Homeಕರ್ನಾಟಕಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ನಡೆದಿರುವ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ತನಿಖೆಯನ್ನು ಸಿಐಡಿಗೆ ವಹಿಸಿದೆ.

ಗೃಹ ಸಚಿವ ಡಾ.ಜಿ ಪರಮೇಶ್ವರ್ ಜೊತೆ ಚರ್ಚಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣದ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಇಂದು (ಡಿ.2) ಪ್ರಕರಣ ಅಧಿಕೃತವಾಗಿ ರಾಜ್ಯ ಪೊಲೀಸರಿಂದ ಸಿಐಡಿಗೆ ವರ್ಗಾವಣೆಯಾಗುವ ಸಾಧ್ಯತೆ ಇದೆ.

ಇದುವರೆಗೆ ಬೈಯ್ಯಪ್ಪನಹಳ್ಳಿ ಠಾಣೆಯ ಇನ್ಸ್ ಪೆಕ್ಟರ್ ಎಂ.ಪ್ರಶಾಂತ್ ಅವರ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿತ್ತು. ಸಿಐಡಿಗೆ ವಹಿಸಿದ ಬಳಿಕ ಸಿಐಡಿ ಡಿವೈಎಸ್ಪಿ ನಾಗರಾಜ್ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ತಿಳಿದು ಬಂದಿದೆ.

ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆಯ ಜಾಲ ಇತ್ತೀಚೆಗೆ ಪತ್ತೆಯಾಗಿತ್ತು. ಪ್ರಕರಣ ಸಂಬಂಧ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸರು ಇದುವರೆಗೆ 9 ಜನರನ್ನು ಬಂಧಿಸಿದ್ದಾರೆ. ಆರೋಪಿಗಳು ಕಳೆದ ಮೂರು ವರ್ಷಗಳಲ್ಲಿ 900ಕ್ಕೂ ಹೆಚ್ಚು ಭ್ರೂಣ ಹತ್ಯೆ ಮಾಡಿರುವುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ.

ಮೈಸೂರಿನ ಉದಯಗಿರಿಯ ಮಾತಾ ಆಸ್ಪತ್ರೆಯ ಮುಖ್ಯಸ್ಥ ಡಾ.ಚಂದನ್‌ ಬಲ್ಲಾಳ್‌ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾರೆ. ಇವರು ಭ್ರೂಣಗಳ ಹತ್ಯೆಯಲ್ಲಿ ಮುಖ್ಯ ಪಾತ್ರ ವಹಿಸಿದ್ದರು ಎಂದು ಆರೋಪಿಸಲಾಗಿದೆ. ತಮಿಳುನಾಡು ಮೂಲದ ವೈದ್ಯ ಡಾ.ತುಳಸಿರಾಮ್‌, ಮಹಿಳೆಯರನ್ನು ಗುರುತಿಸಿ ಕರೆ ತರುತ್ತಿದ್ದ ವಿರೇಶ್‌, ನವೀನ್‌ಕುಮಾರ್‌, ನಯನ್‌ ಕುಮಾರ್‌ ಹಾಗೂ ಶಿವನಂಜೇಗೌಡ, ಮಾತಾ ಆಸ್ಪತ್ರೆಯ ವ್ಯವಸ್ಥಾಪಕಿ ಮೀನಾ, ಲ್ಯಾಬ್ ಟೆಕ್ನೀಷಿಯನ್ ನಿಸಾರ್ ಹಾಗೂ ಸ್ವಾಗತಕಾರ್ತಿ ರಿಜ್ಮಾ ಖಾನಂ ಬಂಧಿತ ಇತರ ಆರೋಪಿಗಳು.

ಕಳೆದ ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ, ಪ್ರಕರಣದ ತನಿಖೆ ಚುರುಕುಗೊಳಿಸಲಾಗಿದೆ. ಇದುವರೆಗೆ 9 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಕಳೆದ ಮೂರು ವರ್ಷಗಳಲ್ಲಿ 900ಕ್ಕೂ ಹೆಚ್ಚು ಗರ್ಭಪಾತ ಮಾಡಿದ್ದಾರೆ. ಈ ಹಿಂದೆ ಪ್ರತಿ ತಿಂಗಳು 25ರಿಂದ 27 ಗರ್ಭಪಾತ ಮಾಡಿದ್ದರೆ, 2023 ಜುಲೈ 21ರಿಂದ ಆಗಸ್ಟ್‌ 16ರವರೆಗೆ ಬರೋಬ್ಬರಿ 242 ಗರ್ಭಪಾತ ಮಾಡಿದ್ದಾರೆ ಎಂದು ತಿಳಿಸಿದ್ದರು.

ಪ್ರಕರಣದಲ್ಲಿ ಆರೋಗ್ಯ ಇಲಾಖೆಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಪ್ರಮುಖ ಆರೋಪಿ ಡಾ.ಚಂದನ್ ಬಳ್ಳಾಲ್, ತನ್ನ ಮಾತಾ ಆಸ್ಪತ್ರೆಯನ್ನು ನೋಂದಣಿ ಮಾಡಿಸಿಕೊಂಡಿರಲಿಲ್ಲ. ಮೈಸೂರಿನ ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದರು.

ಇದನ್ನೂ ಓದಿ : ಹೆಣ್ಣು ಭ್ರೂಣ ಹತ್ಯೆ ಜಾಲ ಬೇಧಿಸಿದ ಪೊಲೀಸರು: 9 ಆರೋಪಿಗಳ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...