Homeಕರೋನಾ ತಲ್ಲಣಕಡಿಮೆ ದರದಲ್ಲಿ ಸಮರ್ಪಕ ಆಂಬುಲೆನ್ಸ್ ಸೇವೆ ಒದಗಿಸಿ : ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ

ಕಡಿಮೆ ದರದಲ್ಲಿ ಸಮರ್ಪಕ ಆಂಬುಲೆನ್ಸ್ ಸೇವೆ ಒದಗಿಸಿ : ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ

- Advertisement -
- Advertisement -

ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಕೊಂಡೊಯ್ಯಲು ಪ್ರತಿ ಜಿಲ್ಲೆಗಳಲ್ಲಿ ಸಾಕಷ್ಟು ಸಂಖ್ಯೆಯ ಆ್ಯಂಬುಲೆನ್ಸ್ ಲಭ್ಯವಿರುವ ಬಗ್ಗೆ ರಾಜ್ಯ ಸರಕಾರಗಳು ಭರವಸೆ ನೀಡಬೇಕು ಎಂದು ಎಲ್ಲ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಕೊರೊನಾ ಸೋಂಕಿನ ಕುರಿತ ಆರೋಗ್ಯ ಸೇವೆಗಳನ್ನು ಸುಗಮಗೊಳಿಸುವುದಕ್ಕೆ ಸಂಬಂಧಿಸಿದಂತೆ ಹಲವು ದೂರುಗಳನ್ನು ವಿಚಾರಣೆ ನಡೆಸಿದ ಸುಪ್ರೀಂ, ಕೊರೊನಾ ರೋಗಿಗಳಿಗೆ ಆ್ಯಂಬುಲೆನ್ಸ್ ಸೇವೆ ನೀಡುವ ಸಂದರ್ಭ ಅಧಿಕ ಶುಲ್ಕ ವಿಧಿಸುತ್ತಿರುವ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಇತಿಹಾಸದ ಕಟಕಟೆಯಲ್ಲಿ ಅರುಣ್ ಮಿಶ್ರ ಎಂಬ ನ್ಯಾಯಮೂರ್ತಿ

ಹಾಗಾಗಿ ಕೊರೊನಾ ರೋಗಿಗಳಿಗೆ ಆ್ಯಂಬುಲೆನ್ಸ್ ಸೇವೆ ನೀಡುವಾಗ ಯೋಗ್ಯ ಶುಲ್ಕ ನಿಗದಿಪಡಿಸಿ, ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಕೊಂಡೊಯ್ಯಲು ಪ್ರತಿ ಜಿಲ್ಲೆಗಳಲ್ಲಿ ಸಾಕಷ್ಟು ಸಂಖ್ಯೆಯ ಆ್ಯಂಬುಲೆನ್ಸ್ ಲಭ್ಯವಿರುವ ಬಗ್ಗೆ ರಾಜ್ಯ ಸರಕಾರಗಳು ಭರವಸೆ ನೀಡಬೇಕು ಎಂದು ಎಲ್ಲ ರಾಜ್ಯಗಳಿಗೆ ನಿರ್ದೇಶನ ನೀಡಿದೆ.

ಕೊರೊನಾ ರೋಗಿಗಳಿಗೆ ಆ್ಯಂಬುಲೆನ್ಸ್‌ಗಳ ಸಂಖ್ಯೆ ಹೆಚ್ಚಿಸಲು ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ದೂರನ್ನು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.

ಹೆಚ್ಚಿನ ರಾಜ್ಯಗಳು ಆ್ಯಂಬುಲೆನ್ಸ್ ಸೇವೆಗಳನ್ನು ಸುಧಾರಿಸಲು ಪ್ರಯತ್ನಿಸುತ್ತಿರುವಾಗಲೇ ಖಾಸಗಿ ಆ್ಯಂಬುಲೆನ್ಸ್‌ಗಳು ಮಿತಿ ಮೀರಿದ ಶುಲ್ಕ ವಿಧಿಸುತ್ತಿದೆ ಎಂಬರೋಪ ಕೇಳಿಬಂದಿತ್ತು. ಈ ನಿಟ್ಟಿನಲ್ಲಿ ಈ ಆದೇಶ ಕೊರೊನಾ ರೋಗಿಗಳಿಗೆ ತುಸು ನೆಮ್ಮದಿ ನೀಡಬಹುದಾಗಿದೆ.


ಇದನ್ನೂ ಓದಿ: ಪ್ರಧಾನಿ ಮೋದಿ ಹೊಗಳಿದ ನ್ಯಾಯಮೂರ್ತಿ ಅರುಣ್ ಮಿಶ್ರಾ ವರ್ತನೆಗೆ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​ಖಂಡನೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...