Homeಕರ್ನಾಟಕಕೊರೊನಾ ಬಿಕ್ಕಟ್ಟು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಡಿ. ಕೆ. ಶಿವಕುಮಾರ್

ಕೊರೊನಾ ಬಿಕ್ಕಟ್ಟು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಡಿ. ಕೆ. ಶಿವಕುಮಾರ್

- Advertisement -
- Advertisement -

ಸರ್ಕಾರ ಕೊರೊನಾವನ್ನು ನಿಭಾಯಿಸಲು ಎಲ್ಲ ರೀತಿಯಲ್ಲೂ ವಿಫಲವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ಹೇಳಿದ್ದಾರೆ.

ಚೀನಾ ಗಡಿಯಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಗೌರವ ನಮನ ಸಲ್ಲಿಸಿದ ನಂತರ ಡಿ.ಕೆ ಶಿವಕುಮಾರ್ ರಾಜ್ಯ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಅವರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿ ಮಾಡುವುದು, ಬಿಡುವುದು ಸರ್ಕಾರಕ್ಕೆ ಬಿಟ್ಟ ವಿಚಾರ. ಈ ವಿಚಾರವಾಗಿ ನಮ್ಮ ಶಾಸಕರು ಹಾಗೂ ವಿರೋಧ ಪಕ್ಷದ ನಾಯಕರು ಕೂತು ಚರ್ಚಿಸಿದ್ದು, ಈ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ಸರ್ಕಾರ ನೀಡುವ ಆದೇಶ ಪಾಲಿಸುತ್ತೇವೆ. ಈ ವಿಚಾರದಲ್ಲಿ ನಮಗೆ ಈವರೆಗೂ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ ಎಂದಿದ್ದಾರೆ.

“ಕೋವಿಡ್ ವಿಚಾರ ನಿಭಾಯಿಸಲು ಸರ್ಕಾರ ಎಲ್ಲ ರೀತಿಯಲ್ಲೂ ವಿಫಲವಾಗಿದ್ದು, ಜನರಿಗೆ ರಕ್ಷಣೆ ನೀಡಲು ಆಗುತ್ತಿಲ್ಲ. ಲಾಕ್ ಡೌನ್ ಸಂದರ್ಭದಲ್ಲಿ ಸಿಕ್ಕ ಎರಡು ಮೂರು ತಿಂಗಳ ಕಾಲಾವಕಾಶವನ್ನು ಬಳಸಿಕೊಳ್ಳಲು ಸರ್ಕಾರ ಎಡವಿದೆ. ಪರಿಣಾಮವಾಗಿ ಸೋಂಕು ಹೆಚ್ಚಾಗಿದ್ದು, ಈಗ ಶಾಸಕರನ್ನು ಕರೆದು ಸಭೆ ನಡೆಸಿದರೆ ಯಾವುದೇ ಪ್ರಯೋಜನವಿಲ್ಲ.” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿ.ಕೆ ಶಿವಕುಮಾರ್ ಯಾರು ಅಂತಾ ಕೇಳಿದವರು ಇಂದು ಶಾಸಕರ ಸಭೆ ಮಾಡಿದ್ದೇಕೆ?

ಕನಕಪುರ ಲಾಕ್ ಡೌನ್ ಕುರಿತು ಸ್ಪಷ್ಟನೆ ನೀಡಿದ ಅವರು, ಅದು ಎಲ್ಲರ ತೀರ್ಮಾನಗಳನ್ನು ಒಳಗೊಂಡಿತ್ತು ಎಂದು ಹೇಳಿದ್ದಾರೆ.

“ನಾನು ನನ್ನ ಕ್ಷೇತ್ರದ ಜನರ ಹಿತದೃಷ್ಟಿಯಿಂದ ತೀರ್ಮಾನ ತೆಗೆದುಕೊಂಡರೆ ಡಿಸಿಎಂ ಡಿ.ಕೆ ಶಿವಕುಮಾರ್ ಯಾರು ಎಂದು ಕೇಳುತ್ತಾರೆ. ಡಿ.ಕೆ ಶಿವಕುಮಾರ್ ಯಾರು ಎಂದವರು ಈಗ ಯಾಕೆ ಶಾಸಕರ ಜತೆ ಚರ್ಚೆ ಮಾಡುತ್ತಿದ್ದಾರೆ? ಕನಕಪುರ ಲಾಕ್ ಡೌನ್ ಕುರಿತು ಸಂಸದರು, ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಅಧಿಕಾರಿ, ಆಯುಕ್ತರನ್ನು ಒಳಗೊಂಡಂತೆ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ಮಾಡಿದ್ದೆ” ಎಂದು ಅವರು ಹೇಳಿದ್ದಾರೆ.

ಕೊರೋನಾ ವಿಚಾರವಾಗಿ ಚರ್ಚೆ ನಡೆಸಲು ವಿಶೇಷ ಅಧಿವೇಶನ ನಡೆಸಿ ಎಂದು ನಾವು ಕೇಳಿದ್ದೇವೆ. ಅಧಿವೇಶನದಲ್ಲಿ ಸರ್ಕಾರ ತನ್ನ ಕ್ರಮಗಳ ಕುರಿತು ಶ್ವೇತಪತ್ರ ಹೊರಡಿಸಲಿ ಎಂದು ಹೇಳಿದ್ದೇವೆ. ಈ ವಿಚಾರವಾಗಿ ನಮ್ಮ ಅಭಿಪ್ರಾಯವನ್ನು ಸರ್ಕಾರಕ್ಕೆ ತಿಳಿಸಬಹುದು. ಆದರೆ ಸರ್ಕಾರ ನಮ್ಮ ಮಾತುಗಳನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ, ಅಧಿವೇಶನ ಕರೆಯುತ್ತಿಲ್ಲ ಎಂದು ಅವರು ಅಸಮಧಾನ ವ್ಯಕ್ತಪಡಿಸಿದ್ದಾರೆ.


ಓದಿ: ಹಳೆ ಕಾಂಗ್ರೆಸ್ ಸಂಸ್ಕೃತಿ + ದುಡ್ಡು ಎಂಬ ಡಿಕೆಶಿ ಮಾದರಿ ವರ್ಕ್‌ಔಟ್ ಆಗುತ್ತಾ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...