Homeಕರ್ನಾಟಕಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! - ಕಾರಣ ಏನು?

ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! – ಕಾರಣ ಏನು?

ಆರೋಗ್ಯ ಕಾರ್ಯಕರ್ತರ ಮೇಲೆ ಕೋವಾಕ್ಸಿನ್ ಅನ್ನು "ಪ್ರಾಯೋಗಿಕ ಆಧಾರದ ಮೇಲೆ" ಬಳಸುವುದು ಖಂಡನೀಯ ಎಂದು ಕೆಎಆರ್‌ಡಿ (ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್) ಅಧ್ಯಕ್ಷ ಡಾ. ದಯಾನಂದ್ ಸಾಗರ್ ಹೇಳಿದ್ದಾರೆ.

- Advertisement -
- Advertisement -

ತಮಗೆ ನೀಡುವ ಕೊವಿಡ್ ಲಸಿಕೆ ಯಾವುದಿರಬೇಕು (ಸದ್ಯ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಎರಡೇ ಆಯ್ಕೆ) ಎಂಬ ಆಯ್ಕೆಯನ್ನು ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕು ಎಂದು ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್ (KARD) ಸರ್ಕಾರವನ್ನು ಆಗ್ರಹಿಸಿದೆ.

KARD, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರಿಗೆ ಬರೆದ ಪತ್ರದಲ್ಲಿ, “ರಾಜ್ಯದ ಹಲವಾರು ಜಿಲ್ಲೆಗಳ ನಿವಾಸಿ (ರೆಸಿಡೆಂಟ್) ವೈದ್ಯರು ಲಸಿಕೆ ವಿಷಯದಲ್ಲಿ ತಮಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಭಾವಿಸಿದ್ದಾರೆ. ಪ್ರಸ್ತುತ, ಕೊವ್ಯಾಕ್ಸಿನ್ ಅನ್ನು ಚಿಕ್ಕಮಗಳೂರು, ಹಾಸನ, ಬಳ್ಳಾರಿ, ಶಿವಮೊಗ್ಗ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆಯ ಜಿಲ್ಲಾ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತಿದೆ” ಎಂದು ಬರೆದಿದ್ದಾರೆ.

ಈ ಜಿಲ್ಲೆಗಳ ನಿವಾಸಿ ವೈದ್ಯರಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ಕರ್ನಾಟಕದ ಇತರ ಕೇಂದ್ರಗಳು ಕೋವಿಶೀಲ್ಡ್ ಪಡೆಯುತ್ತಿವೆ.

“ಕೊವಾಕ್ಸಿನ್ ಸ್ವೀಕರಿಸುವ ಮೊದಲು ಕೋವಾಕ್ಸಿನ್‌ನ ವೈದ್ಯಕೀಯ ಪರಿಣಾಮಕಾರಿತ್ವವನ್ನು ಇನ್ನೂ ಸ್ಥಾಪಿಸಲಾಗಿಲ್ಲ ಎಂದು ತಿಳಿಸುವ ಜವಾಬ್ದಾರಿಯನ್ನು ನಮ್ಮ ಮೇಲೆ ಹೊರಿಸಲಾಗಿದ್ದು, ಆ ರೀತಿಯ ಪತ್ರವನ್ನು ನಮ್ಮಿಂದ ಬರೆಸಿಕೊಳ್ಳಲಾಗಿದೆ” ಎಂದು ವೈದ್ಯಕೀಯ ಸಚಿವರಿಗೆ ಬರೆದ ಪತ್ರದಲ್ಲಿ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು: ಸಾವಿಗೆ ಲಸಿಕೆ ಕಾರಣವಲ್ಲ ಎಂದ ಸಚಿವ ಸುಧಾಕರ್

ಲಸಿಕೆ ವಿತರಣೆಯಲ್ಲಿನ ಜವಾಬ್ದಾರಿ ಮತ್ತು ವ್ಯತ್ಯಾಸಗಳು ಬಹಳ ಅನುಮಾನಾಸ್ಪದವೆನಿಸುತ್ತದೆ. ಮತ್ತು ಕೊವ್ಯಾಕ್ಸಿನ್ ಲಸಿಕೆ ಪಡೆಯುವಲ್ಲಿ ನಿವಾಸಿ ವೈದ್ಯರು (ರೆಸಿಡೆಂಟ್ ಡಾಕ್ಟರ್‍ಸ್) ಹಿಂಜರಿಯುತ್ತಿದ್ದಾರೆ. ಶಿವಮೊಗ್ಗ, ಹಾಸನ, ಚಾಮರಾಜನಗರ ಮತ್ತು ಬಳ್ಳಾರಿಯಲ್ಲಿನ ವೈದ್ಯಕೀಯ ಕಾಲೇಜುಗಳ ನಿವಾಸಿ ವೈದ್ಯರು (ರೆಸಿಡೆಂಟ್ ಡಾಕ್ಟರ್‍ಸ್), “ಮೂರನೇ ಹಂತದ ಟ್ರಯಲ್ಸ್ ಪೂರ್ಣಗೊಳಿಸದ ಲಸಿಕೆಯನ್ನು ನೀಡಲು ತೀರ್ಮಾನಿಸಿದ ಸರ್ಕಾರದ ಕ್ರಮ ಕಳವಳಕಾರಿಯಾಗಿದೆ” ಎಂದು ದೂರಿದ್ದಾರೆ.

ಆರೋಗ್ಯ ಕಾರ್ಯಕರ್ತರ ಮೇಲೆ ಕೋವಾಕ್ಸಿನ್ ಅನ್ನು “ಪ್ರಾಯೋಗಿಕ ಆಧಾರದ ಮೇಲೆ” ಬಳಸುವುದು ಖಂಡನೀಯ ಎಂದು ಕೆಎಆರ್‌ಡಿ (ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್) ಅಧ್ಯಕ್ಷ ಡಾ. ದಯಾನಂದ್ ಸಾಗರ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದಲ್ಲದೆ, ನಮ್ಮಿಂದ ಸಹಿ ಹಾಕುವ ಕಾರ್ಯವನ್ನು ಅನುಮಾನಾಸ್ಪದವಾಗಿ ಮಾಡಿಸಲಾಗಿದೆ. ಅದರಲ್ಲಿನ ಪದಪುಂಜ ಗೊಂದಲದಿಂದ ಕೂಡಿವೆ. ಇದಕ್ಕೆ ಬದಲಾಗಿ, ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಆಯ್ಕೆ ಮಾಡುವ ಆಯ್ಕೆಯನ್ನು ನೀಡಬೇಕು. ಕನಿಷ್ಟ ಮಧ್ಯಂತರ ವಿಶ್ಲೇಷಣೆಯ ಹಂತವನ್ನು ದಾಟಿದ ಲಸಿಕೆಗಳನ್ನು ಸರ್ಕಾರ ನೀಡಬೇಕು ಎಂದು ಅವರು ಹೇಳಿದ್ದಾರೆ. ಕೋವಾಕ್ಸಿನ್‌ನ ಮಧ್ಯಂತರ ವಿಶ್ಲೇಷಣಾ ವರದಿ ಲಭ್ಯವಿಲ್ಲದ ಕಾರಣ ಕೋವಿಶೀಲ್ಡ್‌ಗೆ ಆದ್ಯತೆ ಹೆಚ್ಚಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಆದಾಗ್ಯೂ, ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್ ನೀಡಿದ ಅನುಮತಿಯನ್ನು ಉಲ್ಲೇಖಿಸುತ್ತಿರುವ ಆರೋಗ್ಯ ಸಚಿವ ಸುಧಾಕರ್, “ಎರಡೂ ಲಸಿಕೆಗಳು ವಿಶ್ವಾಸಾರ್ಹ, ಆರೋಗ್ಯ ಕಾರ್ಯಕರ್ತರು ಯಾವುದೇ ಆತಂಕವಿಲ್ಲದೆ ಕೊವಾಕ್ಸಿನ್ ತೆಗೆದುಕೊಳ್ಳಬಹುದು” ಎಂದು ಹೇಳುತ್ತಿದ್ದಾರೆ.

ಇದರ ನಡುವೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯು ಬಹಿರಂಗಪಡಿಸಿದ ಮಾಹಿತಿಯು ವ್ಯಾಕ್ಸಿನೇಷನ್ ಚಾಲನೆಯ ಮೊದಲ ಮೂರು ದಿನಗಳಲ್ಲಿ 55,550 ಫಲಾನುಭವಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿದೆ ಎಂದು ಹೇಳಿದೆ.

ಸೋಮವಾರ ನಡೆದ ಕೋವಿಡ್ -19 ವ್ಯಾಕ್ಸಿನೇಷನ್ ಚಾಲನೆಯಲ್ಲಿ ಕರ್ನಾಟಕವು ಒಟ್ಟಾರೆ ಶೇಕಡಾ 47 ರಷ್ಟು ವ್ಯಾಪ್ತಿಯನ್ನು ವರದಿ ಮಾಡಿದೆ, ಇದು ಭಾನುವಾರ ಮತ್ತು ಶನಿವಾರದಂದು ನಡೆದ ವ್ಯಾಕಿನೇಷನ್ (ಕ್ರಮವಾಗಿ ಶೇ. 58.4 ಮತ್ತು ಶೇ, 63) ಪ್ರಮಾಣಕ್ಕಿಂತ ಕಡಿಮೆಯಾಗಿದೆ.


ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...