Homeಕರ್ನಾಟಕರಾಜ್ಯ ಸರ್ಕಾರ ಈ ಬಾರಿ 'ಎಸ್‌ಸಿಪಿ-ಟಿಎಸ್‌ಪಿ'ಗೆ ₹42,018 ಕೋಟಿ ಒದಗಿಸಿದೆ: ಸಿಎಂ ಸಿದ್ದರಾಮಯ್ಯ

ರಾಜ್ಯ ಸರ್ಕಾರ ಈ ಬಾರಿ ‘ಎಸ್‌ಸಿಪಿ-ಟಿಎಸ್‌ಪಿ’ಗೆ ₹42,018 ಕೋಟಿ ಒದಗಿಸಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಗಾಗಿ ನಮ್ಮ ಸರ್ಕಾರ ಈ ಬಾರಿ 42,018 ಕೋಟಿ ರೂಪಾಯಿಗಳನ್ನು ಒದಗಿಸಿದೆ. ನಾವು ಪರಿಶಿಷ್ಟ ಸಮುದಾಯಗಳ ಏಳಿಗೆಯನ್ನು ಪ್ರಾಮಾಣಿಕವಾಗಿ ಬಯಸುವವರು. ನಮ್ಮ ಕಾಳಜಿ ಕೇವಲ ಬಾಯಿ ಮಾತಿನದಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, 2020-21ರಿಂದ 2022-23 ರವರೆಗೆ 3 ವರ್ಷಗಳ ಅವಧಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರ ಎಸ್‌ಸಿಪಿ ಮತ್ತು ಟಿಎಸ್‌ಪಿಗಾಗಿ 80,415 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಆದರೆ, ನಾವು 2023 ರಿಂದ ಈಗ ಮಂಡಿಸಿರುವ ಬಜೆಟ್‌ವರೆಗೆ 1,15,509 ಕೋಟಿ ರೂಪಾಯಿಗಳನ್ನು ಒದಗಿಸಿದ್ದೇವೆ. ಬಿಜೆಪಿಯ 3 ವರ್ಷಗಳಿಗೆ ಹೋಲಿಸಿದರೆ ನಾವು 35,094 ಕೋಟಿ ರೂಪಾಯಿಗಳನ್ನು ಹೆಚ್ಚಿಗೆ ಒದಗಿಸಿದ್ದೇವೆ. ಶೇ.43.64 ರಷ್ಟು ಹೆಚ್ಚಿನ ಅನುದಾನವನ್ನು ಒದಗಿಸಿದಂತಾಗುತ್ತದೆ. ಒಟ್ಟಾರೆ ಸಮಾಜ ಕಲ್ಯಾಣ ಇಲಾಖೆಗೆ ಶೇ.52.5 ರಷ್ಟು ಹೆಚ್ಚು ಅನುದಾನವನ್ನು ಕೊಟ್ಟಿದ್ದೇವೆ ಎಂದು ವಿವರಿಸಿದರು.

ವಿರೋಧ ಪಕ್ಷದ ನಾಯಕರು ಪ್ರಾಜೆಕ್ಟ್ ಟೈಗರ್ ಮತ್ತು ಪ್ರಾಜೆಕ್ಟ್ ಎಲಿಫೆಂಟ್ ಯೋಜನೆಗೂ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಹಣವನ್ನು ವಿನಿಯೋಗಿಸಲಾಗಿದೆ ಎಂದಿದ್ದಾರೆ. ಆದರೆ, ಇದು ಕೇಂದ್ರ ಸರ್ಕಾರದ ಸಮಸ್ಯೆ. ಕೇಂದ್ರ ಸರ್ಕಾರ ರೂಪಿಸಿರುವ ಕೇಂದ್ರ ಪುರಸ್ಕೃತ ಯೋಜನೆಗೆ ಮ್ಯಾಚಿಂಗ್ ಗ್ರಾಂಟ್ ಒದಗಿಸಿದ್ದೇವೆ ಅಷ್ಟೇ ಎಂದರು.

“ನಮ್ಮದು ಮುಸ್ಲಿಂ ಬಜೆಟ್ ಅಲ್ಲ, ಸರ್ವೋದಯದ ಬಜೆಟ್”

ನಾವು ಬಜೆಟ್‌ ಪುಸ್ತಕದಲ್ಲಿ ಹೇಳಿದ್ದೆವು, ನಮ್ಮ ಉದ್ದೇಶ ಸಮಾಜವನ್ನು ಸೋಷಿಯಲ್ ಡಾರ್ವಿನಿಸಂ ಕಡೆಗೆ ತೆಗೆದುಕೊಂಡು ಹೋಗುವುದಲ್ಲ. ಸಂವಿಧಾನದ ಕಡೆಗೆ ಮುನ್ನಡೆಸುವುದು. ಮನುವಾದವು ಸೋಷಿಯಲ್ ಡಾರ್ವಿನಿಸಮ್ಮನ್ನು ಹೇಳುತ್ತದೆ. ಇದು ಮನುಷ್ಯ ಸಮಾಜಕ್ಕೂ ಅನ್ವಯವಾದರೆ ದಮನಿತ ಸಮುದಾಯಗಳು ಮತ್ತು ಮಹಿಳೆಯರು ಬದುಕುವುದು ಹೇಗೆ? ಈ ವರ್ಗಗಳಿಗೆ ನ್ಯಾಯ ಕೊಡುವುದು ಸಂವಿಧಾನ ಮಾತ್ರ ಎಂದು ಸಿಎಂ ಹೇಳಿದರು.

ನಾವು ಸಂವಿಧಾನದ ಆಶಯಗಳ ಹಾದಿಯಲ್ಲಿ ಮುನ್ನಡೆಯುತ್ತಿದ್ದೇವೆ. ಹಾಗಾಗಿ ನಾವು ಸರ್ವೋದಯವಾಗಲಿ ಸರ್ವರಲಿ ಎಂಬುದನ್ನು ಮಾತಿಗೋಸ್ಕರ ಬಳಸುವುದಿಲ್ಲ. ಬದಲಾಗಿ ಅದನ್ನು ನಮ್ಮ ಸಿದ್ಧಾಂತವಾಗಿಸಿಕೊಂಡು ಕೆಲಸ ಮಾಡುತ್ತಿದ್ದೇವೆ. ನಮ್ಮದು ಮುಸ್ಲಿಂ ಬಜೆಟ್ ಅಲ್ಲ, ಸರ್ವೋದಯದ ಬಜೆಟ್ ಎಂದು ಎಂದರು.

ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ

2025-26ನೇ ಸಾಲಿನಲ್ಲಿ 4,09,549 ಕೋಟಿ ರೂ. ಗಾತ್ರದ ಬಜೆಟ್ಟನ್ನು ನಾನು ಮಂಡಿಸಿದ್ದೇನೆ. 2024-25ನೇ ಸಾಲಿನ ಆಯವ್ಯಯಕ್ಕೆ ಹೋಲಿಸಿದರೆ 2025-26ನೇ ಸಾಲಿನಲ್ಲಿ ನಮ್ಮ ರಾಜ್ಯದ ಬಜೆಟ್ ಗಾತ್ರ ಶೇ.10.3 ರಷ್ಟು ಹೆಚ್ಚಿನ ಬೆಳವಣಿಗೆ ಕಂಡಿದೆ. ಜನಸಂಖ್ಯೆಯ ಗಾತ್ರದಲ್ಲಿ ಕರ್ನಾಟಕವು 8ನೇ ಸ್ಥಾನದಲ್ಲಿದೆ. ತೆರಿಗೆ ಸಂಗ್ರಹಿಸಿಕೊಡುವ ವಿಚಾರದಲ್ಲಿ ಕರ್ನಾಟಕವು 2ನೇ ಸ್ಥಾನದಲ್ಲಿದೆ. ಜಿಎಸ್‌ಡಿಪಿಯಲ್ಲಿ ಕರ್ನಾಟಕವು ಮಹಾರಾಷ್ಟ್ರ ತಮಿಳುನಾಡಿನ ನಂತರ 3ನೇ ಸ್ಥಾನದಲ್ಲಿದೆ. ಆದರೆ, 2025-26ನೇ ಸಾಲಿನ ನಮ್ಮ ಬಜೆಟ್ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡಿನ ನಂತರ 5ನೇ ದೊಡ್ಡ ಬಜೆಟ್ ಎಂದು ಸಿಎಂ ಹೇಳಿದರು.

ಇದೇ ಸಂದರ್ಭದಲ್ಲಿ, 2025-26ನೇ ಸಾಲಿಗೆ ಸಂಬಂಧಿಸಿದಂತೆ ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಗಾತ್ರ 50.65 ಲಕ್ಷ ಕೋಟಿ ರೂ. 2024-25 ರಲ್ಲಿ 48.21 ಲಕ್ಷ ಕೋಟಿ ರೂ.ಗಳಷ್ಟಿತ್ತು. ಕೇಂದ್ರದ ಬಜೆಟ್ ಬೆಳವಣಿಗೆ ಶೇ. 5.06 ರಷ್ಟು ಮಾತ್ರ. ಇದರಲ್ಲಿ ಹಣದುಬ್ಬರವನ್ನು ಕಳೆದರೆ, ಕೇಂದ್ರದ ಬಜೆಟ್ಟಿನ ಗಾತ್ರ ನಕಾರಾತ್ಮಕವಾಗುತ್ತದೆ ಎಂದರು.

‘ದ್ವೇಷ ರಾಜಕಾರಣ’ ಕುಮಾರಸ್ವಾಮಿ ಅವರ ಡಿಎನ್‌ಎಯಲ್ಲೆ ಇದೆ: ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...