Homeಕರ್ನಾಟಕಇಶಾ ಫೌಂಡೇಶನ್‌ನ ಆದಿಯೋಗಿ ಪ್ರತಿಮೆ ಅನಾವರಣಕ್ಕೆ ಅನುಮತಿ ನೀಡಿದ ರಾಜ್ಯ ಹೈಕೋರ್ಟ್

ಇಶಾ ಫೌಂಡೇಶನ್‌ನ ಆದಿಯೋಗಿ ಪ್ರತಿಮೆ ಅನಾವರಣಕ್ಕೆ ಅನುಮತಿ ನೀಡಿದ ರಾಜ್ಯ ಹೈಕೋರ್ಟ್

ಪ್ರತಿಮೆಯನ್ನು ಉದ್ಘಾಟಿಸಲು ಉಪ ರಾಷ್ಟ್ರಪತಿ ಆಗಮಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕೂಡಾ ಭಾಗವಹಿಸಲಿದ್ದಾರೆ

- Advertisement -
- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆಯ ಅನಾವರಣ ಸಮಾರಂಭವನ್ನು ನಿಗದಿತ ವೇಳಾಪಟ್ಟಿಯಂತೆ ನಡೆಸಲು ರಾಜ್ಯ ಹೈಕೋರ್ಟ್‌ ಶುಕ್ರವಾರ ಅನುಮತಿ ನೀಡಿದೆ. ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್‌ ನಿರ್ಮಿಸುತ್ತಿರುವ ಈ ಪ್ರತಿಮೆಯು ಪರಿಸರ ಸೂಕ್ಷ್ಮ ಪ್ರದೇಶದಲ್ಲಿದೆ ಎಂದು ಆರೋಪಿಸಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ.

ಪ್ರತಿಮೆಯನ್ನು ಉದ್ಘಾಟಿಸಲು ಉಪ ರಾಷ್ಟ್ರಪತಿ ಆಗಮಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕೂಡಾ ಭಾಗವಹಿಸಲಿದ್ದಾರೆ. “ಕೆಲವು ಗಣ್ಯರು ಭಾಗವಹಿಸುವ ಅನುಕೂಲವನ್ನು ಆಧರಿಸಿ ಪ್ರತಿಮೆ ಅನಾವರಣ ದಿನಾಂಕವನ್ನು ನಿರ್ಧರಿಸಲಾಗಿದೆ. ಪಿಐಎಲ್ ಸಲ್ಲಿಸುವ ಮೊದಲು ಅದನ್ನು ನಿರ್ಧರಿಸಲಾಗಿದೆ” ಎಂದು ನ್ಯಾಯಾಲಯ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠವು ಕಾರ್ಯಕ್ರಮಕ್ಕೆ ಅಗತ್ಯವಿರುವ ಪ್ರದೇಶದ ಹೊರಗೆ ಯಾವುದೇ ನಿರ್ಮಾಣ ಅಥವಾ ಅರಣ್ಯನಾಶವನ್ನು ನಡೆಸುವುದಿಲ್ಲ ಎಂಬ ಇಶಾ ಫೌಂಡೇಶನ್‌ ನೀಡಿದ ಭರವಸೆಯನ್ನು ಅಂಗೀಕರಿಸಿತು.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ,“ಪ್ರತಿವಾದಿ ಸಂಖ್ಯೆ ಆರಕ್ಕೆ ಅನುಮತಿ ನೀಡುವುದು ಸೂಕ್ತವೆಂದು ನಾವು ಪರಿಗಣಿಸುತ್ತೇವೆ. ಜನವರಿ 11ರ ನಮ್ಮ ಆದೇಶವು ಜನವರಿ 15 ರಂದು ನಿಗದಿತ ಕಾರ್ಯಚಟುವಟಿಕೆಗೆ ಅಡ್ಡಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸುತ್ತದೆ” ಎಂದು ನ್ಯಾಯಾಲಯವು ಹೇಳಿದೆ.

ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ದಂಧೆ ನಡೆಸಲಾಗುತ್ತಿದೆ ಎಂದು ನಂದಿಬೆಟ್ಟದ ಬಳಿಯ ಚಿಕ್ಕಬಳ್ಳಾಪುರದ ರೈತರಾದ ಕ್ಯಾತಪ್ಪ ಎಸ್. ಮತ್ತು ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ದೂರಲಾಗಿದೆ.

ವಾಹನಗಳು ಮತ್ತು ಜನರ ಚಲನೆಯಿಂದ ಉಂಟಾಗುವ ಜನಸಂಖ್ಯಾ ಒತ್ತಡದ ಜೊತೆಗೆ, ಸುಮಾರು ಐದು ಲಕ್ಷ ಜನರನ್ನು ಒಟ್ಟುಗೂಡಿಸುವುದರಿಂದ ಸಸ್ಯ ಮತ್ತು ಪ್ರಾಣಿಗಳಿಗೆ ಬದಲಾಯಿಸಲಾಗದ ಹಾನಿ ಉಂಟಾಗುತ್ತದೆ ಎಂದು ಅರ್ಜಿದಾರರು ಹೇಳಿದ್ದಾರೆ.

ಉತ್ತರ ಪಿನಾಕಿನಿ ಮತ್ತು ದಕ್ಷಿಣ ಪಿನಾಕಿನಿ ನದಿಗಳು ಹುಟ್ಟುವ ನಂದಿ ಬೆಟ್ಟಗಳ ಮೇಲೆ ಈ ನಿರ್ಮಾಣಗಳು ಪರಿಣಾಮ ಬೀರಲಿದೆ. ಇಶಾ ಕೇಂದ್ರವು ಶಿವನ ಪ್ರತಿಮೆಯನ್ನು ಆಮದು ಮಾಡಿಕೊಂಡಿದ್ದು, ಅದನ್ನು ರಾತ್ರೋರಾತ್ರಿ ಒಟ್ಟಿಗೆ ಸೇರಿಸಿ ನಡೆಸಿದ ಪ್ರಕ್ರಿಯೆಯಲ್ಲಿ ಭೂದೃಶ್ಯವನ್ನು ವಿರೂಪಗೊಳಿಸಿದೆ ಎಂದು ಪಿಐಎಲ್ ಹೇಳಿದೆ.

ಬುಧವಾರದಂದು ಆದಿಯೋಗಿ ಪ್ರತಿಮೆ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಕಾಮಗಾರಿ ನಡೆಸಬಾರದು ಎಂದು ರಾಜ್ಯ ಹೈಕೋರ್ಟ್‌ ಆದೇಶಿಸಿತ್ತು. ಪ್ರತಿಮೆ ನಿರ್ಮಾಣವಾಗುತ್ತಿರುವ ಸ್ಥಳದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ಇಶಾ ಫೌಂಡೇಶನ್‌ ನಿರ್ಮಿಸಿರುವ 112 ಅಡಿ ಎತ್ತರದ ಪ್ರತಿಮೆಯನ್ನು ಜನವರಿ 15 ರಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ಅನಾವರಣಗೊಳಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ಪಾಲ್ಗೊಳ್ಳಲಿದ್ದಾರೆ. ಈ ಪ್ರತಿಮೆಯು ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಇಶಾ ಯೋಗ ಕೇಂದ್ರದ ನಿಖರವಾದ ಪ್ರತಿರೂಪವಾಗಿದೆ ಎಂದು ಫೌಂಡೇಶನ್ ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...