ರಾಜ್ಯದ ಕಾಂಗ್ರೆಸ್ ಸರ್ಕಾರವು ಗ್ಯಾರೆಂಟಿಗಳಲ್ಲಿ “ಮುಳುಗಿದೆ” ಎಂದು ಆರೋಪಿಸಿ ಹಿರಿಯ ಕಾಂಗ್ರೆಸ್ ಎಂಎಲ್‌ಸಿ ಬಿ ಕೆ ಹರಿಪ್ರಸಾದ್ ಶುಕ್ರವಾರ ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ. ರಾಜ್ಯ ಸರ್ಕಾರ ಇತರ ಪ್ರಮುಖ ವಿಷಯಗಳನ್ನು ಬದಿಗಿಡುತ್ತಿದೆ ಎಂದು ಅವರು ವಿಷಾದಿಸಿದ್ದಾರೆ ಎಂದು ವರದಿ ಹೇಳಿದೆ. ರಾಜ್ಯ ಸರ್ಕಾರ
“ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿಗಳನ್ನು ಸರ್ಕಾರ ಹಿಂಪಡೆಯಬೇಕು (ತಿದ್ದುಪಡಿಯು ಕೃಷಿಕರಲ್ಲದವರಿಗೆ ಕೃಷಿ ಭೂಮಿಯನ್ನು ಖರೀದಿಸಲು ಸಾಧ್ಯವಾಗಿಸಿತ್ತು). ಮತಾಂತರ ವಿರೋಧಿ ಮಸೂದೆಯನ್ನು ಹಿಂಪಡೆಯಬೇಕು” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಸರ್ಕಾರವು ಎನ್‌ಇಪಿ ಮೇಲೆ ಕ್ರಮ ಕೈಗೊಳ್ಳಬೇಕು, ಅತ್ಯಂತ ಪ್ರಮುಖ ಸ್ಥಾನಗಳಲ್ಲಿರುವ ಆರ್‌ಎಸ್‌ಎಸ್ ಎಲಿಮೆಂಟ್‌ಗಳನ್ನು ತೆಗೆದುಹಾಕಬೇಕು ಮತ್ತು ಜಾತಿ ಜನಗಣತಿಯನ್ನು ಜಾರಿಗೆ ತರಬೇಕು” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದೇ ವೇಳೆ ಅವರು, ಜಾತಿ ಜನಗಣತಿಯ ಬಗ್ಗೆ ಸಿಎಂ ಅಥವಾ ಇತರ ಸಚಿವರು ಮಾತ್ರ ಅಭಿಪ್ರಾಯ ವ್ಯಕ್ತಪಡಿಸಬೇಕು ಎಂದು ಹೇಳಿದ್ದಾರೆ.
ಇದಕ್ಕೂ ಮೊದಲು, ವಾರ್ತಾಭಾರತಿ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದ ಹರಿಪ್ರಸಾದ್ ಅವರು, ಪ್ರಪಂಚ ತಲೆಕೆಳಗಾದರೂ ಜಾತಿಗಣತಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಸಂದರ್ಶನದಲ್ಲಿ ಮಾತನಾಡಿದ್ದ ಅವರು, ಸರ್ಕಾರಗಳು ಜನರು ಕಟ್ಟುವ ತೆರಿಗೆ ಹಣವನ್ನು ಸರಿಸಮಾನವಾಗಿ ಹಂಚಿಕೆಯಾಗುತ್ತಿಲ್ಲ. ಇದು ಸರಿಸಮವಾಗಿ ಹಂಚಿಕೆಯಾಗಬೇಕು ಎಂದು ಸಂವಿಧಾನವೇ ಹೇಳುತ್ತದೆ. ಆದರೆ ಈ ಹಂಚಿಕೆ ಮಾಡಲು ದತ್ತಾಂಶಗಳು ಬೇಕಾಗುತ್ತವೆ. ಈ ದತ್ತಾಂಶಗಳು ಇಲ್ಲದಿರುವ ಕಾರಣಕ್ಕೆ ಸಮೀಕ್ಷೆಗಳು ನಡೆದಿವೆ. ಈ ಬಗ್ಗೆ ಯಾರಿಗೂ ಸಂದೇಹಗಳು ಬೇಕಾಗಿಲ್ಲ, ಪ್ರಚಂಚ ತಲೆಕೆಳಗಾದರೂ ಸರಿ, ಜಾತಿಗಣತಿಯನ್ನು ಮಾಡುತ್ತೇವೆ” ಎಂದು ಹೇಳಿದ್ದರು.
ಇದನ್ನೂಓದಿ: ‘ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ : ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ತಾಕೀತು
‘ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ’ : ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಲ್ಲಿಕಾರ್ಜುನ ಖರ್ಗೆ ತಾಕೀತು


