Homeಮುಖಪುಟರಾಜ್ಯ ಸರ್ಕಾರವೂ ಕೃಷಿ ಕಾಯ್ದೆಗಳನ್ನು ಹಿಂಪಡೆಯಲಿ: ಬೆಂಗಳೂರಿನಿಂದ ಮೈಸೂರಿಗೆ ಬೈಕ್ ಜಾಥ

ರಾಜ್ಯ ಸರ್ಕಾರವೂ ಕೃಷಿ ಕಾಯ್ದೆಗಳನ್ನು ಹಿಂಪಡೆಯಲಿ: ಬೆಂಗಳೂರಿನಿಂದ ಮೈಸೂರಿಗೆ ಬೈಕ್ ಜಾಥ

ನಾವು ಹಿಂದೆ ಕಾಲುಗಳಲ್ಲಿ ನಡೆದು ಹೋರಾಟ ಮಾಡುತ್ತಿದ್ದೆವು. ಈಗ ಬೇಗ ತಲುಪಬೇಕಿರುವ ಕಾರಣ ಕಾರು ಮತ್ತು ಬೈಕುಗಳಲ್ಲಿ ಜಾಥ ಮಾಡುತ್ತಿದ್ದೇವೆ. ಅನ್ನ ತಿನ್ನುವ ಪ್ರತಿಯೊಬ್ಬರು ರೈತ ಹೋರಾಟವನ್ನು ಬೆಂಬಲಿಸಬೇಕು - ಬಿ.ಟಿ ಲಲಿತಾ ನಾಯಕ್

- Advertisement -
- Advertisement -

ರಾಜ್ಯದಲ್ಲಿಯೂ ರೈತವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ವಾಪಸ್ ಪಡೆಯಬೇಕು ಮತ್ತು ದೇಶಾದ್ಯಂತ ಎಂಎಸ್‌ಪಿ ಕಾನೂನುಬದ್ಧಗೊಳಿಸುವಂತೆ ಒತ್ತಾಯಿಸಿ ಇಂದು ಕರ್ನಾಟಕ ಜನಶಕ್ತಿ ಸಂಘಟನೆಯು ಬೆಂಗಳೂರಿನಿಂದ ಮೈಸೂರುವರೆಗೆ ಬೈಕ್ ಮತ್ತು ಕಾರ್ ಜಾಥ ನಡೆಸಿತು.

ಕರಾಳ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವುದಾಗಿ ಪ್ರಧಾನಿ ಮೋದಿಯವರು ಮಾಡಿರುವ ಘೋಷಣೆ ದೇಶದ ರೈತರ ಚಾರಿತ್ರಿಕ ಹೋರಾಟಕ್ಕೆ ಸಂದ ಬಾರಿ ದೊಡ್ಡ ವಿಜಯವಾಗಿದೆ. ಆದರೆ ಪ್ರಧಾನಿ ಮೋದಿಯವರು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕಾನೂನು ರಚನೆಯ ಬಗ್ಗೆ ಹಾಗು ವಿದ್ಯುತ್ ಕ್ಷೇತ್ರದ ಸಂಪೂರ್ಣ ಖಾಸಗಿಕರಣಕ್ಕೆ ಅವಕಾಶ ಮಾಡಿಕೊಡುವ ವಿದ್ಯುತ್ ಮಸೂದೆ-2020 ರ ವಾಪಸಾತಿಯ ಬಗ್ಗೆ ಮೌನ ವಹಿಸಿದ್ದಾರೆ. ಈ ಬೇಡಿಕೆಗಳನ್ನು ಸಹ ಈಡೇರಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮೋದಿಯವರು ಕೃಷಿ ಕಾಯ್ದೆಗಳ ವಾಪಸಾತಿಯ ಬಗ್ಗೆ ಮಾಡಿರುವ ಘೋಷಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆಗಳ ತಿದ್ದುಪಡಿಗಳನ್ನು ಕೂಡಲೇ ರದ್ದು ಮಾಡಬೇಕೆಂದು ಒತ್ತಾಯಿಸಲಾಯಿತು.

ಮಾಜಿ ಸಚಿವೆ, ಹೋರಾಟಗಾರ್ತಿ ಬಿ.ಟಿ ಲಲಿತಾ ನಾಯಕ್ ಮಾತನಾಡಿ, “ನಾವು ಹಿಂದೆ ಕಾಲುಗಳಲ್ಲಿ ನಡೆದು ಹೋರಾಟ ಮಾಡುತ್ತಿದ್ದೆವು. ಈಗ ಬೇಗ ತಲುಪಬೇಕಿರುವ ಕಾರಣ ಕಾರು ಮತ್ತು ಬೈಕುಗಳಲ್ಲಿ ಜಾಥ ಮಾಡುತ್ತಿದ್ದೇವೆ. ಅನ್ನ ತಿನ್ನುವ ಪ್ರತಿಯೊಬ್ಬರು ರೈತ ಹೋರಾಟವನ್ನು ಬೆಂಬಲಿಸಬೇಕು” ಎಂದರು.

ಕರ್ನಾಟಕ ಜನಶಕ್ತಿಯ ಗೌರವಾಧ್ಯಕ್ಷರಾದ ಗೌರಿಯವರು ಮಾತನಾಡಿ, “ಇಂದು ನವೆಂಬರ್ 26 ಸಂವಿಧಾನ ಜಾರಿಗೆ ಬಂದ ದಿನ ಯುವಜನರು ಹೋರಾಟದಲ್ಲಿ ಭಾಗವಹಿಸಿರುವುದು ಆಶಾದಾಯಕ ಬೆಳವಣಿಗೆ. ಇದೇ ಯುವಜನರು ಕರ್ನಾಟಕ ಹಳ್ಳಿ ಹಳ್ಳಿಗಳಿಗೆ ತೆರಳಿ ಕೃಷಿ ಕಾಯ್ದೆಗಳ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಿದರು. ಅವರ ಹೋರಾಟಕ್ಕೆ ಜಯವಾಗಿದೆ. ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ. ಆದರೆ ಕರ್ನಾಟಕದ ಮೂರು ಕಾಯ್ದೆಗಳು ಮತ್ತು ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯನ್ನು ವಾಪಸ್ ಪಡೆಯುವವರೆಗೂ ಹೋರಾಟ ಮುಂದುವರೆಸುತ್ತೇವೆ” ಎಂದರು.

ಬೈಕ್ ಜಾಥವು ರಾಮನಗರ ತಲುಪಿ ಅಲ್ಲಿ ರಸ್ತೆ ತಡೆ ನಡೆಸುತ್ತಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರ ಜೊತೆಗೂಡಿತು. ರಾಮನಗರದಲ್ಲಿ ಹೋರಾಟಗಾರರಾದ ನೂರ್ ಶ್ರೀಧರ್ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಅನಸೂಯಮ್ಮ ಅರಳಾಳುಸಂದ್ರ ಮಾತನಾಡಿದರು.

ನಂತರ ಬೈಕ್ ಜಾಥ ಶ್ರೀರಂಗಪಟ್ಟಣ ತಲುಪಿ ಹೆದ್ದಾರಿ ಬಂದ್ ನಡೆಸುತ್ತಿದ್ದ ರೈತರ ಜೊತೆ ಸೇರಿತು. ಇಂದು ಬೆಳಿಗ್ಗೆಯಿಂದಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆದ್ದಾರಿ ಬಂದ್ ಆರಂಭವಾಗಿದೆ.

ಇದನ್ನೂ ಓದಿ; ಸರ್ವಾಧಿಕಾರದ ಅಹಂ ಮುರಿದ ಸಮರ ಸತ್ಯಾಗ್ರಹ: ನೂರ್ ಶ್ರೀಧರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...