Homeಕರ್ನಾಟಕರೈತರ ಮರಣ ಶಾಸನ ಬರೆಯಲು ಕಳ್ಳದಾರಿ ಹಿಡಿದ ರಾಜ್ಯ ಸರ್ಕಾರ: ಸಿದ್ದರಾಮಯ್ಯ

ರೈತರ ಮರಣ ಶಾಸನ ಬರೆಯಲು ಕಳ್ಳದಾರಿ ಹಿಡಿದ ರಾಜ್ಯ ಸರ್ಕಾರ: ಸಿದ್ದರಾಮಯ್ಯ

ಈ ತಿದ್ದುಪಡಿ ಮೂಲಕ ಬಿಎಸ್ವೈ ಸರ್ಕಾರ ಇಡೀ ರೈತ ಸಮುದಾಯವನ್ನು ನಾಶ ಮಾಡಲು ಹೊರಟಿದೆ. ಭವಿಷ್ಯದಲ್ಲಿ ಎಲ್ಲಾ ರೈತರು ಕಾರ್ಪೋರೆಟ್ ಸಂಸ್ಥೆಗಳ ಬಾಗಿಲು ಕಾಯಬೇಕಾದ ಸ್ಥಿತಿ ಬರುತ್ತೆ. ಬಂಡಾವಳಶಾಹಿಗಳು ಭೂಮಿ ತಗೊಂಡು ರಿಯಲ್ ಎಸ್ಟೇಟ್ ಮಾಡ್ತಾರೆ. ಆನಂತರ ಆಹಾರ ಉತ್ಪಾದನೆ ಎಲ್ಲಿ ಆಗುತ್ತೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -
- Advertisement -

ಭೂ ಸುಧಾರಣಾ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ರಾಜ್ಯ ಸರ್ಕಾರ ತಿದ್ದುಪಡಿ ತಂದಿರುವುದು ಕರ್ನಾಟಕದ ಇತಿಹಾಸದಲ್ಲಿ ಕರಾಳದಿನವಾಗಿ ಉಳಿಯಲಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂ ಸುಧಾಕರಣಾ ಕಾಯ್ದೆಗೆ ರಾಜ್ಯ ಸರ್ಕಾರ ಕಳೆದ ಹಲವು ದಿನಗಳಿಂದ ತಿದ್ದುಪಡಿ ತರಲು ಪ್ರಯತ್ನಿಸುತ್ತಿದೆ. ಆದರೆ ವಿರೋಧ ಪಕ್ಷಗಳು, ರೈತರು ಈ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸುತ್ತಲೇ ಇದ್ದಾರೆ. ಆದರೆ, ತೀವ್ರ ವಿರೋಧದ ನಡುವೆಯೂ ಕೊರೋನಾ ಲಾಕ್‌ಡೌನ್ ಸಂದರ್ಭವನ್ನು ಬಳಸಿಕೊಂಡು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ “ಕರ್ನಾಟಕ ಭೂ ಸುಧಾರಣಾ ಕಾಯ್ದೆ”ಗೆ ತಿದ್ದುಪಡಿ ತಂದಿರುವುದು ಸರಿಯಲ್ಲ ಎಂದು ಟೀಕಿಸಿದ್ದಾರೆ.

“ರೈತರ ಮರಣ ಶಾಸನ ಬರೆಯಲು ರಾಜ್ಯ ಸರ್ಕಾರ ಲಾಕ್‌ಡೌನ್ ಸಮಯ ಉಪಯೋಗಯೋಗಿಸಿಕೊಂಡಿದೆ. ಕೊರೋನಾದಂತಹ ಸಂಕಷ್ಟದ ಸಂದರ್ಭದಲ್ಲಿ ಸುಗ್ರೀವಾಜ್ಞೆ ತರುವ ಅಗತ್ಯತೆ ಏನಿತ್ತು? ಕೊರೋನಾ ಸೋಂಕು ಪೀಡಿತ ದೇಶಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನ, ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ. ಕೊರೊನಾ ವಿರುದ್ಧ ಹೋರಾಡುವುದನ್ನು ಬಿಟ್ಟು ರಾಜ್ಯ ಸರ್ಕಾರ ಕಳ್ಳದಾರಿಯಲ್ಲಿ ಹೊರಟಿದೆ” ಎಂದು ಸಿದ್ದು ಆರೋಪಿಸಿದ್ದಾರೆ.

“ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಯಲ್ಲಿ ಸೆಕ್ಷನ್ 63ಕ್ಕೆ ತಿದ್ದುಪಡಿ ತಂದು ಒಂದು ಕುಟುಂಬಕ್ಕೆ ಇದ್ದ ಮಾರುವ ಮಿತಿಯನ್ನು 118 ಎಕರೆ ಮಿತಿಯನ್ನು 436 ಎಕರೆಗೆ ಏರಿಸಿದ್ದಾರೆ. 436 ಎಕರೆ ಜಮೀನು ಯಾರು ತೆಗೆದುಕೊಳ್ತಾರೆ? ರೈತರು ಅಷ್ಟು ಜಮೀನು ತೆಗೆದುಕೊಳ್ತಾರಾ..? ಬಂಡವಾಳಶಾಹಿಗಳಿಗೆ ಅನುಕೂಲವಾಗಲೇಂದೆ ಈ ತಿದ್ದುಪಡಿ ತರಲಾಗಿದೆ ಎಂದು ಟೀಕಿಸಿದ್ದಾರೆ.

ಈ ತಿದ್ದುಪಡಿ ಮೂಲಕ ಬಿಎಸ್ವೈ ಸರ್ಕಾರ ಇಡೀ ರೈತ ಸಮುದಾಯವನ್ನು ನಾಶ ಮಾಡಲು ಹೊರಟಿದೆ. ಭವಿಷ್ಯದಲ್ಲಿ ಎಲ್ಲಾ ರೈತರು ಕಾರ್ಪೋರೆಟ್ ಸಂಸ್ಥೆಗಳ ಬಾಗಿಲು ಕಾಯಬೇಕಾದ ಸ್ಥಿತಿ ಬರುತ್ತೆ. ಬಂಡಾವಳಶಾಹಿಗಳು ಭೂಮಿ ತಗೊಂಡು ರಿಯಲ್ ಎಸ್ಟೇಟ್ ಮಾಡ್ತಾರೆ. ಆನಂತರ ಆಹಾರ ಉತ್ಪಾದನೆ ಎಲ್ಲಿ ಆಗುತ್ತೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ದೇವರಾಜ ಅರಸು 1974 ರಲ್ಲಿ ಇಡೀ ದೇಶಕ್ಕೆ ಮಾದರಿ ಆಗುವಂತಹ ಕಾಯ್ದೆಯನ್ನು ಜಾರಿಗೊಳಿಸಿದ್ದರು. ದೂರದೃಷ್ಟಿಯ ಅವರ ನಾಯಕತ್ವಕ್ಕೆ ಇಡೀ ದೇಶವೇ ಮೆಚ್ಚುಗೆ ಸೂಚಿಸಿತ್ತು. ಆದರೆ, ಬಿಎಸ್‌ವೈ ಸರ್ಕಾರ ರೈತರ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಭವಿಷ್ಯದಲ್ಲಿ ಕೃಷಿ ಭೂಮಿಗಳು ಕಾರ್ಪೋರೇಟ್ ಸಂಸ್ಥೆಗಳ ಪಾಲಾಗುವಂತೆ ಮಾಡಿದ್ದಾರೆ. ಅವರ ಈ ಕೆಲಸವನ್ನು ರೈತರು ಎಂದೂ ಕ್ಷಮಿಸಲಾರರು” ಎಂದು ಸಿದ್ದು ಹೇಳಿದ್ದಾರೆ.

“ಗಣಿ ಅಕ್ರಮದ ಕುರಿತು ಕಾಂಗ್ರೆಸ್‌ ಹೋರಾಟ ರೂಪಿಸಿದ ರೀತಿಯಲ್ಲೇ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರುದ್ಧವೂ ಹೋರಾಟ ನಡೆಸಲು ಚಿಂತನೆ ನಡೆಸಲಾಗಿದೆ. ರಾಜ್ಯದ ಪ್ರತಿ ಹಳ್ಳಿ ಹಳ್ಳಿಯಿಂದಲೂ ರೈತರನ್ನು ಒಗ್ಗೂಡಿಸಿ ಹೋರಾಟವನ್ನು ರೂಪಿಸಲಾಗುವುದು” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.


ಇದನ್ನೂ ಓದಿ: ಹೊಂಬಾಳೆ-1: ದೇಶದ ಅನ್ನದ ಬಟ್ಟಲನ್ನೇ ಮಾರಲು ಹೊರಟರೆ ಕೊನೆಗೆ ಏನು ಉಳಿದೀತು? 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...