Homeಕ್ರೀಡೆಒಲಂಪಿಕ್ಚಿನ್ನ ಗೆದ್ದ ನೀರಜ್‌ ಅವರ ಕೋಚ್‌ಗೆ 10 ಲಕ್ಷ ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ

ಚಿನ್ನ ಗೆದ್ದ ನೀರಜ್‌ ಅವರ ಕೋಚ್‌ಗೆ 10 ಲಕ್ಷ ಬಹುಮಾನ ಘೋಷಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌‌ ಕ್ರೀಡಾಕೂಟ ಇಂದು ಮುಕ್ತಾಯಗೊಂಡಿದ್ದು, ಸಮಾರೋಪ ಸಮಾರಂಭ ನಡೆಯುತ್ತಿದೆ. ಒಲಂಪಿಕ್ಸ್​ನಲ್ಲಿ ಜಾವೆಲಿನ್‌ ಎಸೆತದ ಚಾಂಪಿಯನ್‌ ನೀರಜ್‌ ಚೋಪ್ರಾ ಭಾರತಕ್ಕೆ ಏಕೈಕ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಅವರ ಸಾಧನೆಗೆ ಅಭಿನಂಧನೆಗಳ ಮಹಾಪೂರವೇ ಹರಿದು ಬಂದಿದೆ. ಈ ಮಧ್ಯೆ, ನೀರಾಜ್‌ಗೆ ತರಬೇತಿ ನೀಡಿದ್ದ ಕರ್ನಾಟಕದ ಕೋಚ್‌ ಶಿರಸಿಯ ಕಾಶಿನಾಥ್‌ ನಾಯ್ಕ್‌ ಅವರಿಗೆ ಕರ್ನಾಟಕ ಸರ್ಕಾರ 10 ಲಕ್ಷ ರೂ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ.

ಒಲಿಂಪಿಕ್ಸ್‌ನ ಜಾವೆಲಿನ್‌ ಎಸೆದಲ್ಲಿ ಚಿನ್ನ ಗೆದ್ದ ನೀರಜ್‌ಗೆ ತರಬೇತಿ ನೀಡಿದ್ದ ಕಾಶಿನಾಥ್ ನಾಯ್ಕ್ ಅವರು 2010 ರ ಕಾಮನ್​ವೇಲ್ತ್​​ ಕ್ರೀಡಾಕೂಟದಲ್ಲಿ ಜಾವೆಲಿನ್‌ ಎಸೆತದಲ್ಲಿ ಕಂಚಿನ ಪದಕ‌ಗಳಿಸಿದ್ದರು.

ಇದನ್ನೂ ಓದಿ: ಒಲಿಂಪಿಕ್ಸ್ ಪದಕ ಗೆಲುವಿಗೆ ನಾಂದಿ ಹಾಡಿದ ನಾರಿಯರು

ಕ್ರೀಡಾ ಸಾಧಕ ಕಾಶಿನಾಥ್ ಗರಡಿಯಲ್ಲಿ ಪಳಗಿದ್ದ ನೀರಜ್ ಚೋಪ್ರಾ ಸ್ವರ್ಣ ಪದಕ ಗಳಿಸಿ ದೇಶದ ಗೌರವವನ್ನು ಹೆಚ್ಚಿಸಿದ್ದಾರೆ. ಈ ಸಾಧನೆಗಾಗಿ ಕೋಚ್‌ ಕಾಶಿನಾಥ್ ನಾಯ್ಕ್ ಅವರಿಗೆ 10 ಲಕ್ಷ ರೂ ನಗದು ಬಹುಮಾನ ಘೋಷಿಸಿದ್ದಾರೆ.

ಟೋಕಿಯೊ ಓಲಂಪಿಕ್ಸ್‌ನಲ್ಲಿ ಅಮೋಘ ಸಾಧನೆಗೈದ ಭಾರತದ 7 ಕ್ರೀಡಾಪಟುಗಳನ್ನು ರಾಜ್ಯ ಸರ್ಕಾರದ ವತಿಯಿಂದ ಸನ್ಮಾನಿಸಲಾಗುವುದು. ಅಲ್ಲದೆ, ಟೋಕಿಯೊ ಓಲಂಪಿಕ್ಸ್‌ನಲ್ಲಿ ಮೂವರು ಕನ್ನಡಿಗರು ಪಾಲ್ಗೊಂಡು ಉತ್ತಮ ಸಾಧನೆ ತೋರಿದ್ದಾರೆ. ಪದಕ ಗಳಿಸಿದ ಕ್ರೀಡಾ ಸಾಧಕರನ್ನು ಗೌರವಿಸಿದಂತೆಯೆ ರಾಜ್ಯದ ಹೆಮ್ಮೆಯ ಕ್ರೀಡಾಪಟುಗಳಾದ ಅಶೋಕ್, ಶ್ರೀಹರಿ ನಟರಾಜ್, ಫೌವಾದ್ ಮಿರ್ಜಾ ಅವರನ್ನೂ ಸನ್ಮಾನಿಸಲಾಗುವುದು‌ ಎಂದು ಕ್ರೀಡಾ ಸಚಿವ ನಾರಾಯಣ ಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ...

0
ಲೋಕಸಭೆ ಚುನಾವಣೆ ಹೊಸ್ತಿಲ್ಲಲ್ಲಿ ನೌಕಾಪಡೆಯ ಮಾಜಿ ಮುಖ್ಯಸ್ಥ ಅಡ್ಮಿರಲ್ ರಾಮ್‌ದಾಸ್ ಅವರ ಕೊನೆಯ ಕಾಲದ ಸಂದೇಶವನ್ನು ಅವರ ಪತ್ನಿ ಲಲಿತಾ ರಾಮದಾಸ್‌ ಸಾರ್ವಜನಿಕರ ಮುಂದಿಟ್ಟಿದ್ದು, ದ್ವೇಷಿಸುವ, ವಿಭಜನೀಯ, ಸರ್ವಾಧಿಕಾರಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು ಎಂದು...