Homeಮುಖಪುಟ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅನುವು ಮಾಡಿಕೊಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅನುವು ಮಾಡಿಕೊಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

- Advertisement -
- Advertisement -

ಹಿರಿಯ ನಟ ಕಮಲ್ ಹಾಸನ್ ನಟಿಸಿರುವ ‘ಥಗ್ ಲೈಫ್’ ಚಿತ್ರ ಬಿಡುಗಡೆಗೆ “ನ್ಯಾಯಾಂಗೇತರ ತಡೆ” ಹೇರಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಕರ್ನಾಟಕ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ನ್ಯಾಯಮೂರ್ತಿ ಮನಮೋಹನ್ ಅವರನ್ನೊಳಗೊಂಡ ಪೀಠವು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಬುಧವಾರದೊಳಗೆ ಪ್ರತಿ-ಅಫಿಡವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

“ಗುಂಪುಗಳು ಮತ್ತು ಗೂಂಡಾ ಗುಂಪುಗಳು ಬೀದಿಗಳಲ್ಲಿ ಓಡಾಡಲು ನಾವು ಬಿಡುವುದಿಲ್ಲ. ಕಾನೂನಿನ ನಿಯಮ ಜಾರಿಯಲ್ಲಿರಬೇಕು. ಯಾರಾದರೂ ಹೇಳಿಕೆ ನೀಡಿದ್ದರೆ, ಅದನ್ನು ಹೇಳಿಕೆಯ ಮೂಲಕ ಎದುರಿಸಿ. ಯಾರಾದರೂ ಬರೆದಿದ್ದರೆ, ಬರೆದು ತೋರಿಸಿ” ಎಂದು ನ್ಯಾಯಾಲಯ ಹೇಳಿದೆ.

ಕನ್ನಡ ಭಾಷೆಯ ಕುರಿತು ನಟ ಕಮಲ್ ಹಾಸನ್ ನೀಡಿದ ಹೇಳಿಕೆಯನ್ನು ವಿರೋಧಿಸಿ ಕನ್ನಡ ಪರ ಗುಂಪುಗಳು ಪ್ರತಿಭಟನೆ ನಡೆಸಿದ ನಂತರ ಮಣಿರತ್ನಂ ನಿರ್ದೇಶನದ ಚಿತ್ರ ಬಿಡುಗಡೆಯನ್ನು  ಕರ್ನಾಟಕದಲ್ಲಿ ತಡೆ ಹಿಡಿಯಲಾಗಿದೆ. ಚೆನ್ನೈನಲ್ಲಿ ನಡೆದ ಚಿತ್ರದ ಆಡಿಯೋ ಬಿಡುಗಡೆ ಸಂದರ್ಭದಲ್ಲಿ, ನಟ-ರಾಜಕಾರಣಿ ಕನ್ನಡ “ತಮಿಳಿನಿಂದ ಹುಟ್ಟಿದೆ” ಎಂದು ಹೇಳಿದ್ದರು.

ತನ್ನ ಹೇಳಿಕೆಗೆ ಕಮಲ್ ಹಾಸನ್ ಕ್ಷಮೆಯಾಚಿಸಲು ನಿರಾಕರಿಸಿರುವುದು ಕನ್ನಡ ಪರ ಗುಂಪುಗಳನ್ನು ಮತ್ತಷ್ಟು ಕೆರಳಿಸಿತ್ತು. ಹಾಗಾಗಿ, ಕಮಲ್ ಹಾಸನ್ ಕ್ಷಮೆಯಾಚಿಸುವವರೆಗೆ ಚಿತ್ರವನ್ನು ರಾಜ್ಯದಲ್ಲಿ ಪ್ರದರ್ಶಿಸುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಘೋಷಿಸಿತ್ತು.

ಜೂನ್ 5ರಂದು ಕರ್ನಾಟಕ ಹೊರತುಪಡಿಸಿ ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಥಗ್ ಲೈಫ್ ಬಿಡುಗಡೆಯಾಗಿದೆ.

ಸಿಬಿಎಫ್‌ಸಿ ಪ್ರಮಾಣಪತ್ರ ಹೊಂದಿರುವ ಯಾವುದೇ ಚಿತ್ರದ ಪ್ರದರ್ಶನಕ್ಕೆ ಅವಕಾಶ ಒದಗಿಸಿಕೊಡುವ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿದೆ ಎಂದು ನ್ಯಾಯಾಲಯ ಒತ್ತಿ ಹೇಳಿದೆ.

“ಜನರು ಚಿತ್ರವನ್ನು ನೋಡದೇ ಇರಬಹುದು. ಅದು ಬೇರೆ ವಿಷಯ. ಜನರು ಚಿತ್ರವನ್ನು ನೋಡಲೇಬೇಕು ಎಂದು ನಾವು ಯಾವುದೇ ಆದೇಶವನ್ನು ಹೊರಡಿಸುತ್ತಿಲ್ಲ. ಆದರೆ, ಚಿತ್ರವನ್ನು ಬಿಡುಗಡೆ ಮಾಡಬೇಕು” ಎಂದಿದೆ.

ಕಮಲ್ ಹಾಸನ್ ತಮ್ಮ ಹೇಳಿಕೆಗಳಿಗೆ ಕ್ಷಮೆಯಾಚಿಸುವಂತೆ ನಿರ್ದೇಶಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೂ ನ್ಯಾಯಾಲಯ ಅಸಮ್ಮತಿ ವ್ಯಕ್ತಪಡಿಸಿದೆ. “ಇದು ಹೈಕೋರ್ಟ್‌ನ ಕೆಲಸವಲ್ಲ” ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದ್ದಾರೆ.

ಕರ್ನಾಟಕದ ಜನರು ನಟನ ಮಾತನ್ನು ಒಪ್ಪದೇ ಇರಬಹುದು. ಆದರೆ, ಅವರು ಬೆದರಿಕೆ ಹಾಕಬಾರದಿತ್ತು. ಬೆಂಗಳೂರಿನ ಎಲ್ಲಾ ಪ್ರಬುದ್ದ ಜನರು ಕಮಲ್ ಹಾಸನ್ ಅವರ ಹೇಳಿಕೆಯನ್ನು  ತಪ್ಪು ಎಂದು ಹೇಳಬಹುದು. ಆದರೆ, ಬೆದರಿಕೆ ಏಕೆ ಹಾಕಬೇಕಿತ್ತು? ಎಂದು ನ್ಯಾಯಮೂರ್ತಿ ಭುಯಾನ್ ಕೇಳಿದ್ದಾರೆ.

“ಕನ್ನಡವು ತಮಿಳಿನಿಂದ ಹುಟ್ಟಿದೆ” ಎಂಬ ನಟ ಕಮಲ್ ಹಾಸನ್ ಅವರ ಹೇಳಿಕೆಯನ್ನು ಹೈಕೋರ್ಟ್ ತೀವ್ರವಾಗಿ ಟೀಕಿಸಿತ್ತು. “ಒಂದೇ ಒಂದು ಕ್ಷಮೆಯಾಚನೆಯಿಂದ ಸಮಸ್ಯೆ ಬಗೆಹರಿಯುತ್ತಿತ್ತು” ಎಂದು ಹೇಳಿತ್ತು.

ಕರ್ನಾಟಕದಲ್ಲಿ ‘ಥಗ್ ಲೈಫ್’ ಚಿತ್ರ ಬಿಡುಗಡೆಯ ತಡೆಯನ್ನು ಪ್ರಶ್ನಿಸಿ ಎಂ ಮಹೇಶ್ ರೆಡ್ಡಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.

ಬಾಲಕನ ಅಪಹರಣ ಪ್ರಕರಣ: ಎಡಿಜಿಪಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...