ಹಂಪನಾ ವಿರುದ್ಧ ರಾಜ್ಯ ಸರಕಾರದ ಕ್ರಮ, ಕೀಚಕ ನಡೆಯ ಪ್ರತೀಕ - ಡಿ.ಕೆ. ಶಿವಕುಮಾರ್ ಟೀಕೆ

ಜನಪರ ಧ್ವನಿಯೆತ್ತಿದ ಖ್ಯಾತ ಸಾಹಿತಿ, ಸಂಶೋಧಕ ಹಂ.ಪ.ನಾಗರಾಜಯ್ಯ ವಿರುದ್ಧ ಪೊಲೀಸ್ ಕ್ರಮ ಕೈಗೊಂಡ ರಾಜ್ಯ ಬಿಜೆಪಿ ಸರಕಾರದ ನಡೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದು, “ಇದು ಕೀಚಕ ನಡೆಯ ಪ್ರತೀಕ” ಎಂದಿದ್ದಾರೆ.

ಕೇಂದ್ರ ಸರಕಾರವನ್ನು ಟೀಕಿಸಿದರು ಎಂಬ ಏಕೈಕ ಕಾರಣಕ್ಕಾಗಿ ಹಂಪನಾ ಅವರನ್ನು ಮಂಡ್ಯ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಹಾಗೂ ಕೀಚಕ ನಡೆಯ ಪ್ರತೀಕ ಎಂದು ಶಿವಕುಮಾರ್ ತಮ್ಮ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹಿರಿಯ ಸಾಹಿತಿ, ನಾಡೋಜ ಹಂಪನಾರನ್ನು ಠಾಣೆಗೆ ಕರೆಸಿ ಪೊಲೀಸ್ ವಿಚಾರಣೆ: ವ್ಯಾಪಕ ಖಂಡನೆ

ಹಂಪನಾ ಅವರು ಈ ನಾಡು ಕಂಡ ಶ್ರೇಷ್ಠ ಭಾಷಾ ವಿಜ್ಞಾನಿ, ಸಂಶೋಧಕ ಹಾಗೂ ಎಲ್ಲಕ್ಕೂ ಮಿಗಿಲಾಗಿ ಚಿಂತಕ. ಅಂತಹವರ ಧ್ವನಿ ಅಡಗಿಸಲು ರಾಜ್ಯ ಸರಕಾರ ಮುಂದಾದದ್ದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.

“ತಮ್ಮ ವಿರುದ್ಧ ಧ್ವನಿ ಎತ್ತುವ ರಾಜಕೀಯ ವಿರೋಧಿಗಳ ವಿರುದ್ಧ ಹಗೆತನ ಸಾಧಿಸುವ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಇದೀಗ ಸಾಹಿತಿಗಳನ್ನೂ ಆ ಪಟ್ಟಿಗೆ ಸೇರಿಸಿಕೊಂಡಿರುವುದು ದುರಂತದ ಸಂಗತಿ. ಯಾವುದೇ ಸರಕಾರವಿರಲಿ, ಅದರ ಜನವಿರೋಧಿ ನಡೆಯನ್ನು ಟೀಕಿಸುವ, ತಿದ್ದುವ, ತೀಡುವ ಹಕ್ಕನ್ನು ಈ ದೇಶದ ಪ್ರಜಾತಂತ್ರ ವ್ಯವಸ್ಥೆ, ಸಂವಿಧಾನ ಕಲ್ಪಿಸಿದೆ. ಆದರೆ ಸರಕಾರಗಳು ತಮಗಿರುವ ಅಧಿಕಾರ ದುರ್ಬಳಕೆ ಮಾಡಿಕೊಂಡು, ಪೊಲೀಸ್ ಬಲದ ಮೂಲಕ ಸಾಹಿತಿಗಳು, ಬುದ್ಧಿಜೀವಿಗಳು, ಪ್ರಜ್ಞಾವಂತರ ಧ್ವನಿ ಅಡಗಿಸಲು ಹೊರಟಿರುವುದು ಖಂಡನೀಯ. ಸರಕಾರ ತನ್ನ ಈ ವಕ್ರನಡೆಯನ್ನು ತಿದ್ದಿಕೊಳ್ಳದಿದ್ದರೆ ಹೋರಾಟ ನಡೆಸಬೇಕಾಗುತ್ತದೆ” ಎಂದು ಡಿ.ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ಬಹುಜನ ಭಾರತ: ಹೆಣ್ಣುಮಕ್ಕಳು ರೈತರಲ್ಲವೇ? ಸುಪ್ರೀಮ್ ಕೋರ್ಟು ತಿಳಿಯಲೊಲ್ಲದೇ?

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here