Homeಕರ್ನಾಟಕ'ನೈಸ್ ಯೋಜನೆ' ವಶಕ್ಕೆ ಪಡೆಯಿರಿ; ರಾಜ್ಯ ಸರ್ಕಾರಕ್ಕೆ ಮಾಜಿ ಪಿಎಂ ಆಗ್ರಹ

‘ನೈಸ್ ಯೋಜನೆ’ ವಶಕ್ಕೆ ಪಡೆಯಿರಿ; ರಾಜ್ಯ ಸರ್ಕಾರಕ್ಕೆ ಮಾಜಿ ಪಿಎಂ ಆಗ್ರಹ

- Advertisement -
- Advertisement -

ನೈಸ್ ಯೋಜನೆಯನ್ನು (ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸ್) ರಾಜ್ಯ ಸರ್ಕಾರ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ‘ಆ ಕಂಪನಿ ವಶದಲ್ಲಿರುವ 13404 ಎಕರೆಯಷ್ಟು ರೈತರ ಭೂಮಿಯನ್ನು ಸರ್ಕಾರ ಮರು ವಶಪಡಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಬಗ್ಗೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರೂ ಅವರು ಈವರೆಗೆ ಯಾವುದೇ ಕ್ರಮ ವಹಿಸಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಸಿದ್ದರಾಮಯ್ಯ ಬಡವರ ಪರ ಮಾತನಾಡುತ್ತಾರೆ. ಆ ಯೋಜನೆಯಲ್ಲಿ ಇಷ್ಟೊಂದು ಅಕ್ರಮ ಆಗಿದ್ದರೂ, ಬಡವರ ಭೂಮಿ ಲೂಟಿ ಹೊಡೆಯಲಾಗಿದ್ದರೂ ಏನು ಕ್ರಮ ತೆಗೆದುಕೊಂಡಿಲ್ಲ. ಬಡವರ ಪರ ಮಾತಾಡುವ ಸಿಎಂ ಯಾಕೆ ಕ್ರಮ ತೆಗೆದುಕೊಂಡಿಲ್ಲ’ ಎಂದು ಪ್ರಶ್ನಿಸಿದರು.

‘ಸಿದ್ದರಾಮಯ್ಯ ಅವರು ಎಷ್ಟು ವರ್ಷ ಆಳಿದರೂ ಈ ಕಪ್ಪುಚುಕ್ಕೆಯಿಂದ ಹೊರೆಗೆ ಬರಲು ಸಾಧ್ಯವಿಲ್ಲ. ಇದರ ವಿರುದ್ದ ಅವರು ಕ್ರಮ ತೆಗೆದುಕೊಳ್ಳದೇ ಹೋದರೆ ಅವರ ರಾಜಕೀಯ ಜೀವನಕ್ಕೆ ಇದೇ ಕಪ್ಪುಚುಕ್ಕೆಯಾಗಿ ಉಳಿದು ಹೋಗುತ್ತದೆ’ ಎಂದರು.

‘ನೈಸ್ ರಸ್ತೆ ಯೋಜನೆ ವಿಷಯ ಎಲ್ಲರಿಗೂ ಗೊತ್ತಿದೆ. ಅದರಲ್ಲಿ ಏನೇನು ನಡೆದಿದೆ ಎನ್ನುವುದೂ ತಿಳಿದಿದೆ. ಬಡವರಿಗೆ ಇದರಿಂದ ಅನ್ಯಾಯ ಆಗಿದೆ. ನಮ್ಮ ಪಕ್ಷ ಇದರ ವಿರುದ್ದ ದನಿ ಎತ್ತಿದೆ. ವಿಧಾನಸಭೆಯಲ್ಲೂ ಈ ಬಗ್ಗೆ ಸುದೀರ್ಘ ಚರ್ಚೆ ಆಗಿದೆ. ವಿಧಾನಸಭೆಯಲ್ಲಿ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಸದನ ಸಮಿತಿ ನೇಮಕ ಮಾಡಲಾಗಿತ್ತು. ಆ ಸದನ ಸಮಿತಿ ವರದಿ ಕೊಟ್ಟಿದೆ. ಎಷ್ಟು ಅಕ್ರಮ ಮಾಡಿದೆ, ಈ ಯೋಜನೆಯನ್ನು ಸರ್ಕಾರ ವಶಪಡಿಸಿಕೊಳ್ಳಬೇಕು ಎಂದು ವರದಿ ಕೊಟ್ಟಿದೆ. ಆದರೆ, ಸರ್ಕಾರ ಅಂತಿಮ ನಿರ್ಧಾರ ಮಾಡಿಲ್ಲ. ಇದಕ್ಕೆ ಕಾರಣ ಗೊತ್ತಿಲ್ಲ’ ಎಂದರು.

2023 ಅಕ್ಟೋಬರ್ 19 ರಂದು ನಾನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದೆ. ನೈಸ್ ವಿಚಾರವಾಗಿ ಕ್ರಮಕ್ಕೆ ಆಗ್ರಹಿಸಿದ್ದೆ. ಈ ಬಗ್ಗೆ ಖುದ್ದು ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದೇನೆ ಎಂದು ಮಾಹಿತಿ ನೀಡಿದ ಮಾಜಿ ಪ್ರಧಾನಿಗಳು, ತಾವು ಬರೆದಿದ್ದ ಪತ್ರವನ್ನು ಮಾಧ್ಯಮಗೋಷ್ಟಿಯಲ್ಲಿ ಬಿಡುಗಡೆ ಮಾಡಿದರು.

‘13404 ಎಕರೆಯಷ್ಟು ರೈತರ ಭೂಮಿಯನ್ನು ನೈಸ್ ವಶಪಡಿಸಿಕೊಂಡಿದೆ. ಅದನ್ನು ಸರ್ಕಾರ ಮರು ವಶಪಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದೆ. ಈ ಯೋಜನೆಯ ಮೌಲ್ಯ 7 ಸಾವಿರ ಕೋಟಿ ಎಂದು ಸದನ ಸಮಿತಿಯೇ ವರದಿ ಕೊಟ್ಟಿದೆ; ಅಧಿಕಾರಿಗಳೇ ಈ ವರದಿ ಕೊಟ್ಟಿದ್ದಾರೆ. ಹಿಂದೆ ಸೋನಿಯಾ ಗಾಂಧಿ ಅವರ ಬಳಿಯು ಈ ಯೋಜನೆಯ ಅಕ್ರಮಗಳ ಚರ್ಚೆ ಆಗಿದೆ. ಧರ್ಮಸಿಂಗ್ ಅವರ ಕಾಲದಲ್ಲಿಯೂ ಚರ್ಚೆ ಆಗಿತ್ತು. ಆಗ ಸೋನಿಯಾಗಾಂಧಿ ಅವರು ಧರ್ಮಸಿಂಗ್ ಅವರಿಗೆ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದರು’ ಎಂದು ಮಾಜಿ ಪ್ರಧಾನಿಗಳು ಹೇಳಿದರು.

‘ನಾನು ಜೀವನದಲ್ಲಿ ಒಂದೇ ಒಂದು ತಪ್ಪು ಮಾಡಿದೆ. ಒಳ್ಳೆಯ ರಸ್ತೆ ಆಗುತ್ತದೆ ಎಂಬ ಮಹಾತ್ವಕಾಂಕ್ಷೆಯಿಂದ ಮಾಡಿದೆ. ಮೈಸೂರಿಗೆ ಒಂದು ಗಂಟೆಯಲ್ಲಿ ಹೋಗಬಹುದು ಎಂಧೂ ಇದನ್ನು ಮಾಡಿದೆ. ಆದರೆ, ದೊಡ್ಡ ಪೆಟ್ಟು ಕೊಟ್ಟರು ಮಹಾನುಭಾವ ಸಿದ್ದರಾಮಯ್ಯನವರು ಇದನ್ನು ಸರಿ ಮಾಡಲಿ. ನಮ್ಮ ಪಕ್ಷ ನೈಸ್ ವಿಷಯದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ನಾನು ನಮ್ಮ ಪಕ್ಷ, ರೈತರು, ಬಡವರ ಪರ ಹೋರಾಟ ಮಾಡುತ್ತೇವೆ’ ಎಂದು ಹೇಳಿದರು.

ದನ್ನೂ ಓದಿ; ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...