Homeಮುಖಪುಟ'ರಾಜ್ಯವನ್ನು ನಿರ್ಲಕ್ಷಿಸಲಾಗಿದೆ' : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

- Advertisement -
- Advertisement -

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು ‘ನಿರ್ಲಕ್ಷಿಸಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ ಪಾಲನ್ನು ನೀಡದಿರುವುದು ಈ ನಿರ್ಣಯಕ್ಕೆ ಮುಖ್ಯ ಕಾರಣವಾಗಿದೆ. ಕೇಂದ್ರ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಈ ತಾರತಮ್ಯವನ್ನು ಸರಿಪಡಿಸಬೇಕು ಮತ್ತು ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ಆರ್ಥಿಕ ನೆರವು ಹಾಗೂ ಯೋಜನೆಗಳನ್ನು ಮಂಜೂರು ಮಾಡಬೇಕು ಎಂದು ನಿರ್ಣಯದ ಮೂಲಕ ಕೇರಳ ಸರ್ಕಾರ ಒತ್ತಾಯಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಮಂಡಿಸಿದ ನಿರ್ಣಯವನ್ನು ವಿಧಾನಸಭೆ ಅಂಗೀಕರಿಸಿತು. ಆದರೆ, ಈ ಸಂದರ್ಭದಲ್ಲಿ ವಿರೋಧ ಪಕ್ಷವಾದ ಯುಡಿಎಫ್ ಮೈತ್ರಿಕೂಟದ ಶಾಸಕರು ಸದನದಲ್ಲಿ ಹಾಜರಿರಲಿಲ್ಲ. ಶಬರಿಮಲೆ ಚಿನ್ನದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ವಿಪಕ್ಷ ಶಾಸಕರು ಕಲಾಪವನ್ನು ಬಹಿಷ್ಕರಿಸಿದ್ದರಿಂದ, ಅವರ ಅನುಪಸ್ಥಿತಿಯಲ್ಲಿಯೇ ನಿರ್ಣಯ ಕೈಗೊಳ್ಳಲಾಯಿತು. ಕೇಂದ್ರ ಬಜೆಟ್‌ನಲ್ಲಿ ಕೇರಳಕ್ಕೆ ಆಗಿರುವ ಅನ್ಯಾಯವನ್ನು ಖಂಡಿಸುವ ಈ ನಿರ್ಣಯಕ್ಕೆ ಆಡಳಿತ ಪಕ್ಷದ ಸದಸ್ಯರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಕೇಂದ್ರ ಬಜೆಟ್‌ನಲ್ಲಿ ಕಡೆಗಣಿಸಲಾದ ಕೇರಳದ ಪ್ರಮುಖ ಬೇಡಿಕೆಗಳ ಮೇಲೆ ಈ ನಿರ್ಣಯವು ಬೆಳಕು ಚೆಲ್ಲಿದೆ. ವಿಶೇಷವಾಗಿ ರಾಜ್ಯದಲ್ಲಿ ‘ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ’ (ಎಮ್ಸ್‌) ಸ್ಥಾಪನೆ ಮತ್ತು ರಾಜ್ಯಾದಾದ್ಯಂತ ಸಂಚರಿಸುವ ‘ಹೈ-ಸ್ಪೀಡ್ ರೈಲು ಕಾರಿಡಾರ್’ ಯೋಜನೆಗೆ ಅನುಮೋದನೆ ನೀಡಬೇಕೆಂಬ ದೀರ್ಘಕಾಲದ ಬೇಡಿಕೆಗಳನ್ನು ಕೇಂದ್ರ ಸರ್ಕಾರವು ನಿರ್ಲಕ್ಷಿಸಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ. ಅಲ್ಲದೆ, ಕೇಂದ್ರ ಸರ್ಕಾರವು ‘ಸಹಕಾರ ಒಕ್ಕೂಟ ವ್ಯವಸ್ಥೆ’ಗೆ ಗೌರವ ನೀಡಬೇಕು ಮತ್ತು ಕೇರಳದ ಸಮತೋಲಿತ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ನೆರವು ನೀಡಬೇಕು ಎಂದು ಆಗ್ರಹಿಸಲಾಗಿದೆ.

ಕೇರಳ ಸರ್ಕಾರವು ಕಳೆದ ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಏಮ್ಸ್ ಸ್ಥಾಪನೆಗಾಗಿ ಕೇಂದ್ರವನ್ನು ಒತ್ತಾಯಿಸುತ್ತಿದೆ. ಈ ಉದ್ದೇಶಕ್ಕಾಗಿ ಈಗಾಗಲೇ ಜಮೀನನ್ನು ಗುರುತಿಸಿ, ಆರಂಭಿಕ ಹಂತದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗಿದ್ದರೂ, ಕೇಂದ್ರ ಸರ್ಕಾರವು ಈವರೆಗೆ ಯಾವುದೇ ಸಕಾರಾತ್ಮಕ ಕ್ರಮ ಕೈಗೊಂಡಿಲ್ಲ ಎಂದು ನಿರ್ಣಯದಲ್ಲಿ ವಿಷಾದ ವ್ಯಕ್ತಪಡಿಸಲಾಗಿದೆ.

ಅಲ್ಲದೆ, ಕಾಸರಗೋಡಿನಿಂದ ತಿರುವನಂತಪುರದವರೆಗೆ 573 ಕಿ.ಮೀ. ವ್ಯಾಪ್ತಿಯಲ್ಲಿ ಉದ್ದೇಶಿತ ‘ಹೈ-ಸ್ಪೀಡ್ ರೈಲು ಕಾರಿಡಾರ್’ ಯೋಜನೆಗೆ ಅನುಮೋದನೆ ಕೋರಲಾಗಿದೆ. ಪ್ರಸ್ತುತ ಈ ದೂರವನ್ನು ಕ್ರಮಿಸಲು ಬೇಕಾದ 13 ಗಂಟೆಗಳ ಸಮಯವನ್ನು ಗಣನೀಯವಾಗಿ ಕಡಿತಗೊಳಿಸಿ, ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ವೇಗ ನೀಡಲು ಈ ಯೋಜನೆ ಅತ್ಯಂತ ಮಹತ್ವದ್ದಾಗಿದೆ ಎಂದು ನಿರ್ಣಯದಲ್ಲಿ ಪ್ರತಿಪಾದಿಸಲಾಗಿದೆ.

ಪಾಲಕ್ಕಾಡ್‌ನಲ್ಲಿ ಬಹಳ ಹಿಂದಿನಿಂದಲೂ ಬೇಡಿಕೆಯಿರುವ ಕೋಚ್ ಫ್ಯಾಕ್ಟರಿ ಯೋಜನೆಯನ್ನು ಕೇಂದ್ರವು ಕಡೆಗಣಿಸಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ. ವಿಳಿಂಜಂ ಅಂತರಾಷ್ಟ್ರೀಯ ಬಂದರು ಯೋಜನೆಗೆ ಯಾವುದೇ ಷರತ್ತುಗಳಿಲ್ಲದ ‘ವಯಬಿಲಿಟಿ ಗ್ಯಾಪ್ ಫಂಡಿಂಗ್’ (VGF) ಒದಗಿಸುವಂತೆ ಕೇರಳ ಸರ್ಕಾರ ಒತ್ತಾಯಿಸಿದೆ. ಕಣ್ಣೂರು ವಿಮಾನ ನಿಲ್ದಾಣಕ್ಕೆ ವಿದೇಶಿ ವಿಮಾನಯಾನ ಸಂಸ್ಥೆಗಳ ಸಂಚಾರಕ್ಕೆ ಅನುವು ಮಾಡಿಕೊಡುವ ‘ಪಾಯಿಂಟ್ ಆಫ್ ಕಾಲ್’ (Point-of-call) ಸೌಲಭ್ಯವನ್ನು ನೀಡದಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲಾಗಿದೆ.

ವಯನಾಡ್ ಭೂಕುಸಿತದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಕೇಂದ್ರ ಸರ್ಕಾರವು ವಿಶೇಷ ಆರ್ಥಿಕ ನೆರವು ಅಥವಾ ಪರಿಹಾರ ಪ್ಯಾಕೇಜ್ ನೀಡದೆ ಇರುವುದನ್ನು ನಿರ್ಣಯವು ಬಲವಾಗಿ ಖಂಡಿಸಿದೆ. ಕೇಂದ್ರದ ನೀತಿಗಳಿಂದಾಗಿ ಕೇರಳಕ್ಕೆ ಬರಬೇಕಿದ್ದ ಸುಮಾರು 53,000 ಕೋಟಿ ರೂಪಾಯಿ ಆದಾಯ ಕೊರತೆ ಅನುದಾನವು ಕಡಿತಗೊಳ್ಳುವ ಭೀತಿಯಿದೆ ಎಂದು ರಾಜ್ಯ ಸರ್ಕಾರ ಆತಂಕ ವ್ಯಕ್ತಪಡಿಸಿದೆ. ಒಟ್ಟಾರೆಯಾಗಿ, ಈ ಎಲ್ಲಾ ಯೋಜನೆಗಳನ್ನು ಕಡೆಗಣಿಸಿರುವುದು ‘ಪ್ರಜಾಪ್ರಭುತ್ವದ ಒಕ್ಕೂಟ ತತ್ವಗಳಿಗೆ’ ಮಾಡುವ ಅವಮಾನ ಎಂದು ನಿರ್ಣಯವು ಹೇಳಿದೆ.

ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು (MGNREGS) ಸ್ಥಗಿತಗೊಳಿಸಿ, ಅದರ ಬದಲಿಗೆ ‘ವಿಬಿ-ಜಿ ರಾಮ್‌ ಜಿ’ ಯೋಜನೆಯನ್ನು ಜಾರಿಗೆ ತಂದಿದೆ. ಇದರಿಂದಾಗಿ ರಾಜ್ಯಕ್ಕೆ ಸಿಗುತ್ತಿದ್ದ ಕೇಂದ್ರದ ನೆರವು ಶೇ. 60 ರಷ್ಟು ಕಡಿತಗೊಂಡಿದೆ. ಈ ಹಿಂದೆ ಯೋಜನೆಯಡಿ ಕೇರಳಕ್ಕೆ ಸಿಗುತ್ತಿದ್ದ 88,000 ಕೋಟಿ ರೂಪಾಯಿ ಮೊತ್ತವು ಈಗ ಕೇವಲ 30,000 ಕೋಟಿಗೆ ರೂ.ಗೆ ಇಳಿದಿದೆ ಎಂದು ನಿರ್ಣಯದಲ್ಲಿ ವಿವರಿಸಲಾಗಿದೆ.

ಅಲ್ಲದೆ, ಕೇಂದ್ರ ಸರ್ಕಾರವು ಹೇರುತ್ತಿರುವ ಕಟ್ಟುನಿಟ್ಟಿನ ಆರ್ಥಿಕ ನಿರ್ಬಂಧಗಳಿಂದಾಗಿ (Fiscal curbs),15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಕ್ಕೆ ಈ ಹಿಂದೆ ಹಂಚಿಕೆಯಾಗಿದ್ದ ಸುಮಾರು 53,000 ಕೋಟಿ ರೂ. ಹಣದಿಂದ ಕೇರಳ ವಂಚಿತವಾಗುವ ಸಾಧ್ಯತೆಯಿದೆ ಎಂದು ರಾಜ್ಯ ಸರ್ಕಾರ ಎಚ್ಚರಿಸಿದೆ. ಕೇಂದ್ರದ ಇಂತಹ ಹಣಕಾಸು ನೀತಿಗಳು ರಾಜ್ಯದ ಅಭಿವೃದ್ಧಿ ಕುಂಠಿತಗೊಳಿಸುತ್ತಿವೆ ಎಂದು ನಿರ್ಣಯವು ಪ್ರತಿಪಾದಿಸಿದೆ.

ವಿಧಾನಸಭೆಯು ಅಂಗೀಕರಿಸಿದ ಈ ನಿರ್ಣಯವು ರಾಜ್ಯದ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯವನ್ನು “ಪ್ರಜಾಪ್ರಭುತ್ವದ ಒಕ್ಕೂಟ ತತ್ವಗಳಿಗೆ ಮಾಡಿದ ಅವಮಾನ” ಎಂದು ಬಣ್ಣಿಸಿದೆ. ಕೇವಲ ಆರ್ಥಿಕ ಅಸಮಾನತೆಯಷ್ಟೇ ಅಲ್ಲದೆ, ಇದು ರಾಜ್ಯದ ಹಕ್ಕುಗಳ ಮೇಲಿನ ದಾಳಿಯಾಗಿದೆ ಎಂದು ನಿರ್ಣಯ ಪ್ರತಿಪಾದಿಸಿದೆ. ಕೇರಳಕ್ಕೆ ನ್ಯಾಯ ಒದಗಿಸಲು ಮತ್ತು ರಾಜ್ಯದ ಸಮಾನ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಈ ತಾರತಮ್ಯವನ್ನು ಸರಿಪಡಿಸಬೇಕು ಎಂದು ಈ ನಿರ್ಣಯದ ಒತ್ತಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...