Homeಕರ್ನಾಟಕಕೆಲಸದ ಅವಧಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರ: ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ

ಕೆಲಸದ ಅವಧಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರ: ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ

- Advertisement -
- Advertisement -

ಕರ್ನಾಟಕ ಸರ್ಕಾರವು 1961ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ, ದೈನಂದಿನ ಕೆಲಸದ ಅವಧಿಯನ್ನು ಪ್ರಸ್ತುತ ಇರುವ 9 ಗಂಟೆಗಳಿಂದ 10 ಗಂಟೆಗಳಿಗೆ ಹೆಚ್ಚಿಸಲು ಮತ್ತು ಹೆಚ್ಚಿನ ಅಧಿಕಾವದಿ ಕೆಲಸದ ಸಮಯವನ್ನು (More overtime hours) ಅನುಮತಿಸಲು ಮುಂದಾಗಿದೆ.

ಏನಿದು ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961?

ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961 ರಾಜ್ಯದ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸದ ಅವಧಿ ಮತ್ತು ಕಾರ್ಮಿಕ ಪರಿಸ್ಥಿತಿಗಳನ್ನು ನಿಯಂತ್ರಿಸುವ ಕಾನೂನಾಗಿದೆ. ಇದು ನೌಕರರು ಎಷ್ಟು ಸಮಯ ಕೆಲಸ ಮಾಡಬಹುದು, ಅಧಿಕಾವಧಿ ಕೆಲಸ, ದಾಖಲೆಗಳ ನಿರ್ವಹಣೆ ಮತ್ತು ನಿಯಮಗಳ ಪಾಲನೆಗೆ ಕಾನೂನು ಚೌಕಟ್ಟನ್ನು ನಿಗದಿಪಡಿಸುತ್ತದೆ.

ಹೊಸ ತಿದ್ದುಪಡಿಯ ಉದ್ದೇಶವೇನು?

ಹೊಸ ತಿದ್ದುಪಡಿಯು ದಾಖಲೆ ನಿರ್ವಹಣೆ ಮತ್ತು ಪ್ರಮಾಣೀಕರಣದಂತಹ ಕಾರ್ಯವಿಧಾನಗಳನ್ನು ಸರಳಗೊಳಿಸುವ ಗುರಿಯನ್ನು ಹೊಂದಿದೆ. ವಿಶೇಷವಾಗಿ ಸಣ್ಣ ಸಂಸ್ಥೆಗಳಿಗೆ. ಈ ಕ್ರಮವು ವ್ಯವಹಾರ ಮಾಡುವ ಸುಲಭತೆಯನ್ನು ಹೆಚ್ಚಿಸುತ್ತದೆ. ಈಗಾಗಲೇ ಚಾಲ್ತಿಯಲ್ಲಿರುವ ಕೆಲಸದ ಸಮಯದ ಮಾದರಿಗಳನ್ನು ಕಾನೂನುಬದ್ಧಗೊಳಿಸುತ್ತದೆ ಎಂದು ಹೇಳಲಾಗುತ್ತಿದೆ.

ಕೆಲಸದ ಸಮಯವನ್ನು ದಿನಕ್ಕೆ 10 ಗಂಟೆಗಳಿಗೆ ಮತ್ತು ವಾರಕ್ಕೆ 48 ಗಂಟೆಗಳವರೆಗೆ ಹೆಚ್ಚಿಸುವುದು. ಓವರ್‌ಟೈಮ್ ಸೇರಿದಂತೆ ಒಟ್ಟು ಕೆಲಸದ ಅವಧಿಯನ್ನು ದಿನಕ್ಕೆ 12 ಗಂಟೆಗಳಿಗಿಂತ ನಿಗದಿಗೊಳಿಸುವುದು ತಿದ್ದುಪಡಿಯ ಪ್ರಮುಖ ಉದ್ದೇಶವಾಗಿದೆ.

ಒಬ್ಬ ಉದ್ಯೋಗಿ ಮೂರು ತಿಂಗಳ ನಿರಂತರ ಅವಧಿಯಲ್ಲಿ 144 ಗಂಟೆಗಳ ಕಾಲ ಅಧಿಕಾವಧಿ ಕೆಲಸ ಮಾಡಬಹುದು. ಪ್ರಸ್ತುತ ಇದು 50 ಗಂಟೆಗಳ ಅವಧಿಯನ್ನು ಹೊಂದಿದೆ. ಆದರೆ, 10 ಕ್ಕಿಂತ ಕಡಿಮೆ ಉದ್ಯೋಗಿಗಳನ್ನು ಹೊಂದಿರುವ ಸಂಸ್ಥೆಗಳು ಈ ಕಾಯ್ದೆಯಿಂದ ವಿನಾಯಿತಿ ಪಡೆಯಲಿವೆ.

ತಿದ್ದುಪಡಿಯಿಂದ ಯಾರಿಗೆ ಲಾಭ?

ಪ್ರಸ್ತಾವಿತ ತಿದ್ದುಪಡಿಯ ಅತಿದೊಡ್ಡ ಫಲಾನುಭವಿಗಳು ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ-ಸಕ್ರಿಯಗೊಳಿಸಿದ ಸೇವೆಗಳು (ಐಟಿ ಮತ್ತು ಐಟಿಇಎಸ್) ವಲಯದ ಕಂಪನಿಗಳಾಗಿರುತ್ತವೆ.

ಇವುಗಳಲ್ಲಿ ಸಾಫ್ಟ್‌ವೇರ್ ಸರ್ವಿಸ್, ಬ್ಯಾಕೆಂಡ್ ಐಟಿ ಆಪರೇಷನ್ಸ್, ಹಾರ್ಡ್‌ವೇರ್ ಸೇಲ್ಸ್ ಮತ್ತು ಅಂತಹುದೇ ಸೇವೆಗಳನ್ನು ನೀಡುವ ವ್ಯವಹಾರಗಳು ಸೇರಿವೆ. ಈ ಕಂಪನಿಗಳು ಕೆಲಸದ ಸಮಯದ ಔಪಚಾರಿಕ ವಿಸ್ತರಣೆ ಮತ್ತು ನಿಯಮಗಳ ಅನುಸರಣೆ ಹೊರೆಗಳನ್ನು ಸರಾಗಗೊಳಿಸುವುದರಿಂದ ಪ್ರಯೋಜನ ಪಡೆಯುವ ನಿರೀಕ್ಷೆಯಿದೆ.

ಬೇರೆ ಯಾವ ರಾಜ್ಯಗಳು 10 ಗಂಟೆಗಳ ಕೆಲಸದ ಅವಧಿಯನ್ನು ಹೊಂದಿವೆ?

2019 ಮತ್ತು 2020ರಲ್ಲಿ ಕೇಂದ್ರ ಸರ್ಕಾರವು ಕೆಲಸದ ಅವಧಿಯನ್ನು ಹೆಚ್ಚಿಸಲು ಅವಕಾಶ ನೀಡುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಅಂಗೀಕರಿಸಿದ ನಂತರ, ಬಿಜೆಪಿ ಆಡಳಿತವಿರುವ ಛತ್ತೀಸ್‌ಗಢ, ಗುಜರಾತ್, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳು ಶಾಸನಗಳನ್ನು ಅಂಗೀಕರಿಸಿವೆ. ಇತ್ತೀಚೆಗೆ, ಆಂಧ್ರಪ್ರದೇಶ ಸಚಿವ ಸಂಪುಟವು ದೈನಂದಿನ ಕೆಲಸದ ಸಮಯವನ್ನು 10 ಗಂಟೆಗಳಿಗೆ ಹೆಚ್ಚಿಸಲು ಅನುಮೋದನೆ ನೀಡಿದೆ.

ಕಳವಳಗಳೇನು?

ಕಾನೂನಿಗೆ ತಿದ್ದುಪಡಿ ತರುವುದರಿಂದ, ಈಗ ಏನು ಕಾನೂನಿನ ಉಲ್ಲಂಘನೆಗಳು ಆಗುತ್ತಿವೆಯೂ ಅವುಗಳನ್ನು ಕಾನೂನುಬದ್ದಗೊಳಿಸದಂತೆ ಆಗುತ್ತದೆ. ಕಾರ್ಮಿಕ ಇಲಾಖೆಯಲ್ಲಿನ ಕಳಪೆ ಜಾರಿ ಕಾರ್ಯವಿಧಾನಗಳು ಮತ್ತು ಸಿಬ್ಬಂದಿ ಕೊರತೆಯಿಂದಾಗಿ ವೇತನ ಕಳ್ಳತನ ಸೇರಿದಂತೆ ಕಾರ್ಮಿಕರ ಶೋಷಣೆಗೆ ಕಾರಣವಾಗಬಹುದು ಎಂದು ಕಾರ್ಮಿಕ ಸಂಘಗಳು ವಾದಿಸುತ್ತಿವೆ.

ಹೆಚ್ಚಿದ ಕೆಲಸದ ಸಮಯಕ್ಕೆ ಅನುಗುಣವಾಗಿ ವೇತನವನ್ನು ಹೆಚ್ಚಿಸುವ ಬಗ್ಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿ ಸ್ಪಷ್ಟತೆ ಇಲ್ಲ ಎಂದು ಹೇಳಿವೆ.

ಕೆಐಟಿಯು ತೀವ್ರ ವಿರೋಧ

ಕೆಲಸ ಅವಧಿಯನ್ನು ಹೆಚ್ಚಿಸುವುದು ಸೇರಿದಂತೆ ಉದ್ಯೋಗಿಗಳು/ ಕಾರ್ಮಿಕರನ್ನು ಶೋಷಣೆ ಮಾಡಲು ಅನುವು ಮಾಡಿಕೊಡುವ ಪ್ರಸ್ತಾವಿತ ತಿದ್ದುಪಡಿಯನ್ನು ಕರ್ನಾಟಕ ರಾಜ್ಯ ಐಟಿ ಮತ್ತು ಐಟಿಇಎಸ್ ನೌಕರರ ಸಂಘ (ಕೆಐಟಿಯು) ತೀವ್ರವಾಗಿ ವಿರೋಧಿಸಿದೆ.

ಕೇಂದ್ರ ಸರ್ಕಾರ ಕೆಲಸದ ಅವಧಿಯನ್ನು ಹೆಚ್ಚಿಸಲು ಕಾನೂನಿಗೆ ತಿದ್ದುಪಡಿ ತಂದಾಗಿನಿಂದಲೂ ಕೆಐಟಿಯು ಅದನ್ನು ವಿರೋಧಿಸಿಕೊಂಡು ಬಂದಿತ್ತು. ಇದೀಗ ಕರ್ನಾಟಕ ಸರ್ಕಾರ ಕಾನೂನಿಗೆ ತಿದ್ದುಪಡಲು ಮುಂದಾಗಿರುವ ಹಿನ್ನೆಲೆ, ಕೆಐಟಿಯು ಹೇಳಿಕೆ ಬಿಡುಗಡೆ ಮಾಡಿದೆ. ಅದು ಹೀಗಿದೆ…

“ಕರ್ನಾಟಕ ರಾಜ್ಯ ಐಟಿ/ಐಟಿಇಎಸ್/ಬಿಪಿಒ ವಲಯದಲ್ಲಿ ಕೆಲಸದ ಸಮಯವನ್ನು ದಿನಕ್ಕೆ 12 ಗಂಟೆಗೆ ಹೆಚ್ಚಿಸುವ ಕರ್ನಾಟಕ ಸರ್ಕಾರದ ಕ್ರಮವನ್ನು ವಿರೋಧಿಸಲು ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ (ಕೆಐಟಿಯು) ಇಡೀ ಕಾರ್ಮಿಕ ವರ್ಗಕ್ಕೆ ಕರೆ ನೀಡಿದೆ.

“12ಗಂಟೆಗಳಿಗೆ ಕೆಲಸದ ಅವಧಿಯನ್ನು ಹೆಚ್ಚಿಸಲು ಅನುವು ಮಾಡಿಕೊಡುವ ಸಲುವಾಗಿ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಯನ್ನು ತಿದ್ದುಪಡಿ ಮಾಡುವ ಪ್ರಸ್ತಾವನೆಯನ್ನು ಜೂನ್ 18 ರಂದು ಕಾರ್ಮಿಕ ಇಲಾಖೆಯು ಉದ್ಯಮದ ವಿವಿಧ ಪಾಲುದಾರರೊಂದಿಗೆ ನಡೆಸಿದ ಸಭೆಯಲ್ಲಿ ಮಂಡಿಸಲಾಗಿದೆ.”

“ಕಾರ್ಮಿಕ ಕಾರ್ಯದರ್ಶಿ ಮತ್ತು ಕಾರ್ಮಿಕ ಇಲಾಖೆಯ ಇತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಐಟಿ/ಐಟಿಇಎಸ್‌ ವಲಯದ ಉದ್ಯೋಗಿಗಳನ್ನು ಪ್ರತಿನಿಧಿಸಿ, ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಸುಹಾಸ್ ಅಡಿಗ, ಅಧ್ಯಕ್ಷ ವಿಜೆಕೆ ಮತ್ತು ಕಾರ್ಯದರ್ಶಿ ಲೆನಿಲ್ ಬಾಬು ಸಭೆಯಲ್ಲಿ ಭಾಗವಹಿಸಿದ್ದರು. ಯಾವುದೇ ಕಾರ್ಮಿಕನ ವೈಯಕ್ತಿಕ ಜೀವನವನ್ನು ಹೊಂದುವ ಮೂಲಭೂತ ಹಕ್ಕಿನ ಮೇಲೆ ದಾಳಿ ಮಾಡುವ ಪ್ರಸ್ತಾವಿತ ತಿದ್ದುಪಡಿಗೆ ಕೆಐಟಿಯು ಪ್ರತಿನಿಧಿಗಳು ಬಲವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.”

“ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯು 12 ಗಂಟೆಗಳ ಕೆಲಸದ ಅವಧಿಯನ್ನು ಸಾಮಾನ್ಯೀಕರಿಸಲು ಪ್ರಯತ್ನಿಸುತ್ತದೆ. ಅಸ್ತಿತ್ವದಲ್ಲಿರುವ ಕಾಯ್ದೆಯು ಅಧಿಕಾವಧಿ ಸೇರಿದಂತೆ ದಿನಕ್ಕೆ ಗರಿಷ್ಠ 10 ಗಂಟೆಗಳ ಕೆಲಸವನ್ನು ಮಾತ್ರ ಅನುಮತಿಸುತ್ತದೆ.”

“ಈ ತಿದ್ದುಪಡಿಯು ಕಂಪನಿಗಳು ಪ್ರಸ್ತುತ ಅಸ್ತಿತ್ವದಲ್ಲಿರುವ ಮೂರು ಶಿಫ್ಟ್ ವ್ಯವಸ್ಥೆಯ ಬದಲಿಗೆ ಎರಡು ಶಿಫ್ಟ್ ವ್ಯವಸ್ಥೆ ಅಳವಡಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ ಮತ್ತು ಮೂರನೇ ಒಂದು ಭಾಗದಷ್ಟು ಉದ್ಯೋಗಿಗಳನ್ನು ಅವರ ಉದ್ಯೋಗದಿಂದ ಹೊರಹಾಕಲಾಗುತ್ತದೆ.”

“ಸಭೆಯಲ್ಲಿ ಕೆಐಟಿಯು ಐಟಿ ಉದ್ಯೋಗಿಗಳಲ್ಲಿ ಹೆಚ್ಚಿನ ಕೆಲಸದ ಅವಧಿಯಿಂದ ಆರೋಗ್ಯದ ಮೇಲಿನ ಪರಿಣಾಮದ ಅಧ್ಯಯನಗಳನ್ನು ಎತ್ತಿ ತೋರಿಸಿದೆ. ಕೆಲಸದ ಸ್ಥಳದಲ್ಲಿ ಮಾನಸಿಕ ಆರೋಗ್ಯದ ಕುರಿತಾದ ‘ರಾಜ್ಯ ಭಾವನಾತ್ಮಕ ಯೋಗಕ್ಷೇಮ ವರದಿ 2024’ ಭಾರತದಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ 90% ಕಾರ್ಪೊರೇಟ್ ಉದ್ಯೋಗಿಗಳು ಆತಂಕದಿಂದ ಹೋರಾಡುತ್ತಿದ್ದಾರೆ ಎಂದು ಬಹಿರಂಗಪಡಿಸಿದೆ.”

“ಐಟಿ ವಲಯದಲ್ಲಿ ಅತಿಯಾದ ಕೆಲಸದ ಒತ್ತಡದಿಂದಾಗಿ ಸಾವುಗಳು ಮತ್ತು ಆತ್ಮಹತ್ಯೆಗಳು ಸಾಮಾನ್ಯವಾಗುತ್ತಿವೆ. ಬೆಂಗಳೂರಿನಲ್ಲಿರುವ ಓಎಲ್ಎಯ ಕೃತಕ ಬುದ್ಧಿಮತ್ತೆ ಘಟಕದಲ್ಲಿ ಇತ್ತೀಚೆಗೆ ನಡೆದ ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರ ಆತ್ಮಹತ್ಯೆಯು ಈ ಪರಿಸ್ಥಿತಿಯನ್ನು ಒತ್ತಿಹೇಳುತ್ತದೆ. ಕೆಲಸದ ಸಮಯವನ್ನು ಹೆಚ್ಚಿಸುವುದರಿಂದ ಈ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ. ಕರ್ನಾಟಕ ಸರ್ಕಾರವು ತನ್ನ ಕಾರ್ಪೊರೇಟ್ ಮುಖ್ಯಸ್ಥರನ್ನು ಮೆಚ್ಚಿಸುವ ಉನ್ಮಾದಲ್ಲಿ ದುಡಿಯು ಜನರ ಮೂಲಭೂತ ಹಕ್ಕನ್ನು, ಬದುಕುವ ಹಕ್ಕನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿದೆ.”

“ಕರ್ನಾಟಕ ಸರ್ಕಾರದ ಈ ತಿದ್ದುಪಡಿಯು, ಕಾರ್ಮಿಕರನ್ನು ಬದುಕಲು ವೈಯಕ್ತಿಕ ಮತ್ತು ಸಾಮಾಜಿಕ ಜೀವನದ ಅಗತ್ಯವಿರುವ ಮನುಷ್ಯರೆಂದು ಗುರುತಿಸಲು ಇಚ್ಛಿಸುವುದಿಲ್ಲ ಎಂಬುದನ್ನು ತೋರಿಸುತ್ತದೆ. ಬದಲಾಗಿ, ಅದು ಅವರನ್ನು ತಾನು ಸೇವೆ ಸಲ್ಲಿಸುವ ಕಾರ್ಪೊರೇಟ್‌ಗಳ ಲಾಭವನ್ನು ಹೆಚ್ಚಿಸುವ ಯಂತ್ರಗಳಾಗಿ ಮಾತ್ರ ನೋಡುತ್ತಿದೆ.”

“ಹೆಚ್ಚಿದ ಕೆಲಸದ ಸಮಯ ಉತ್ಪಾದಕತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಜಗತ್ತು ಒಪ್ಪಿಕೊಳ್ಳಲು ಪ್ರಾರಂಭಿಸಿರುವ ಸಮಯದಲ್ಲಿ ಈ ತಿದ್ದುಪಡಿ ಬಂದಿದೆ. ಹೆಚ್ಚಿನ ದೇಶಗಳು ಸಂಪರ್ಕ ಕಡಿತಗೊಳಿಸುವ ಹಕ್ಕನ್ನು (right to disconnect) ಪ್ರತಿಯೊಬ್ಬ ಉದ್ಯೋಗಿಯ ಮೂಲಭೂತ ಹಕ್ಕಾಗಿ ಗುರುತಿಸಲು ಕಾನೂನನ್ನು ಪರಿಚಯಿಸುತ್ತಿವೆ.”

“2024 ರಲ್ಲಿಯೂ ಸಹ, ಕರ್ನಾಟಕ ಸರ್ಕಾರವು ಐಟಿ ವಲಯದಲ್ಲಿ 14 ಗಂಟೆಗಳ ಕೆಲಸದ ಅವಧಿಯನ್ನು ಅನುಮತಿಸಲು ತಿದ್ದುಪಡಿಯನ್ನು ಪರಿಚಯಿಸುವ ಮೂಲಕ ಕೆಲಸದ ಸಮಯವನ್ನು ಹೆಚ್ಚಿಸಲು ಪ್ರಯತ್ನಿಸಿತ್ತು. ಆದರೆ, ಈ ಕ್ರಮವನ್ನು ಕೆಐಟಿಯು ಯಶಸ್ವಿಯಾಗಿ ವಿರೋಧಿಸಿತ್ತು. ಕೆಲಸದ ಅವಧಿಯನ್ನು ವಿಸ್ತರಿಸುವ ಹೊಸ ಒತ್ತಡವು ಕಾರ್ಮಿಕರ ಹಕ್ಕುಗಳಿಗಿಂತ ಕಾರ್ಪೊರೇಟ್ ಹಿತಾಸಕ್ತಿಗಳನ್ನು ಪೂರೈಸಲು ಸರ್ಕಾರದ ನಿರಂತರ ಪ್ರಯತ್ನಗಳನ್ನು ಪ್ರತಿಬಿಂಬಿಸುತ್ತದೆ.”

“ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ (ಕೆಐಟಿಯು) ಸರ್ಕಾರವು ಈ ಕ್ರಮವನ್ನು ಮರುಪರಿಶೀಲಿಸುವಂತೆ ಒತ್ತಾಯಿಸುತ್ತದೆ ಮತ್ತು ತಿದ್ದುಪಡಿಯನ್ನು ಮುಂದುವರಿಸುವ ಯಾವುದೇ ಪ್ರಯತ್ನವನ್ನು ಕರ್ನಾಟಕದ ಐಟಿ/ಐಟಿಇಎಸ್ ವಲಯದಲ್ಲಿ ಕೆಲಸ ಮಾಡುತ್ತಿರುವ 20 ಲಕ್ಷ ಉದ್ಯೋಗಿಗಳಿಗೆ ನೇರ ಸವಾಲಾಗಿ ನೋಡಲಾಗುತ್ತದೆ ಎಂದು ಎಚ್ಚರಿಸಿದೆ. ಆಧುನಿಕ ಗುಲಾಮಗಿರಿಯನ್ನು ನಮ್ಮ ಮೇಲೆ ಹೇರುವ ಈ ಅಮಾನವೀಯ ಪ್ರಯತ್ನವನ್ನು ವಿರೋಧಿಸಲು ಎಲ್ಲಾ ಐಟಿ/ಐಟಿಇಎಸ್ ಉದ್ಯೋಗಿಗಳು ಒಗ್ಗೂಡಿ ಒಟ್ಟಾಗಿ ನಿಲ್ಲಬೇಕೆಂದು ಕೆಐಟಿಯು ಕರೆ ನೀಡುತ್ತದೆ.”

ಸಿಐಟಿಯು ಖಂಡನೆ 

ಸರ್ಕಾರದ ಪ್ರಸ್ತಾವನೆಯನ್ನು ಸೆಂಟರ್ ಫಾರ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ವಿರೋಧಿಸಿದೆ. ಸಿಐಟಿಯು ಕೂಡ ಕೆಐಟಿಯು ರೀತಿ ಕೆಲಸದ ಅವಧಿಯನ್ನು ಆರಂಭದಿಂದಲೂ ವಿರೋಧಿಸಿಕೊಂಡು ಬಂದಿದೆ.

ನಾನುಗೌರಿ. ಕಾಂಗೆ ಪ್ರತಿಕ್ರಿಯೆ ನೀಡಿರುವ ಸಿಐಟಿಯು ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷೆ ಎಸ್‌. ವರಲಕ್ಷಿ ಅವರು, “ಕರ್ನಾಟಕ ಸರ್ಕಾರದ ನಡೆಯು ಐಟಿ/ಬಿಟಿ ಕಂಪನಿಗಳು ಸೇರಿದಂತೆ ವಾಣಿಜ್ಯ ಸಂಸ್ಥೆಗಳು ಪ್ರಸ್ತುತ ಕಾನೂನುಬಾಹಿರವಾಗಿ ಹೆಚ್ಚಿನ ಅವಧಿ ನೌಕರರನ್ನು ದುಡಿಸಿಕೊಳ್ಳುತ್ತಿದೆ. ಇದನ್ನು ಕಾನೂನು ಅನ್ವಯ ಮಾಡುತ್ತದೆ. ಓವರ್ ಡ್ಯೂಟಿ ಸೇರಿದಂತೆ 12 ಗಂಟೆಗಳ ಕೆಲಸದ ಅವಧಿ ಮೂರು ಶಿಫ್ಟ್‌ಗಳ ವ್ಯವಸ್ಥೆಯನ್ನು ಎರಡು ಶಿಫ್ಟ್‌ಗಳಿಗೆ ಬದಲಾಯಿಸುತ್ತದೆ. ಈ ಮೂಲಕ ಒಂದು ಶಿಫ್ಟಿನ ನೌಕರರು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಸರ್ಕಾರದ ಕರೆದ ಸಭೆಯಲ್ಲಿ ಎಲ್ಲಾ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ನಾವು ಸಿಐಟಿಯು ಕಡೆಯಿಂದ ಪ್ರಸ್ತಾವಿತ ತಿದ್ದುಪಡಿಗೆ ನಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದೇವೆ. ಜುಲೈ 9ರಂದು ನಡೆಯಲಿರುವ ಕಾರ್ಮಿಕ ಸಂಘಟನೆಗಳ ಪ್ರತಿಭಟನೆಯಲ್ಲಿ ನಾವು ಈ ವಿಷಯವನ್ನು ಸೇರಿಸಿದ್ದೇವೆ. ಅಲ್ಲದೆ, ಸರ್ಕಾರಕ್ಕೆ ನಮ್ಮ ಸಂಘಟನೆಯಿಂದ ಪತ್ರವನ್ನು ಬರೆದಿದ್ದೇವೆ ಎಂದು ತಿಳಿಸಿದ್ದಾರೆ.

ಶಾಸಕರ ಭತ್ಯೆ ತುರ್ತಾಗಿ ಹೆಚ್ಚಿಸುವ ಸರ್ಕಾರ, ಬಡ ಮಕ್ಕಳಿಗೆ ಶೂ ನೀಡಲು ಮೀನಮೇಷ ಎಣಿಸುತ್ತಿದೆ: ಎಐಡಿಎಸ್ಓ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...