ರಾಜ್ಯವು ದೇಶಕ್ಕೆ ಸಂಗ್ರಹಿಸಿಕೊಡುವ ಪ್ರತಿ 100 ರೂಪಾಯಿಗಳಿಗೆ 12.50 ರೂಪಾಯಿ ಮಾತ್ರ ರಾಜ್ಯಕ್ಕೆ ಮರಳಿ ಬರುತ್ತಿದೆ. ಕರ್ನಾಟಕದಿಂದ ವಾರ್ಷಿಕ ರೂ. 4 ಲಕ್ಷ ಕೋಟಿ ಆದಾಯ ಗಳಿಕೆಯಾದರೆ, ಇದಕ್ಕೆ ಪ್ರತಿಯಾಗಿ ಕೇಂದ್ರದಿಂದ ನಮಗೆ ಬರುವುದು ಸುಮಾರು ರೂ. 50,000 ಕೋಟಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನ ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ‘ಆರ್ಥಿಕ ಸಂಯುಕ್ತ ತತ್ವ : 16 ನೇ ಹಣಕಾಸು ಆಯೋಗದ ಮುಂದಿರುವ ಸವಾಲು’ಗಳು ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಸಿಎಂ ಮಾತನಾಡಿದರು.
ರಾಜ್ಯವು ದೇಶಕ್ಕೆ ಸಂಗ್ರಹಿಸಿಕೊಡುವ ಪ್ರತಿ 100 ರೂಪಾಯಿಗಳಿಗೆ 12.50 ರೂಪಾಯಿ ಮಾತ್ರ ರಾಜ್ಯಕ್ಕೆ ಮರಳಿ ಬರುತ್ತಿದೆ.
ಕರ್ನಾಟಕದಿಂದ ವಾರ್ಷಿಕ ರೂ. 4 ಲಕ್ಷ ಕೋಟಿ ಆದಾಯ ಗಳಿಕೆಯಾದರೆ ಇದಕ್ಕೆ ಪ್ರತಿಯಾಗಿ ಕೇಂದ್ರದಿಂದ ನಮಗೆ ಬರುವುದು ಸುಮಾರು ರೂ. 50,000 ಕೋಟಿ.(ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ… pic.twitter.com/aHR1B31p6d
— CM of Karnataka (@CMofKarnataka) January 20, 2024
15ನೇ ಹಣಕಾಸು ಆಯೋಗದ ಶಿಫಾರಸ್ಸುಗಳಿಂದ ಕರ್ನಾಟಕಕ್ಕೆ 5 ವರ್ಷಗಳ ಅವಧಿಯಲ್ಲಿ ರೂ. 62,000 ಕೋಟಿ ನಷ್ಟ ಆಗಲಿದೆ ಎಂದು ಸಿಎಂ ಹೇಳಿದರು.
ಹಿಂದಿನ ಹಣಕಾಸು ಆಯೋಗದ ಶಿಫಾರಸ್ಸುಗಳಿಂದಾಗಿ ಕರ್ನಾಟಕ ಭಾರೀ ನಷ್ಟವನ್ನು ಅನುಭವಿಸಬೇಕಾಗಿ ಬಂದಿದ್ದು, ಇದನ್ನು 16ನೇ ಹಣಕಾಸು ಆಯೋಗದ ಮುಂದೆ ಪ್ರಶ್ನಿಸಬೇಕಿದೆ. 14ನೇ ಹಣಕಾಸು ಆಯೋಗದಡಿ ಕರ್ನಾಟಕದ ಪಾಲಿನ ತೆರಿಗೆ ಹಂಚಿಕೆಯು ಶೇ 4.713 ರಿಂದ ಶೇ. 3.647 ಕ್ಕೆ 15ನೇ ಹಣಕಾಸು ಆಯೋಗದಿಂದಾಗಿ ಇಳಿದಿದೆ ಎಂದರು.
ರಾಜ್ಯಗಳ ಪೈಕಿ ಕರ್ನಾಟಕಕ್ಕೆ ಅತ್ಯಂತ ದೊಡ್ಡ ಮೊತ್ತ, ಅಂದರೆ ಶೇ 1.066 ರಷ್ಟು ಇಳಿಕೆಯಾಗಿದೆ. ಈಗಿನ ವ್ಯವಸ್ಥೆ ಆದಾಯದ ದೂರ ವ್ಯಾಪ್ತಿಯನ್ನು ಪರಿಗಣಿಸಿಸುತ್ತಿದ್ದು, ಈ ಪ್ರಕಾರ ಕರ್ನಾಟಕವು ಅತಿ ಹೆಚ್ಚು ತಲಾ ಆದಾಯವಿರುವ ರಾಜ್ಯಕ್ಕೆ ಹೋಲಿಸಿ ಆದಾಯ ಕಡಿಮೆ ದೂರವ್ಯಾಪ್ತಿ ಇರುವ ಕಾರಣ ಸೋಲುತ್ತಿದೆ ಎಂದು ತಿಳಿಸಿದರು.
ಬೆಂಗಳೂರು ನಗರ ಜಿಲ್ಲೆಯಲ್ಲಿ ರೂ.6,21,131 ಕೋಟಿಗೂ ಹೆಚ್ಚಿನ ತಲಾ ಆದಾಯ ಮಟ್ಟವನ್ನು ಕಾಣಬಹುದಾಗಿದೆ ಎನ್ನುವುದನ್ನು ಪರಿಗಣಿಸುವುದು ಮುಖ್ಯ. ಈ ವ್ಯವಸ್ಥೆ ಕರ್ನಾಟಕಕ್ಕೆ ಕೆಲವು ಜಿಲ್ಲೆಗಳಲ್ಲಿ ಕಡಿಮೆಯಿರುವ ತಲಾ ಆದಾಯದ ಸಮಸ್ಯೆಯನ್ನು ಬಗೆಹರಿಸಲು ಸಾಕಷ್ಟು ಸಂಪನ್ಮೂಲ ವರ್ಗಾವಣೆಯಿಂದ ವಂಚಿತವಾಗಿಸಿದೆ. ಅಂತರ ರಾಜ್ಯ ತಲಾ ಆದಾಯ ವ್ಯತ್ಯಾಸಗಳಿಗೆ ಹಣಕಾಸು ಆಯೋಗಗಳು ಅಗತ್ಯವಿರುವ ಹೊಂದಾಣಿಕೆಯನ್ನು ಮಾಡಿಕೊಂಡು ಶಿಫಾರಸ್ಸುಗಳನ್ನು ಮಾಡುವಾಗ ಆದಾಯ ದೂರವ್ಯಾಪ್ತಿಯನ್ನು ಪರಿಗಣಿಸಬೇಕು ಎಂದು ಸಿಎಂ ಆಗ್ರಹಿಸಿದರು.
ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಕ್ಕೆ ತನ್ನ ಕೊಡುಗೆಗೆ ತಕ್ಕ ಪ್ರತಿಫಲ ದೊರಕದಿರುವುದು ವಿಪರ್ಯಾಸ. 16ನೇ ಹಣಕಾಸು ಆಯೋಗವು ದಕ್ಷತೆಗೆ ಪ್ರೋತ್ಸಾಹಕಗಳನ್ನು ಹಾಗೂ ವಿತ್ತೀಯ ಕಾರ್ಯಕ್ಷಮತೆಗೆ ನೀಡುವ ಬೆಲೆಯನ್ನು ಹೆಚ್ಚಿಸುವಂತೆ 16ನೇ ಹಣಕಾಸು ಆಯೋಗವನ್ನು ನಾವು ಒತ್ತಾಯಿಸುತ್ತೇವೆ ಎಂದರು.
ಅತ್ಯುತ್ತಮ ವಿತ್ತೀಯ ಕಾರ್ಯಕ್ಷಮತೆ ಹೊಂದಿರುವ ರಾಜ್ಯ ಎಂದು ದಾಖಲೆ ಹೊಂದಿರುವ ನಮ್ಮ ರಾಜ್ಯಕ್ಕೆ ಅದರ ದಕ್ಷತೆಗಾಗಿ ಯಾವುದೇ ಪ್ರೋತ್ಸಾಹಕಗಳು ದೊರೆಯುತ್ತಿಲ್ಲ. ಕರ್ನಾಟಕದ ಭಾರಿ ವಿತ್ತೀಯ ಕಾರ್ಯಕ್ಷಮತೆ ಗಮನಾರ್ಹವಾಗಿದ್ದು ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಘೋಷಿಸಿದ ಮೊದಲ ರಾಜ್ಯವೆಂದು ಹೆಗ್ಗಳಿಕೆ ಪಡೆದಿದೆ. ಕೋವಿಡ್ ನಂತರದಲ್ಲಿ ರಾಜಸ್ವ ಕೊರತೆಗಳು ಮರುಕಳಿಸಿದ್ದನ್ನು ಹೊರತುಪಡಿಸಿ ಭಾರಿ ಗಾತ್ರದ ವಿತ್ತೀಯ ಸೂಚಕಗಳಾದ ವಿತ್ತೀಯ ಕೊರತೆ ಮತ್ತು ರಾಜಸ್ವ ಕೊರತೆ ಸದಾ ನಿಗದಿತ ವ್ಯಾಪ್ತಿಯಲ್ಲಿಯೇ ಇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಬಲೀಕೃತ ಸಮಿತಿಗಳ ಅಂದಾಜು ಬಳಸಿ ಮಾಡುವ ಒಟ್ಟು ಪ್ರಯತ್ನದ ಹೊರತಾಗಿಯೂ ರಾಜ್ಯ ಸತತವಾದ ಪ್ರಾದೇಶಿಕ ಅಸಮತೋಲನವನ್ನು ಎದುರಿಸುತ್ತಿದೆ. 2022-23ರ ಆರ್ಥಿಕ ಸಮೀಕ್ಷೆಯ ಪ್ರಕಾರ, 6,21,131 ರೂ.ಗಳ ತಲಾದಾಯವನ್ನು ಹೊಂದಿರುವ ಬೆಂಗಳೂರು ನಗರ ಪ್ರಥಮ ಸ್ಥಾನದಲ್ಲಿದ್ದು, 1,24,998 ರೂ.ಗಳ ತಲಾ ಆದಾಯವನ್ನು ಹೊಂದಿರುವ ಕಲಬುರಗಿ ಕೊನೆಯ ಸ್ಥಾನದಲ್ಲಿದೆ ಎಂದು ತಿಳಿಸಿದರು
ಬೆಂಗಳೂರು ನಗರದ ಮಾನವ ಅಭಿವೃದ್ಧಿ ಸೂಚ್ಯಂಕ 0.738 ಪಡೆದು ಮೊದಲ ಸ್ಥಾನದಲ್ಲಿದ್ದರೆ, ಯಾದಗಿರಿ, ಕಲಬುರಗಿ ಮತ್ತು ರಾಯಚೂರು 0.538, 0.539 ಹಾಗೂ 0.562 ಅನುಕ್ರಮವಾಗಿ ಮಾನವ ಅಭಿವೃದ್ಧಿ ಸೂಚ್ಯಂಕ ಪಡೆದು ಕೊನೆಯ ಮೂರು ಸ್ಥಾನಗಳಲ್ಲಿದ್ದು, ಮಾನವ ಅಭಿವೃದ್ಧಿಯ ಅಸಮತೋಲನ ಗಮನಾರ್ಹವಾಗಿದೆ ಎಂದು ಹೇಳಿದರು.
ಇದನ್ನೂ ಓದಿ : “ಬಿಜೆಪಿ ಗೂಂಡಾಗಳಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆ ಮೇಲೆ ದಾಳಿ”: ಕಾಂಗ್ರೆಸ್ ಆರೋಪ


