Homeಮುಖಪುಟಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕಗಳ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ

ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕಗಳ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ

- Advertisement -
- Advertisement -

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಲಾಗಿದ್ದ ಪಠ್ಯ ಪುಸ್ತಕಗಳ ಪುನರ್‌ ಪರಿಶೀಲನೆಯನ್ನು ರದ್ದುಪಡಿಸಿ ಅದಕ್ಕೂ ಹಿಂದಿನ ಪ್ರೊ.ಬರಗೂರು ರಾಮಚಂದ್ರಪ್ಪನವರು ಪರಿಷ್ಕರಣೆ ಮಾಡಿದ್ದ ಪಠ್ಯಗಳನ್ನು ಬೋಧಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯವಾಗಿ ಕನ್ನಡ ಮತ್ತು ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ವಿಷಯಗಳ ಬದಲಾವಣೆ ಮಾಡಲಾಗಿದ್ದು, ಪಠ್ಯದಿಂದ ಕೈ ಬಿಡುವ ಪಾಠಗಳ ಬಗ್ಗೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗಿದೆ.

ಕನ್ನಡ ಮತ್ತು ಸಮಾಜ ವಿಜ್ಞಾನದಲ್ಲಿ ತಲಾ 9 ಪಾಠಗಳಿಗೆ ಕೊಕ್ ನೀಡಲಾಗಿದೆ. ನಿಜವಾದ ಆದರ್ಶ ಪುರುಷ ಯಾರಾಗಬೇಕು ಎನ್ನುವ ಪಠ್ಯವನ್ನು ಕೈ ಬಿಡಲಾಗಿದೆ. ಕೇಶವ ಬಲಿರಾಮ ಹೆಡ್ಗೇವಾರ್ ಬರೆದಿದ್ದ ಗದ್ಯವನ್ನು ಸರ್ಕಾರ ಕೈಬಿಟ್ಟಿದೆ. ಚಕ್ರವರ್ತಿ ಸೂಲಿಬೆಲೆ ಅವರ ತಾಯಿ ಭಾರತೀಯ ಅಮರ ಪುತ್ರರು ಪಾಠಕ್ಕೆ ಕತ್ತರಿ ಹಾಕಲಾಗಿದೆ. ಶತಾವಧಾನಿ ಆರ್. ಗಣೇಶ್ ಗದ್ಯವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ. ಶ್ರೇಷ್ಠ ಭಾರತೀಯ ಚಿಂತನೆಗಳು ಪಾಠವನ್ನು ತೆಗೆಯಲಾಗಿದೆ. ನಿರ್ಮಲಾ ಸುರತ್ಕಲ್, ರಮಾನಂದ ಆಚಾರ್ಯ ಅವರ ಪಾಠವನ್ನು ಕೂಡ ಕೈ ಬಿಡಲಾಗಿದೆ. ಪಾರಂಪಳ್ಳಿ ನರಸಿಂಹ ಐತಾಳ, ಲಕ್ಷ್ಮೀಶ ಕೆ.ಟಿ. ಗಟ್ಟಿ, ಪಿ ಸತ್ಯನಾರಾಯಣ ಭಟ್ಟರ ಗದ್ಯಕ್ಕೂ ರಾಜ್ಯ ಸರ್ಕಾರ ಕತ್ತರಿ ಹಾಕಿದೆ.

ಸೇರ್ಪಡೆ ವಿಷಯದಲ್ಲಿ ಸಾವಿತ್ರಿಬಾಯಿ ಪುಲೆ, ನೆಹರೂ, ಡಾ. ಅಂಬೇಡ್ಕರ್ ಅವರ ಪಠ್ಯಗಳನ್ನು ಸೇರ್ಪಡೆ ಮಾಡಲಾಗಿದೆ. ಸುಕುಮಾರಸ್ವಾಮಿ ಕುರಿತ ಪಠ್ಯ ಸೇರಿಸಲಾಗಿದೆ. ಸಾರಾ ಅಬೂಬಕ್ಕರ್, ವನಮಾಲ ರಂಗನಾಥ್ ಪಾಠಗಳನ್ನು ಸೇರ್ಪಡೆ ಮಾಡಲಾಗಿದೆ. ಮಹರ್ಷಿ ವಾಲ್ಮೀಕಿ, ಉರುಸ್ ಗಳಲ್ಲಿ ಭಾವೈಕ್ಯತೆ ಪಾಠವನ್ನು ಸೇರ್ಪಡೆ ಮಾಡಲಾಗಿದೆ.

ಸಮಾಜ ವಿಜ್ಞಾನ ಪಠ್ಯದಲ್ಲಿಯೂ ಹಲವು ಅಧ್ಯಾಯಗಳನ್ನು ಸರ್ಕಾರ ಸೇರ್ಪಡೆ ಮಾಡಿದೆ. ವೇದಕಾಲದ ಸಂಸ್ಕೃತಿ, ಹೊಸ ಧರ್ಮಗಳ ಉದಯ ಕುರಿತ ಅಧ್ಯಾಯ, ಮಿರ್ಜಾ ಇಸ್ಮಾಯಿಲ್, ವಿಶ್ವೇಶ್ವರಯ್ಯ, ಒಡೆಯರ್ ಪಾಠಗಳನ್ನು ಸೇರ್ಪಡೆ ಮಾಡಲಾಗಿದೆ. ಇವುಗಳ ಬೋಧನೆಗೆ ಸಪ್ಲಿಮೆಂಟರಿ ಪುಸ್ತಕಗಳನ್ನು ಪೂರೈಸಲು ಸರ್ಕಾರ ಮುಂದಾಗಿದೆ.

ಇದನ್ನೂ ಒದಿ; ಆರೋಗ್ಯ ಇಲಾಖೆಗೆ ಬೇಕಾದ ಅನುದಾನವನ್ನು SCSP, TSP ನಿಧಿಯಿಂದ ಪಡೆಯಲು ಪ್ರಸ್ತಾಪ: ತೀವ್ರ ವಿರೋಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read