Homeಕರ್ನಾಟಕಲೋಕಸಭಾ ಚುನಾವಣೆಯಲ್ಲಿ ಜನ ಬಿಜೆಪಿಗೆ ಮತ ಹಾಕಿರುವುದು ರಾಜ್ಯ ಸರ್ಕಾರ ಬೀಳಿಸಲು ಅಲ್ಲ - ಸಿದ್ದು

ಲೋಕಸಭಾ ಚುನಾವಣೆಯಲ್ಲಿ ಜನ ಬಿಜೆಪಿಗೆ ಮತ ಹಾಕಿರುವುದು ರಾಜ್ಯ ಸರ್ಕಾರ ಬೀಳಿಸಲು ಅಲ್ಲ – ಸಿದ್ದು

ಲೋಕಸಭಾ ಫಲಿತಾಂಶ ನಮಗೆ ವಿರುದ್ಧವಾಗಿ ಬಂದ ಮಾತ್ರಕ್ಕೆ ವಿಧಾನಸಭೆಯನ್ನೂ ವಿಸರ್ಜನೆ ಮಾಡಲಿ ಎಂದು ಹೇಳುವುದು ನಾನ್ ಸೆನ್ಸ್

- Advertisement -
- Advertisement -

ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ಮತ ನೀಡಿರುವುದು ಕೇಂದ್ರದಲ್ಲಿ ಅಧಿಕಾರ ನಡೆಸಲಿ ಎಂದೇ ಹೊರತು ರಾಜ್ಯದಲ್ಲಿನ ಸರ್ಕಾರ ಬೀಳಿಸಿ, ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿ ಎಂದಲ್ಲ. ಲೋಕಸಭಾ ಫಲಿತಾಂಶ ನಮಗೆ ವಿರುದ್ಧವಾಗಿ ಬಂದ ಮಾತ್ರಕ್ಕೆ ವಿಧಾನಸಭೆಯನ್ನೂ ವಿಸರ್ಜನೆ ಮಾಡಲಿ ಎಂದು ಹೇಳುವುದು ನಾನ್ ಸೆನ್ಸ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಫೇಸ್ ಬುಕ್ ನಲ್ಲಿ ಬರೆದಿರುವ ಅವರು, “ರಮೇಶ್ ಜಾರಕಿಹೊಳಿ ಸೇರಿದಂತೆ ಯಾವೊಬ್ಬ ಕಾಂಗ್ರೆಸ್ ಶಾಸಕನೂ ಪಕ್ಷ ತೊರೆಯುವುದಿಲ್ಲ. ಕಳೆದ ಒಂದು ವರ್ಷದಿಂದ ಸರ್ಕಾರ ಬೀಳುತ್ತೆ ಅಂತ ಯಡಿಯೂರಪ್ಪ ಹೇಳುತ್ತಲೇ ಇದ್ದಾರೆ, ಇನ್ನೂ 4 ವರ್ಷ ಅದೇ ಮಾತು ಹೇಳುತ್ತಲೇ ಇರುತ್ತಾರೆ. ಸರ್ಕಾರ ಮಾತ್ರ ಸುಭದ್ರವಾಗಿರುತ್ತದೆ ಎಂಬ ಭರವಸೆಯಿದೆ. ಜೂನ್ 1ರ ಒಳಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡುತ್ತೇನೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ. ಒಂದು ವೇಳೆ ಈ ಬಾರಿಯೂ ಅವರಿಂದ ಸರ್ಕಾರ ರಚನೆ ಮಾಡಲು ಸಾಧ್ಯವಾಗದಿದ್ದರೆ ಅವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವುದೇ ಸೂಕ್ತ” ಎಂದಿದ್ದಾರೆ.

ನಿನ್ನೆ ತಾನೇ ಇತ್ತೀಚಿಗೆ ಬಿಜೆಪಿ ಸೇರಿರುವ ಮಾಜಿ ಸಿಎಂ ಎಸ್.ಎಂ ಕೃಷ್ಣರವರ ಮನೆಯಲ್ಲಿ ಕಾಂಗ್ರೆಸ್ ಶಾಸಕರುಗಳಾದ ಸುಧಾಕರ್ ಮತ್ತು ರಮೇಶ್ ಜಾರಕಿಹೊಳಿ ಇದ್ದಿದ್ದು ಕಂಡಬಂದ ನಂತರ ಆಪರೇಷನ್ ಕಮಲ ಮುಂದುವರೆಯುತ್ತಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಈ ಪೋಸ್ಟ್ ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...