Homeಮುಖಪುಟಸದುದ್ದೇಶದಿಂದ ನೀಡಿದ ಹೇಳಿಕೆ ಹಿಂಪಡೆಯುವೆ: ಸತೀಶ್ ಜಾರಕಿಹೊಳಿ

ಸದುದ್ದೇಶದಿಂದ ನೀಡಿದ ಹೇಳಿಕೆ ಹಿಂಪಡೆಯುವೆ: ಸತೀಶ್ ಜಾರಕಿಹೊಳಿ

- Advertisement -
- Advertisement -

“ಸದುದ್ದೇಶದಿಂದ ನೀಡಿದ ಹೇಳಿಕೆಯನ್ನು ಹಿಂಪಡೆಯುಯುತ್ತಿದ್ದೇನೆ” ಎಂದು ತಿಳಿಸಿರುವ ಕಾಂಗ್ರೆಸ್ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿಯವರು, “ತನಿಖಾ ಸಮಿತಿ ರಚಿಸಬೇಕು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.

ನವೆಂಬರ್‌ 6ರಂದು ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆಯ ‘ಮನೆಮನೆಗೆ ಬುದ್ಧ, ಬಸವ, ಅಂಬೇಡ್ಕರ್‌’ ಕಾರ್ಯಕ್ರಮದಲ್ಲಿ ಜಾರಕಿಹೊಳಿಯವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದ್ದವು.

ಹಿಂದೂ ಪದಕ್ಕೆ ಇರುವ ಅರ್ಥಗಳ ಕುರಿತು ಮಾತನಾಡಿದ್ದ ಸತೀಶ್ ಜಾರಕಿಹೊಳಿಯವರ ವಿರುದ್ಧ ಕೆಲವರು ವಿವಾದ ಸೃಷ್ಟಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಅವರು ಪತ್ರ ಬರೆದಿದ್ದಾರೆ.

“ಹಿಂದೂ ಪದದ ಕುರಿತು ನಾನು ನೀಡಿದ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಆಗಬಾರದು ಎಂದು ಹೇಳಿಕೆ ಹಿಂಪಡೆದಿದ್ದೇನೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿವೆ. ನನ್ನ ತೇಜೋವಧೆ ಮಾಡುವ ವ್ಯವಸ್ಥಿತ ಪಿತೂರಿ ನಡೆದಿದೆ. ಈ ಎಲ್ಲ ಅಂಶಗಳ ಕುರಿತು ಪರಿಶೀಲಿಸಬೇಕು. ನೈಜ ಸ್ಥಿತಿ ವಿವರಿಸದೇ, ಅವಾಂತರ ಸೃಷ್ಟಿಸಿದವರ ವಿರುದ್ಧ ತನಿಖೆಗಾಗಿ ಸಮಿತಿ ರಚಿಸಬೇಕು” ಎಂದು ಮನವಿ ಮಾಡಿದ್ದಾರೆ.

“ಹಿಂದೂ ಶಬ್ದ ಪರ್ಷಿಯನ್ ಭಾಷೆಯಿಂದ ಬಂದಿದೆ. ಇದು ಭಾರತಕ್ಕೆ ಹೇಗೆ ಬಂತು? ಹಲವಾರು ಲೇಖನಗಳಲ್ಲಿ ಹಿಂದೂ ಪದದ ಬಗ್ಗೆ ಕೆಟ್ಟ ಅರ್ಥಗಳಿವೆ ಎಂಬುದಾಗಿ ಬರೆದಿದ್ದಾರೆ ಎಂದು ನಾನು ಹೇಳಿಕೆ ನೀಡಿದ್ದೇನೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗಬೇಕಾದುದು ಅವಶ್ಯ ಎಂದು ಹೇಳಿದ್ದೇನೆ. ವಿಕಿಪೀಡಿಯಾ, ಪುಸ್ತಕಗಳು, ಶಬ್ದಕೋಶಗಳು ಹಾಗೂ ಇತಿಹಾಸಕಾರರ ಬರಹದ ಉಲ್ಲೇಖದ ಮೇಲೆ ಈ ನನ್ನ ಭಾಷಣ ಆಧರಿತವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಈ ಕುರಿತು ತಕ್ಷಣ ತನಿಖಾ ಸಮಿತಿ ರಚಿಸಬೇಕು ಎಂದು ನಾನು ವಿನಂತಿಸಿಕೊಳ್ಳುತ್ತೇನೆ. ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆಯ ಮನೆಮನೆಗೆ ಬುದ್ಧ, ಬಸವ, ಅಂಬೇಡ್ಕರ್‌ ಕಾರ್ಯಕ್ರಮದಲ್ಲಿ ನಾನು ಮಾತನಾಡಿದ ಆ ಒಂದು ಮಾತು ವಿವಾದಕ್ಕೀಡಾಗಿದೆ ಅಲ್ಲದೆ ಅದನ್ನೇ ತಿರುಚಿ ಅಪಪ್ರಚಾರಗೊಳಿಸುತ್ತಿದ್ದಾರೆ” ಎಂದು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

“ನಾನು ಅರೆಬರೆ ಓದಿದವನಲ್ಲ, 30 ವರ್ಷಗಳಿಂದ ಓದುತ್ತಲೇ ಇದ್ದೇನೆ. ಹಿಂದೂ ಪದದ ಬಗ್ಗೆ ನೀಡಿದ್ದ ಹೇಳಿಕೆ ಕುರಿತು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ, ಹೇಳಿಕೆ ತಪ್ಪೆಂದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ” ಎಂದು ಅವರು ನಿನ್ನೆ ಹೇಳಿಕೆ ನೀಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...