Homeಕರ್ನಾಟಕಬಸವಣ್ಣರನ್ನು 'ಕರ್ನಾಟಕದ ಸಾಂಸ್ಕೃತಿಕ ನಾಯಕ'ನೆಂದು ಘೋಷಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

ಬಸವಣ್ಣರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ನೆಂದು ಘೋಷಿಸಲು ನಿರ್ಧರಿಸಿದ ರಾಜ್ಯ ಸರ್ಕಾರ

- Advertisement -
- Advertisement -

ಸಾಮಾಜಿಕ ನ್ಯಾಯದ ಹರಿಕಾರ ಬಸವಣ್ಣ ಅವರನ್ನು ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

“ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ತೀರ್ಮಾನಿಸಿದೆ. ನಮ್ಮ ಸರ್ಕಾರದ ಈ ತೀರ್ಮಾನ ಮುಖ್ಯಮಂತ್ರಿಯಾದ ನನಗೆ ಅತೀವ ಹೆಮ್ಮೆ ಮತ್ತು ತೃಪ್ತಿಯನ್ನು ಉಂಟು ಮಾಡಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ” ಎಂದು ಸಿಎಂ ಎಕ್ಸ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆಂದು ನಾಡಿನ ಲಿಂಗಾಯತ ಮಠಗಳ ಸ್ವಾಮಿಗಳು ನನ್ನ ಬಳಿ ಬಂದು ಮನವಿ ಮಾಡಿದ್ದರು. ಇದು ವೈಯಕ್ತಿಕವಾಗಿ ನನ್ನ ಅಪೇಕ್ಷೆಯೂ ಆಗಿತ್ತು. ಸ್ವಾಮಿಗಳ ಈ ಬೇಡಿಕೆಯನ್ನು ಈಡೇರಿಸಿದ ತೃಪ್ತಿ ನಮ್ಮ ಸರ್ಕಾರಕ್ಕೆ ಇದೆ. ಈ ಎಲ್ಲ ಸ್ವಾಮೀಜಿಗಳ ಆಶೀರ್ವಾದ ನಮ್ಮ ಸರ್ಕಾರದ ಮೇಲೆ ಇರಲಿ ಎಂದು ಇದೇ ಸಂದರ್ಭದಲ್ಲಿ ಅರಿಕೆ ಮಾಡಿಕೊಳ್ಳುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ವೈಯಕ್ತಿಕವಾಗಿ ಮತ್ತು ರಾಜಕೀಯವಾಗಿ ಬಸವಣ್ಣ ನನ್ನವೈಚಾರಿಕ ಗುರು. ಬಸವ ಜಯಂತಿಯ ದಿನವೇ ನಾನು ಮೊದಲ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೆ. ಆ ನಿರ್ಧಾರ ಕಾಕತಾಳೀಯವಲ್ಲ, ಉದ್ದೇಶಪೂರ್ವಕವಾದುದು. ಆ ದಿನ ಬಸವಣ್ಣನವರ ಚಿಂತನೆಗಳ ಹಾದಿಯಲ್ಲಿ ನಡೆಯುತ್ತೇನೆ ಎಂದು ನನ್ನ ಮನಸ್ಸಿನೊಳಗೆ ಪ್ರಮಾಣ ಮಾಡಿದ್ದೆ. ಅದರಂತೆ ಬಸವಣ್ಣನವರ ತತ್ವದ ದಾರಿಯಲ್ಲಿಯೇ ನಮ್ಮ ಸರ್ಕಾರ ಈಗಲೂ ಸಾಗುತ್ತಿದೆ. ಈ ಜಾಗೃತಿ ನಮ್ಮ ಸರ್ಕಾರದ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಇರಬೇಕೆಂಬ ಉದ್ದೇಶದಿಂದಲೇ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕೆಂದು ಆದೇಶಿಸಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.

ಅಣ್ಣನ ಅನ್ನದಾಸೋಹದ ಸಂದೇಶಕ್ಕೆ ಅನುಗುಣವಾಗಿ ಮುಖ್ಯಮಂತ್ರಿಯಾದ ಮರುಗಳಿಗೆಯಲ್ಲಿಯೇ ಅನ್ನಭಾಗ್ಯ’ಯೋಜನೆಯನ್ನು ಜಾರಿಗೊಳಿಸಿದೆ. ಈ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪ ಕೈಗೊಂಡೆ. ವಿದ್ಯಾರ್ಥಿಗಳಿಗೆ ಬಿಸಿಯೂಟ, ಕ್ಷೀರಭಾಗ್ಯದ ಮೂಲಕ ಹಾಲು, ಇಂದಿರಾ ಕ್ಯಾಂಟೀನ್, ಗರ್ಭಿಣಿ ಮತ್ತು ಬಾಣಂತಿಯರಿಗಾಗಿ ಮಾತೃಪೂರ್ಣ ಯೋಜನೆಗಳು ಬಸವಣ್ಣನವರ ಅನ್ನದಾಸೋಹದ ಚಿಂತನೆಯಿಂದಲೇ ಪ್ರೇರಿತವಾದುದು. ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅವಕಾಶಗಳು ಸಿಗಬೇಕು ಎಂದು ಬಸವಣ್ಣ ಬಯಸಿದ್ದರು. ನಮ್ಮ ಸರ್ಕಾರದ ಯೋಜನೆಗಳತ್ತ ಕಣ್ಣು ಹಾಯಿಸಿದರೆ ಬಸವಣ್ಣನ ಆಶಯಗಳ ಪ್ರಭಾವ ಪ್ರತಿಯೋಜನೆಯಲ್ಲಿಯೂ ಕಾಣಬಹುದು ಎಂದು ಸಿಎಂ ಬರೆದುಕೊಂಡಿದ್ದಾರೆ.

ಬಡತನ ನಿವಾರಣೆ, ಕೃಷಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ಮಹಿಳಾ ಸಬಲೀಕರಣ, ಉದ್ಯೋಗ ಸೃಷ್ಟಿಗೆ ನಮ್ಮ ಸರ್ಕಾರ ಆದ್ಯತೆ ನೀಡಿ ಅಭಿವೃದ್ಧಿಯ ಜೊತೆಯಲ್ಲಿ ಸಾಮಾಜಿಕ ನ್ಯಾಯವನ್ನು ಬೆಸೆಯುವ ನಮ್ಮ ಕರ್ನಾಟಕ ಅಭಿವೃದ್ಧಿ ಮಾದರಿಯನ್ನು ಇಡೀ ದೇಶ ಚರ್ಚಿಸುತ್ತಿದೆ. ಬಸವಣ್ಣ ಎಂಬ ಜ್ಞಾನಭಂಡಾರದ ಮಾರ್ಗದರ್ಶನ ಇಲ್ಲದೆ ಇದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ ಎಂದು ಸಿಎಂ ಹೇಳಿದ್ದಾರೆ.

ಕನ್ನಡ ಭಾಷೆಯ ಬಗೆಗಿನ ನಮ್ಮ ಸರ್ಕಾರದ ಬದ್ಧತೆಗೂ ಬಸವಣ್ಣನೇ ಪ್ರೇರಕ ಶಕ್ತಿ. ಬಸವಣ್ಣನವರು ಕನ್ನಡವನ್ನು ಅಂದಿನ ಧರ್ಮದ ಭಾಷೆಯಾಗಿ, ವಿಚಾರದ ಭಾಷೆಯಾಗಿ, ಸಂವಹನದ ಭಾಷೆಯಾಗಿ ಬಳಸಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಬೆಲೆ ಕಟ್ಟಲಾರದ್ದು. ಹಾಗೆ ನೋಡಿದರೆ ಕನ್ನಡ ಮಾಧ್ಯಮ ಪರಿಣಾಮಕಾರಿಯಾಗಿ ಜಾರಿಗೆ ಬಂದದ್ದೇ ಹನ್ನೆರಡನೇ ಶತಮಾನದಲ್ಲಿ ಎನ್ನುವುದು ಆಶ್ಚರ್ಯದ ಸಂಗತಿಯಾದರೂ ವಾಸ್ತವ ಎಂದಿದ್ದಾರೆ.

ಅನ್ನದಾಸೋಹ ಮತ್ತು ಜ್ಞಾನದಾಸೋಹದ ಮೂಲಕ ರಾಜ್ಯದ ಲಿಂಗಾಯತ ಮಠಗಳು ನಾಡಿನ ಸರ್ವಾಂಗೀಣ ಏಳಿಗೆಗೆ ಶ್ರಮಿಸುತ್ತಿರುವುದನ್ನು ಕೂಡಾ ನಾನು ಕೃತಜ್ಞತಾ ಭಾವದಿಂದ ಸ್ಮರಿಸುತ್ತೇನೆ. ಬಡತನ ಮತ್ತು ಅಜ್ಞಾನದ ನಿವಾರಣೆಯಲ್ಲಿ ಈ ಮಠಗಳು ವಿಶೇಷ ಪಾತ್ರವಹಿಸಿವೆ. ಶಿಕ್ಷಣ ಪ್ರಸಾರಕ್ಕೆ ಧಾರ್ಮಿಕ ಮಠ ಮಾನ್ಯಗಳು ನೀಡಿರುವ ಕೊಡುಗೆ ಅಪಾರವಾದುದು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆಯನ್ನಷ್ಟೇ ಮಾಡಿ ನಾವು ವಿರಮಿಸುವುದಿಲ್ಲ. ಬಸವ ತತ್ವವನ್ನು ಮನೆಮನೆಗೆ ತಲುಪಿಸುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತೇವೆ. ಸಮಸಮಾಜ ನಿರ್ಮಾಣದ ಬಗ್ಗೆ ಬಸವಣ್ಣ ಕಂಡ ಕನಸನ್ನು ಸಾಕಾರಗೊಳಿಸಲು ಎಲ್ಲರ ಸಹಕಾರ ಇರಲಿ ಎಂದು ಸಿಎಂ ಮನವಿ ಮಾಡಿದ್ದಾರೆ.

ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಸರ್ಕಾರದ ಪರವಾಗಿ ಘೋಷಿಸುವಂತೆ ಮುಖ್ಯಮಂತ್ರಿಗಳಿಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದು ಮನವಿ ಮಾಡಿದ್ದರು.

ಇದನ್ನೂ ಓದಿ : ಬಸವಣ್ಣನನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರೆಂದು ಘೋಷಿಸಿ: ಸಿಎಂಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...