Homeಕರ್ನಾಟಕರೈತನಿಗೆ ಅವಮಾನ: ಏಳು ದಿನಗಳ ಕಾಲ ಜಿಟಿ ಮಾಲ್‌ ಮುಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ

ರೈತನಿಗೆ ಅವಮಾನ: ಏಳು ದಿನಗಳ ಕಾಲ ಜಿಟಿ ಮಾಲ್‌ ಮುಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ

- Advertisement -
- Advertisement -

ಪಂಚೆ ತೊಟ್ಟ ರೈತನಿಗೆ ಪ್ರವೇಶ ನಿರಾಕರಣೆ ಮಾಡಿ ಅವಮಾನಿಸಿದ ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ ಅನ್ನು ಏಳು ದಿನಗಳ ಕಾಲ ಮುಚ್ಚಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಇಂದು (ಜುಲೈ 18) ಸದನದಲ್ಲಿ ಜಿಟಿ ಮಾಲ್‌ನಲ್ಲಿ ರೈತನಿಗೆ ಅವಮಾನ ಮಾಡಿರುವ ವಿಚಾರ ಚರ್ಚೆಗೆ ಕಾರಣವಾಯಿತು. ಜಿಟಿ ಮಾಲ್ ಒಳಗೆ ಪಂಚೆ ಉಟ್ಟ ರೈತನನ್ನು ಬಿಡದೆ ಅವಮಾನಿಸಿದ ವಿಚಾರವಾಗಿ ಸಭಾಧ್ಯಕ್ಷ ಯು ಟಿ ಖಾದರ್ ಅವರು ಕೋಪಗೊಂಡರು. “ರೈತನಿಗೆ ಅವಮಾನ ಮಾಡಿದವನು ಎಷ್ಟೇ ದೊಡ್ಡವನಿರಲಿ, ಅವಮಾನ ಮಾಡಿದ್ದನ್ನು ಖಂಡಿಸಬೇಕು. ಸರ್ಕಾರ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಸ್ಪೀಕರ್ ಮಾತಿಗೆ ಧ್ವನಿಗೂಡಿಸಿದ ಶಾಸಕ ಲಕ್ಷಣ ಸವದಿ, “ಎಲ್ಲಾ ಮಾಲ್‌ಗಳಿಗೂ ಒಂದೇ ನಿಯಮ ಮಾಡಬೇಕು. ಪಂಚೆ ನಮ್ಮ ಸಂಸ್ಕೃತಿ. ಸರ್ಕಾರದಿಂದ ಒಂದು ಆದೇಶ ಹೊರಡಿಸಲಿ, ಆ ಮಾಲ್‌ಗೆ ವಾರಗಳ ಕಾಲ ಪವರ್ ಕಟ್ ಮಾಡಲಿ” ಎಂದು ಒತ್ತಾಯಿಸಿದರು.

ಶಾಸಕ ಪ್ರಕಾಶ್ ಕೋಳಿವಾಡ ಕೂಡ ಎದ್ದು ನಿಂತು, “ರೈತನಿಗೆ ಅವಮಾನ ಮಾಡಿದ ಆ ಮಾಲ್ ಅನ್ನು ಮುಚ್ಚಬೇಕು” ಎಂದು ಆಗ್ರಹಿಸಿದರು.

ಸಚಿವ ಬೈರತಿ ಸುರೇಶ್ ಧ್ವನಿಗೂಡಿಸಿ, “ದೇವೇಗೌಡರು, ಸಿದ್ದರಾಮಯ್ಯ ಅವರು ಪಂಚೆ ಉಡುತ್ತಾರೆ. ಅವರು ಕ್ಲಬ್ ಗಳಿಗೆ ಏನಾದ್ರೂ ಹೋದರೆ ಬಿಡುತ್ತಾರೆ. ಆದರೆ, ಬೇರೆಯವರಿಗೆ ಆ ನಿಯಮ ಇಲ್ವಾ? ಎಂದು ಪ್ರಶ್ನಿಸಿದರು.

“ಏಳು ದಿನಗಳ ಕಾಲ‌ ಮಾಲ್ ಮುಚ್ಚಿಸುತ್ತೇವೆ. ಈಗಾಗಲೇ ಬಿಬಿಎಂಪಿ ಆಯುಕ್ತರ ಹತ್ತಿರ ಮಾತಾಡಿದ್ದೇವೆ. ಕಾನೂನಿನಲ್ಲಿ ಅವಕಾಶ ಇದೆ, ಸರ್ಕಾರದ ಕ್ರಮ ಕೈಗೊಳ್ಳಬಹುದು” ಎಂದು ಹೇಳಿದರು.

ಕಾಂಗ್ರೆಸ್ ಸದಸ್ಯ ಅಶೋಕ್ ಪಟ್ಟಣ ಮಾತನಾಡಿ, ರಾಜ್ಯದ ಎಲ್ಲ ಕ್ಲಬ್‌ಗಳು, ಮಾಲ್‌ಗಳಲ್ಲಿ ಒಂದೇ ನಿಯಮ ತರಬೇಕು. ಪಂಚೆ ಸೇರಿದಂತೆ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸುಸಿದವರಿಗೆ ಪ್ರವೇಶ ಕೊಡಬೇಕು” ಎಂದರು.

ಘಟನೆಯ ಹಿನ್ನೆಲೆ : ಬೆಂಗಳೂರಿನ ಮಾಗಡಿ ರಸ್ತೆ ಟೋಲ್ ಗೇಟ್ ಬಳಿಯಿರುವ ಜಿಟಿ ಮಾಲ್‌ನಲ್ಲಿ ಹಾವೇರಿ ಮೂಲದ ರೈತರೊಬ್ಬರನ್ನು ಅವಮಾನಿಸಿದ ಘಟನೆ ಜುಲೈ 16 ರಂದು ನಡೆದಿದೆ. ವಿಜಯನಗರದ ನಿವಾಸಿ ನಾಗರಾಜ್‌ ತಂದೆ ಹಾವೇರಿಯವರಾಗಿದ್ದು, ಬೆಂಗಳೂರಿಗೆ ಬಂದಾಗ ಸಿನಿಮಾ ತೋರಿಸಲೆಂದು ಜಿಟಿ ಮಾಲ್‌ಗೆ ಕರೆದುಕೊಂಡು ಹೋಗಿದ್ದರು. ಸಿನಿಮಾ ಥಿಯೇಟರ್‌ ಒಳಗೆ ಪ್ರವೇಶಿಸುವ ಸಂದರ್ಭದಲ್ಲಿ ತಪಾಸಣೆ ನಡೆಸುವ ಭದ್ರತಾ ಸಿಬ್ಬಂದಿ, ರೈತ ಪಂಚೆ ಉಟ್ಟಿರುವ ಕಾರಣಕ್ಕೆ ಥಿಯೇಟರ್ ಒಳಗೆ ಬಿಟ್ಟಿರಲಿಲ್ಲ. ಈ ಘಟನೆ ಭಾರೀ ಜನಾಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಆಂಧ್ರಪ್ರದೇಶ: ಜಗನ್ ಪಕ್ಷದ ಕಾರ್ಯಕರ್ತನನ್ನು ನಡುರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದ ದುಷ್ಕರ್ಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...