Homeಕರ್ನಾಟಕ‘ರಾಜ್ಯವು ನಿಯಂತ್ರಣದಲ್ಲಿದೆ’: ‘ಹಿಜಾಬ್‌‌’ ವಿಚಾರಣೆಯ ಸಮಯ ನ್ಯಾಯಾಲಯಕ್ಕೆ ತಿಳಿಸಿದ ರಾಜ್ಯ ಸರ್ಕಾರ!

‘ರಾಜ್ಯವು ನಿಯಂತ್ರಣದಲ್ಲಿದೆ’: ‘ಹಿಜಾಬ್‌‌’ ವಿಚಾರಣೆಯ ಸಮಯ ನ್ಯಾಯಾಲಯಕ್ಕೆ ತಿಳಿಸಿದ ರಾಜ್ಯ ಸರ್ಕಾರ!

- Advertisement -
- Advertisement -

ಹಿಜಾಬ್ ಧರಿಸಿ ಪ್ರವೇಶ ನಿರಾಕರಿಸಿರುವುದನ್ನು ಪ್ರಶ್ನಿಸಿ, ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನೀಡುವಂತೆ ಕೋರಿ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ “ರಾಜ್ಯವು ನಿಯಂತ್ರಣದಲ್ಲಿದೆ” ಎಂದು ರಾಜ್ಯ ಸರ್ಕಾರ ಹೇಳಿದೆ.

ವಿದ್ಯಾರ್ಥಿನಿಯರು ಸಲ್ಲಿಸಿದ ನಾಲ್ಕು ಅರ್ಜಿಗಳ ವಿಚಾರಣೆಯನ್ನು ಕೋರ್ಟ್‌ ಮಂಗಳವಾರ ಪ್ರಾರಂಭಿಸಿದೆ. ವಿದ್ಯಾರ್ಥಿನಿಯರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ದೇವದತ್ ಕಾಮತ್‌, “ಹಿಜಾಬ್ ಬಗ್ಗೆ ಕೋರ್ಟ್ ವಿಚಾರಣೆ ನಡೆಸುತ್ತಿದ್ದಾಗ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಕಾನೂನನ್ನು ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ಹಿಜಾಬ್ ಧರಿಸಿರುವ ಹುಡುಗಿಯರನ್ನು ಕೆಲವು ಹುಡುಗರು ಬೆನ್ನಟ್ಟುವ ಚಿತ್ರಗಳಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Hijab Live | ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿಲ್ಲ ಎಂದು ಕೋರ್ಟ್‌ನಲ್ಲಿ ಸುಳ್ಳು ಹೇಳಿದ ರಾಜ್ಯ ಸರ್ಕಾರ

ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ ಅಡ್ವೋಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ, “ಇಂತಹ ಹೇಳಿಕೆಗಳು ತಪ್ಪು ಸಂಕೇತವನ್ನು ನೀಡುತ್ತವೆ. ಹಿಜಾಬ್ ಧರಿಸಿರುವ ಹುಡುಗಿಯರ ಮೇಲೆ ದಾಳಿ ಮಾಡಲಾಗುತ್ತಿದೆ ಎಂಬಂತಹ ಹೇಳಿಕೆಗಳು ಅಪಾಯಕಾರಿ. ರಾಜ್ಯವು ನಿಯಂತ್ರಣದಲ್ಲಿದೆ” ಎಂದು ಹೇಳಿದ್ದಾರೆ.

ಆದರೆ ಮಾಧ್ಯಮಗಳು ವರದಿ ಮಾಡಿರುವಂತೆ ರಾಜ್ಯದಾದ್ಯಂತ ಹಲವು ಕಾಲೇಜುಗಳಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಿದೆ. ಮಂಡ್ಯದಲ್ಲಿ ಬುರ್ಖಾ ಧರಿಸಿರುವ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಸುತ್ತುವರೆದು ‘ಜೈಶ್ರೀರಾಮ್’ ಘೋಷಣೆ ಕೂಗಿದ್ದಾರೆ. ಶಿವಮೊಗ್ಗದ ಕಾಲೇಜಿನಲ್ಲಿ ರಾಷ್ಟ್ರಧ್ವಜ ಹಾರಿಸುವ ಧ್ವಜಸ್ಥಂಧದಲ್ಲಿ ಕೇಸರಿ ಧ್ವಜವನ್ನು ಹಾರಿಸಲಾಗಿದೆ.

ಮತ್ತೊಂದು ಪ್ರದೇಶದಲ್ಲಿ ಕೇಸರಿ ಶಾಲು ಹಾಕಿರುವ ವಿದ್ಯಾರ್ಥಿಗಳು ಕಾಲೇಜಿಗೆ ಕಲ್ಲೆಸೆದಿದ್ದಾರೆ. ಮತ್ತೊಂದು ಕಡೆಯಲ್ಲಿ ಬೀದಿಯಲ್ಲಿ ಹೊಡೆದಾಡಿಕೊಂಡಿದ್ದಾರೆ. ಮಡಿಕೇರಿಯಲ್ಲಿ ಕೇಸರಿ ಶಾಲು ಧರಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ ಹೊಡೆದಾಟ ನಡೆದು, ಚೂರಿ ಇರಿತ ಮಾಡಲಾಗಿದೆ.

ಇದನ್ನೂ ಓದಿ:ಕುಶಾಲನಗರ: ಕೇಸರಿ ಶಾಲು ಹಾಕುವಂತೆ ಒತ್ತಾಯಿಸಿದ ವಿದ್ಯಾರ್ಥಿಗೆ ಚಾಕುವಿನಿಂದ ಇರಿತ 

ಈ ನಡುವೆ ಎಲ್ಲಾ ಪ್ರೌಢಶಾಲೆ ಹಾಗೂ ಕಾಲೇಜುಗಳನ್ನು ಮುಂದಿನ ಮೂರು ದಿನಗಳ ಕಾಲ ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ದೀಕ್ಷಿತ್, “ನಾನು ತಾಳ್ಮೆಯಿಂದ ವಿಚಾರಣೆ ನಡೆಸುತ್ತಿದ್ದೇನೆ. ಸಂವಿಧಾನದಲ್ಲಿ ಜನರಿಗೆ ನಂಬಿಕೆ ಇರಬೇಕು. ಚೇಷ್ಟೆ ಮಾಡುವುದರಿಂದ ಸಮಸ್ಯೆ ಇನ್ನೂ ಉರಿಯುವಂತೆ ಮಾಡುತ್ತದೆ” ಎಂದು ಹೇಳಿದ್ದಾರೆ.

“ಪ್ರಕರಣದ ಮುಂದಿನ ವಿಚಾರಣೆ ಬಾಕಿಯಿದೆ. ಈ ನ್ಯಾಯಾಲಯವು ವಿದ್ಯಾರ್ಥಿ ಸಮುದಾಯ ಮತ್ತು ಸಾರ್ವಜನಿಕರಿಗೆ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಲು ವಿನಂತಿಸುತ್ತದೆ. ನ್ಯಾಯಾಲಯವು ಸಾರ್ವಜನಿಕರ ಬುದ್ಧಿವಂತಿಕೆ ಮತ್ತು ಸದ್ಗುಣದಲ್ಲಿ ಸಂಪೂರ್ಣ ನಂಬಿಕೆಯನ್ನು ಹೊಂದಿದೆ ಮತ್ತು ಅದನ್ನು ಆಚರಣೆಗೆ ತರಬೇಕೆಂದು ಅದು ಆಶಿಸುತ್ತದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

ಜೂಮ್‌ ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆಯಲ್ಲಿ ಭಾಗಿಯಾಗಿದ್ದ ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವದಗಿ ಸರ್ಕಾರದ ಪರವಾಗಿ ವಾದಿಸಿದ್ದಾರೆ. ವಿದ್ಯಾರ್ಥಿನಿಯರ ಪರವಾಗಿ ಹಿರಿಯ ವಕೀಲ ದೇವದತ್ತ ಕಾಮತ್‌ ಮತ್ತು ಮೊಹಮ್ಮದ್ ತಾಹೀರ್‌ ವಾದಿಸಿದ್ದಾರೆ. ಈಗಾಗಲೇ ಹಿಜಾಬ್‌ ಪರವಾಗಿ ಹಲವಾರು ವಿಷಯಗಳನ್ನು ನ್ಯಾಯಾಲಯದಲ್ಲಿ ಹಿರಿಯ ವಕೀಲ ದೇವದತ್ತ ಕಾಮತ್‌ ಮಂಡಿಸಿದ್ದಾರೆ. ನ್ಯಾಯಾಲಯವು ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.

ಇದನ್ನೂ ಓದಿ: Hijab Live | ಹಿಜಾಬ್‌ ಅರ್ಜಿ ವಿಚಾರಣೆ ಲೈವ್‌ | ವಿಚಾರಣೆ ಬುಧವಾರಕ್ಕೆ ಮುಂದೂಡಿದ ನ್ಯಾಯಾಲಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ಲೈಂಗಿಕ ದೌರ್ಜ್ಯನ್ಯದ ಆರೋಪದ ಬೆನ್ನಲ್ಲಿ ರಾಜಭವನಕ್ಕೆ ಪೊಲೀಸರಿಗೆ ಪ್ರವೇಶ ನಿಷೇಧಿಸಿದ ಗವರ್ನರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಆನಂದ ಬೋಸ್ ವಿರುದ್ಧ ನಿನ್ನೆ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ಇದರ ಬೆನ್ನಲ್ಲಿ ರಾಜ್ಯಪಾಲರು ತನಿಖೆಯ ನೆಪದಲ್ಲಿ ಪೊಲೀಸರು ರಾಜಭವನಕ್ಕೆ ಪ್ರವೇಶಿಸದಂತೆ ನಿಷೇಧಿಸಿದ್ದಾರೆ, ಇದಲ್ಲದೆ...