ ಕಾರ್ಮಿಕ ವಲಯ ಸಾಕಷ್ಟು ಸಮಸ್ಯೆಯನ್ನು ಸಾಕಷ್ಟು ಸಾವು-ನೋವುಗಳನ್ನು ಎದುರಿಸಿದೆ. ಈ ವಿಭಾಗದಲ್ಲಿನ ನಿರುದ್ಯೋಗ ಸಮಸ್ಯೆ ಈವರೆಗೆ ಬಗೆಹರಿದಂತೆ ಕಂಡುಬಂದಿಲ್ಲ. ಅಲ್ಲದೆ, ಕಾರ್ಮಿಕ ಇಲಾಖೆ ಕೊರೊನಾ ಸಂದರ್ಭದಲ್ಲಿ ಅಸಂಘಟಿತ ವಲಯಕ್ಕೆ ಉತ್ತಮ ನೆರವನ್ನೂ ನೀಡಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

ಸೂಕ್ತ ಕೆಲಸ ಮತ್ತು ಕೂಲಿ ಇಲ್ಲದೆ ದಿನಗೂಲಿಗಳು ಮತ್ತು ಕಟ್ಟಡ ಕಾರ್ಮಿಕರು ಕಂಗಾಲಾಗಿದ್ದಾರೆ. ವಸತಿ ರಹಿತ ಕಾರ್ಮಿಕರಿಗೆ ಸೂರು ನೀಡುವುದಕ್ಕೆಂದೆ ಕೇಂದ್ರ-ರಾಜ್ಯ ಸರ್ಕಾರಗಳ ನಾನಾ ಯೋಜನೆಗಳು ಇವೆ. ಆದರೆ, ಸೂರು ಮಾತ್ರ ಖಚಿತವಾಗುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ಈ ವರ್ಷದ ಬಜೆಟ್‌ನಲ್ಲಿ ಅಸಂಘಟಿತ ವಲಯಕ್ಕೆ ಸರ್ಕಾರದ ಕೊಡುಗೆ ಏನು? ಎಂಬುದರ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ.

ಸಣ್ಣ-ಮಧ್ಯಮ ಉದ್ಯಮಗಳ ನಿರೀಕ್ಷೆ ಏನು?

ರಾಜ್ಯದಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವ ಕ್ಷೇತ್ರಗಳ ಪೈಕಿ ಸಣ್ಣ-ಮದ್ಯಮ ಉದ್ಯಮಗಳ ಪಾತ್ರ ದೊಡ್ಡದು. ಆದರೆ, ಜಿಎಸ್‌ಟಿ ಜಾರಿಯಿಂದಾಗಿ ಅನೇಕ ಸಣ್ಣ ಉದ್ಯಮಗಳು ಅವನತಿಯೆಡೆಗೆ ದೂಡಿತ್ತು. ಇನ್ನೂ ಕೊರೊನಾದಿಂದ ಉಂಟಾಗಿದ್ದ ಆರ್ಥಿಕ ಸಂಕಷ್ಟದಿಂದ ಈವರೆಗೆ ಅನೇಕ ಉದ್ಯಮಗಳು ಚೇತರಿಸಿಕೊಂಡಿಲ್ಲ. ಹೀಗಾಗಿ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಚೇತರಿಕೆಗೆ ರಾಜ್ಯ ಸರ್ಕಾರ ಯಾವ ಪ್ಯಾಕೇಜ್ ಘೋಷಿಸಲಿದೆ? ಎಂಬುದೂ ಸಹ ಕುತೂಹಲಕ್ಕೆ ಕಾರಣಾಗಿದೆ.

ಜನ ಸಾಮಾನ್ಯರ ಬೇಡಿಕೆ ಏನು?

ರಾಜ್ಯದಲ್ಲಿ ನಿರುದ್ಯೋಗದ ಸಮಸ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಶಿಕ್ಷಿತ ಯುವಕರು ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. ಮತ್ತೊಂದೆಡೆ ದಿನೋಪಯೋಗಿ ವಸ್ತುಗಳ ಬೆಲೆ ದಿನೇ ದಿನೇ ಏರುತ್ತಿದ್ದು ಕೆಳ ಮತ್ತು ಮಧ್ಯಮ ವರ್ಗದ ಜನ ಬದುಕುವುದೇ ದುಸ್ಥರವಾಗಿದೆ. ಪೆಟ್ರೋಲ್ ಬೆಲೆಯಲ್ಲೂ ಸಹ ಪಂಚರಾಜ್ಯಗಳ ಚುನಾವಣೆ ಬಳಿಕ ಏರಿಕೆ ಕಾಣಲಿದೆ ಎನ್ನಲಾಗುತ್ತಿದೆ. ಇದು ನಿಜವಾದರೆ ಜನ ಸಾಮಾನ್ಯರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವುದು ಖಚಿತ.

ಹೀಗಾಗಿ ರಾಜ್ಯ ಸರ್ಕಾರ ಉದ್ಯೋಗ ಸೃಷ್ಟಿಗೆ ಯಾವ ಕ್ರಮ ತೆಗೆದುಕೊಳ್ಳಲಿದೆ? ಬೆಲೆ ನಿಯಂತ್ರಣಕ್ಕೆ ಮುಂದಾಗಲಿದೆಯೇ? ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಇಳಿಸಲಿದೆಯೇ? ಇದರ ಜೊತೆಗೆ ಯಾವೆಲ್ಲಾ ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ಇಳಿಸಲಿದೆ? ಎಂದು ಜನ ಕುತೂಹಲದಿಂದ ಕಾದು ಕುಳಿತಿದ್ದಾರೆ.


ಇದನ್ನು ಓದಿರಿ:ಕೇಂದ್ರ ಸರ್ಕಾರ ಮತ್ತು ಗೋದಿ ಮಿಡಿಯಾಗಳಿಗೆ ಛೀಮಾರಿ ಹಾಕುತ್ತಿರುವ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...