Homeಮುಖಪುಟಪರಿಶಿಷ್ಟ ಜಾತಿ, ಪಂಗಡಗಳಲ್ಲೇ ಹಿಂದುಳಿದ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ: ಸುಪ್ರೀಂ ಕೋರ್ಟ್ ಸಮ್ಮತಿ

ಪರಿಶಿಷ್ಟ ಜಾತಿ, ಪಂಗಡಗಳಲ್ಲೇ ಹಿಂದುಳಿದ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ: ಸುಪ್ರೀಂ ಕೋರ್ಟ್ ಸಮ್ಮತಿ

- Advertisement -
- Advertisement -

ಪರಿಶಿಷ್ಟ ಜಾತಿ, ಪಂಗಡಗಳಲ್ಲಿ ಅತ್ಯಂತ ಹಿಂದುಳಿದಿರುವ ಸಮುದಾಯಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸಲು ಒಳ ಮೀಸಲಾತಿಯನ್ನು ಒದಗಿಸುವ ಪ್ರಸ್ತಾವಕ್ಕೆ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಸಮ್ಮತಿ ಸೂಚಿಸಿದೆ.

ಒಳ ಮೀಸಲಾತಿ ಅನುಮತಿಸುವಾಗ, ರಾಜ್ಯವು ಉಪ-ವರ್ಗಕ್ಕೆ ಶೇ. 100 ಮೀಸಲಾತಿಯನ್ನು ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಅಲ್ಲದೆ, ರಾಜ್ಯವು ಉಪ-ವರ್ಗದ ಪ್ರಾತಿನಿಧ್ಯದ ಅಸಮರ್ಪಕತೆಯ ಬಗ್ಗೆ ಪ್ರಾಯೋಗಿಕ ದತ್ತಾಂಶದ ಆಧಾರದ ಮೇಲೆ ಒಳ ಮೀಸಲಾತಿ ಸಮರ್ಥಿಸಬೇಕಾಗಿದೆ ಎಂದಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಾಂವಿಧಾನಿಕ ಪೀಠವು 6-1 ಅಂತರದ ಬಹುಮತದ ತೀರ್ಪಿನ ಮೂಲಕ ಒಳ ಮೀಸಲಾತಿ ಪ್ರಸ್ತಾವವನ್ನು ಎತ್ತಿ ಹಿಡಿದಿದೆ. ನ್ಯಾ. ಬೇಲಾ ಮಾತ್ರ ಈ ಪ್ರಸ್ತಾವಕ್ಕೆ ಭಿನ್ನಮತ ವ್ಯಕ್ತಪಡಿಸಿದ್ದಾರೆ. ಈ ಕುರಿತು ಆರು ಪ್ರತ್ಯೇಕ ತೀರ್ಪುಗಳನ್ನು ಬರೆಯಲಾಗಿದೆ. ಒಳ ಮೀಸಲಾತಿಗೆ ಸಂಬಂಧಿಸಿದಂತೆ ಇ.ವಿ.ಚಿನ್ನಯ್ಯ ವರ್ಸಸ್ ಆಂಧ್ರಪ್ರದೇಶ ರಾಜ್ಯ ಪ್ರಕರಣದ ಸಂಬಂಧ 2004ರಲ್ಲಿ ಐದು ಮಂದಿ ನ್ಯಾಯಾಧೀಶರ ಸಾಂವಿಧಾನಿಕ ಪೀಠವು ನೀಡಿದ್ದ ತೀರ್ಪನ್ನು ಈ ತೀರ್ಪು ಅನೂರ್ಜಿತಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಮೂರು ದಿನಗಳ ವಿಚಾರಣೆಯ ನಂತರ ಈ ವರ್ಷದ ಫೆಬ್ರವರಿ 8 ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಪರಿಶಿಷ್ಟ ಜಾತಿಗಳು ಏಕಕುಲದ ಗುಂಪಲ್ಲ ಎಂದು ಅಭಿಪ್ರಾಯ ಪಟ್ಟಿರುವ ಸುಪ್ರೀಂ ಕೋರ್ಟ್, ರಾಜ್ಯ ಸರ್ಕಾರಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಅತಿ ಹೆಚ್ಚು ತಾರತಮ್ಯಕ್ಕೊಳಗಾಗಿರುವ ಸಮುದಾಯಗಳಿಗೆ ಶೇ. 15ರಷ್ಟು ಮೀಸಲಾತಿಯಲ್ಲಿ ಹೆಚ್ಚುವರಿ ಮೀಸಲಾತಿ ಒದಗಿಸಬಹುದು ಎಂದು ತೀರ್ಪು ನೀಡಿದೆ.

ಇದನ್ನೂ ಓದಿ : ಹಮಾಸ್ ಪರಮೋಚ್ಚ ನಾಯಕನ ಹತ್ಯೆ : ಇಸ್ರೇಲ್ ಮೇಲೆ ದಾಳಿಗೆ ಮುಂದಾದ ಇರಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...