Homeಮುಖಪುಟನೇಮಕಾತಿಯಲ್ಲಿ ಭ್ರಷ್ಟಾಚಾರ ನಿರ್ಮೂಲನೆಯ ಅನಿವಾರ್ಯತೆ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ

ನೇಮಕಾತಿಯಲ್ಲಿ ಭ್ರಷ್ಟಾಚಾರ ನಿರ್ಮೂಲನೆಯ ಅನಿವಾರ್ಯತೆ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ

- Advertisement -
- Advertisement -

ಕೆ.ಎ.ಎಸ್ ನೊಂದ ಅಭ್ಯರ್ಥಿಗಳ ಹಿತರಕ್ಷಣ ವೇದಿಕೆ ಹಾಗೂ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ(ರಿ) ಇದರ ಜಂಟಿ ಆಶ್ರಯದಲ್ಲಿ “ಸಾರ್ವಜನಿಕ ಸೇವಾ ಹುದ್ದೆಗಳ ನೇಮಕಾತಿ-ಭ್ರಷ್ಟಾಚಾರ ನಿರ್ಮೂಲನೆಯ ಅನಿವಾರ್ಯತೆ-ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣ ನಾಳೆ (ದಿನಾಂಕ 29 ಫೆಬ್ರವರಿ 2020 ರ ಶನಿವಾರ) ಬೆಂಗಳೂರಿನ “ಗಾಂಧಿ ಭವನ”ದಲ್ಲಿ ನಡೆಯಲಿದೆ.

ವಿಚಾರ ಸಂಕಿರಣದ ಉದ್ಘಾಟನೆಯನ್ನು ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಸ್. ದೊರೆಸ್ವಾಮಿಯವರು ನೆರೆವೇರಿಸಲಿದ್ದಾರೆ. ಲೋಕಾಯುಕ್ತದ ಮಾಜಿ ನ್ಯಾಯಾಧಿಶರಾದ ಸಂತೋಷ್ ಹೆಗ್ಡೆ, ಮೈಸೂರು ವಿ.ವಿ ದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಬಿ.ಪಿ. ಮಹೇಶ್ ಚಂದ್ರಗುರು, ಪ್ರಜಾವಾಣಿ ಕಾರ್ಯ ನಿರ್ವಾಹಕ ಸಂಪಾದಕರಾದ ರವೀಂದ್ರ ಭಟ್ ವಿಚಾರ ಮಂಡಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ವಿಚಾರ ಸಂಕಿರಣದ ಅಧ್ಯಕ್ಷತೆಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕಾರಾದ ಮಾವಳ್ಳಿ ಶಂಕರ್ ವಹಿಸಲಿದ್ದಾರೆ. ಮುಖ್ಯ ಅಥಿತಿಯಾಗಿ ಗೌರಿಲಂಕೇಶ್-ನ್ಯಾಯಪಥ ಪತ್ರಿಕೆಯ ಸಂಪಾದಕರಾದ ಡಾ.ಹೆಚ್.ವಿ. ವಾಸು ಬಾಗವಹಿಸಲಿದ್ದಾರೆ. ಪ್ರಾಸ್ತಾವಿಕ ನುಡಿಯನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಕೆ.ಎಸ್.ಶಿವರಾಮು ಮಾಡಲಿದ್ದಾರೆ.

ಬಿನ್ನಹ ಮತ್ತು ನಿರೂಪಣೆಯನ್ನು ಕೆ.ಎ.ಎಸ್ ನೊಂದ ಅಭ್ಯರ್ಥಿಗಳ ಹಿತರಕ್ಷಣ ವೇದಿಕೆಯ ಪ್ರಧಾನ ಸಂಚಾಲಕರಾದ ಆಯಿಷಾ ಫರ್ಝಾನ ಮಾಡಲಿದ್ದು, ವಿವೇಕ್ ಮತ್ತು ಸತೀಶ್ ಸಂಕಿರಣದಲ್ಲಿ ವಿಚಾರವನ್ನು ಮಂಡಿಸಲಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ: ತನ್ನ ವಿರುದ್ಧದ ತನಿಖೆಗೆ ಸಹಕರಿಸದಂತೆ ರಾಜಭವನದ ಸಿಬ್ಬಂದಿಗಳಿಗೆ ಸೂಚಿಸಿದ ಗವರ್ನರ್‌

0
ಪ.ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ರಾಜಭವನದ ಮಹಿಳಾ ಉದ್ಯೋಗಿಯೋರ್ವರು ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ತನಿಖೆ ನಡೆಸಲು ಕೋಲ್ಕತ್ತಾ ಪೊಲೀಸರು ತಂಡವನ್ನು ರಚಿಸಿದ್ದಾರೆ. ಇದರ ಬೆನ್ನಲ್ಲಿ...