Homeಕರ್ನಾಟಕಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ 'ಋತುಚಕ್ರ ರಜೆ'ಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ‘ಋತುಚಕ್ರ ರಜೆ’ಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

- Advertisement -
- Advertisement -

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರ ಉದ್ಯೋಗಸ್ಥ ಮಹಿಳೆಯರಿಗೆ ಸಿಹಿಸುದ್ದಿ ನೀಡಿದ್ದು, ವೇತನ ಸಹಿತ ‘ಋತುಚಕ್ರ ರಜೆ’ಗೆ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಒಪ್ಪಿಗೆ ಲಭಿಸಿದೆ.

ಕರ್ನಾಟಕ ಸರ್ಕಾರವು ಮಾಸಿಕ ಋತುಸ್ರಾವದ ರಜೆ ನೀತಿಯನ್ನು ಜಾರಿಗೆ ತರಲು ನಿರ್ಧರಿಸಿದ್ದು, ಈ ನೀತಿಯ ಅನ್ವಯ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ ರಜೆ ಸಿಗಲಿದೆ.

ಸಾರ್ವಜನಿಕ ಮತ್ತು ಖಾಸಗಿ ವಲಯದ ಎಲ್ಲ ಉದ್ಯೋಗದಾತರು ಈ ನೀತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಾಗುತ್ತದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಅನುಮೋದನೆ ನೀಡಲಾಗಿದೆ.

ನೂತನ ನೀತಿಯ ಅನ್ವಯ ಇದರನ್ವಯ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನದ ವೇತನ ಸಹಿತ ರಜೆ ಸಿಗಲಿದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಎಲ್ಲ ಉದ್ಯೋಗದಾತರು ಈ ನೀತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಾಗುತ್ತದೆ. ಗುರುವಾರ ನಡೆದ ಕರ್ನಾಟಕ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ, ಅನುಮೋದನೆ ನೀಡಲಾಗಿದೆ.

ಇನ್ನು ಈ ಬಗ್ಗೆ ಕಾನೂನು ಸಚಿವ ಎಚ್‌ಕೆ ಪಾಟೀಲ್‌ ಮಾಹಿತಿ ನೀಡಿದ್ದು, ‘ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಎಂಎನ್‌ಸಿ, ಐಟಿ ಮತ್ತು ಇತರೆ ಖಾಸಗಿ ಸಂಸ್ಥೆ, ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ರಜೆ ನೀಡುವ “ಋತುಚಕ್ರ ರಜೆ ನೀತಿ”ಗೆ ಸಂಪುಟ ಒಪ್ಪಿಗೆ ನೀಡಿದೆ’ ಎಂದು ಹೇಳಿದರು.

ಇನ್ನು ಕಾರ್ಮಿಕ ಇಲಾಖೆಯು 2025 ರ ಮಾಸಿಕ ಋತುಸ್ರಾವದ ರಜೆ ನೀತಿಗಾಗಿ ಆಡಳಿತಾತ್ಮಕ ಅನುಮೋದನೆ ಕೋರಿತ್ತು. ಈಗಾಗಲೇ ಕೇರಳವು ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್‌ಗಳಲ್ಲಿನ ಮಹಿಳಾ ತರಬೇತಿದಾರರಿಗೆ ಎರಡು ದಿನಗಳ ಮಾಸಿಕ ಋತುಸ್ರಾವದ ರಜೆಯನ್ನು ಪರಿಚಯಿಸಿದೆ.

ಬಿಹಾರ ಮತ್ತು ಒಡಿಶಾದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಮಾತ್ರ 12 ದಿನಗಳ ವಾರ್ಷಿಕ ಮಾಸಿಕ ಋತುಸ್ರಾವದ ರಜೆ ನೀತಿ ಜಾರಿಯಲ್ಲಿದೆ. ಆದರೆ, ಕರ್ನಾಟಕವು ಈ ನೀತಿಯನ್ನು ಸಮಗ್ರವಾಗಿ ಜಾರಿಗೆ ತರುವ ಮೊದಲ ರಾಜ್ಯವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...