Homeಕರ್ನಾಟಕಮುಸ್ಲಿಂ ವಿದ್ಯಾರ್ಥಿನಿಯರ ರಿಟ್‌ ಅರ್ಜಿ ವಜಾ; ಹಿಜಾಬ್ ನಿರ್ಬಂಧ ಎತ್ತಿ ಹಿಡಿದ ಹೈಕೋರ್ಟ್

ಮುಸ್ಲಿಂ ವಿದ್ಯಾರ್ಥಿನಿಯರ ರಿಟ್‌ ಅರ್ಜಿ ವಜಾ; ಹಿಜಾಬ್ ನಿರ್ಬಂಧ ಎತ್ತಿ ಹಿಡಿದ ಹೈಕೋರ್ಟ್

- Advertisement -
- Advertisement -

ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ತೀರ್ಪು ಮಂಗಳವಾರ ರಾಜ್ಯ ಹೈಕೋರ್ಟ್‌ ನೀಡಿದ್ದು, ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಹೇಳಿದೆ. ಸಮವಸ್ತ್ರವನ್ನು ಸೂಚಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ ಎಂದು ಹೇಳಿರುವ ಕೋರ್ಟ್‌ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿದೆ.

ಫೆಬ್ರವರಿ 25 ರಂದು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ಅಂತಿಮ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು.

ಇಂದು ನ್ಯಾಯಾಲಯದಲ್ಲಿ ತೀರ್ಪನ್ನು ಓದಿದ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ಥಿ, “ಇಡೀ ಪ್ರಕರಣದ ಸಮಗ್ರ ದೃಷ್ಟಿಕೋನವನ್ನು ತೆಗೆದುಕೊಂಡು, ನಾವು ಕೆಲವು ಪ್ರಶ್ನೆಗಳನ್ನು ರೂಪಿಸಿದ್ದೇವೆ. ಮತ್ತು ಅದಕ್ಕೆ ಅನುಗುಣವಾಗಿ ಉತ್ತರಿಸಿದ್ದೇವೆ” ಎಂದು ಹೇಳಿದರು.

“ಪ್ರಶ್ನೆಗಳನ್ನು ಹೀಗೆ ರೂಪಿಸಲಾಗಿದೆ: 1. ಆರ್ಟಿಕಲ್‌ 25 ರ ಅಡಿಯಲ್ಲಿ ಇಸ್ಲಾಮಿಕ್ ನಂಬಿಕೆಯಲ್ಲಿ ಹಿಜಾಬ್ ಧರಿಸುವುದು ಅತ್ಯಗತ್ಯ ಧಾರ್ಮೀಕ ಆಚರಣೆ ಆಗಿದೆಯೇ? 2. ಶಾಲಾ ಸಮವಸ್ತ್ರದ ಸೂಚನೆಯು ಹಕ್ಕುಗಳ ಉಲ್ಲಂಘನೆಯಾಗಿದೆಯೇ? ಫೆಬ್ರುವರಿ 5 ರ ಸರ್ಕಾರಿ ಆದೇಶವು ಅಸಮರ್ಥ ಮತ್ತು ಸ್ಪಷ್ಟವಾಗಿ ಆರ್ಟಿಕಲ್ 14 ಮತ್ತು 15 ಅನ್ನು ಉಲ್ಲಂಘಿಸುತ್ತದೆಯೇ ಎಂಬುದು ಮೂರನೇ ಪ್ರಶ್ನೆಯಾಗಿದೆ” ಎಂದು ಹೇಳಿದ್ದಾರೆ.

ಈ ಪ್ರಶ್ನೆಗಳಿಗೆ ಉತ್ತರಿಸುತ್ತಾ ತೀರ್ಪು ಪ್ರಕಟಿಸಿದ ಮುಖ್ಯ ನ್ಯಾಯಮೂರ್ತಿ, “ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ. ಸಮವಸ್ತ್ರವನ್ನು ಸೂಚಿಸುವುದು ಮೂಲಭೂತ ಹಕ್ಕುಗಳ ಮೇಲೆ ಸಮಂಜಸವಾದ ನಿರ್ಬಂಧವಾಗಿದೆ” ಎಂದು ಹೇಳಿದ್ದಾರೆ.

ಜೊತೆಗೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಮತ್ತು ಫೆಬ್ರವರಿ 5 ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ ಎಲ್ಲಾ ರಿಟ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

3 COMMENTS

  1. ಹಿಜಾಬ್ ಪ್ರಕರಣದ ಆದೇಶವನ್ನು ಗೌ. ಕೋರ್ಟ್ ಶಾಲಾ ಕಾಲೇಜುಗಳಲ್ಲಿ ಮಾತ್ರ ಅಲ್ಲ…. ಸರ್ಕಾರದ ಎಲ್ಲಾ ಕಚೇರಿ ಯ ಒಳಗಡೆಯೂ ವಿಸ್ತರಿಸಬಹುದಿತ್ತು.( +ve Or – ve) ಆದರೆ ತೀರ್ಪು ಸಮಂಜಸವಾಗಿದೆ. …… ಈ ತೀರ್ಪು ವ್ಯತಿರಿಕ್ತ ವಾಗುತ್ತಿದ್ದರೆ ಜಾತ್ಯತೀತ ರಾಷ್ಟ್ರ ದಲ್ಲಿ ವಸ್ತ್ರ ಸಂಹಿತೆ ಗೆ ಸಮಾನತೆ ಸಿಕ್ಕಿದಂತಾಗುವುದೇ…? ಆದ್ದರಿಂದ ನಾವೆಲ್ಲರೂ ತೀರ್ಪನ್ನು ಗೌರವಿಸಬೇಕಲ್ಲವೇ… 🙏

  2. ನ್ಯಾಯಾಲಯದ ತೀರ್ಪನ್ನು ಗೌರವಿಸೋಣ. ಇದಕ್ಕೆ ಆಕ್ಷೇಪ ಇದ್ದಲ್ಲಿ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಅವಕಾಶ ಇದೆ. ವಿವೇಕ ವರ್ತನೆ ಸಂವಿಧಾನ ರಕ್ಷಣೆ ನಮ್ಮೆಲ್ಲರ ಕರ್ತವ್ಯ

  3. ಒಪ್ಪಿಗೆ ಇದೆ. ಮುಂದಿನ ಹೋರಾಟವನ್ನು ಸಮಾಧಾನವಾಗಿ ಕುರಿತು ಆಲೋಚಿಸಬೇಕಿದೆ ಮಾತ್ರವಲ್ಲ. ಇತರ ಶೈಕ್ಷಣಿಕ ಸಂಸ್ಥೆಗಳ ನಿರ್ಧಾರಕ್ಕಾಗಿ ಕಾಯಬೇಕಿದೆ. ಅಲ್ಪ ಸಂಖ್ಯಾತ ಶಿಕ್ಷಣ ಸಂಸ್ಥೆಗಳ ಬಲವರ್ಧನೆ ಮಾಡಬೇಕಿದೆ.

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...