Homeಅಂತರಾಷ್ಟ್ರೀಯ'ನೆರೆಯ ರಾಷ್ಟ್ರಗಳಲ್ಲೂ ಬಿಜೆಪಿ ಸಂಘಟನೆ' ಹೇಳಿಕೆ: ಖಂಡನೆ ವ್ಯಕ್ತಪಡಿಸಿದ ನೇಪಾಳ

‘ನೆರೆಯ ರಾಷ್ಟ್ರಗಳಲ್ಲೂ ಬಿಜೆಪಿ ಸಂಘಟನೆ’ ಹೇಳಿಕೆ: ಖಂಡನೆ ವ್ಯಕ್ತಪಡಿಸಿದ ನೇಪಾಳ

- Advertisement -
- Advertisement -

ಬಿಜೆಪಿಯನ್ನು ನೆರೆಯ ರಾಷ್ಟ್ರಗಳಾದ ನೇಪಾಳ ಮತ್ತು ಶ್ರೀಲಂಕಾದಲ್ಲೂ ಸಂಘಟಿಸುವ ಯೋಜನೆಯಿದೆ ಎಂದಿರುವ ಅಮಿತ್ ಶಾ ಹೇಳಿಕೆಯ ವಿರುದ್ಧ ನೇಪಾಳವು ಕಳವಳ ವ್ಯಕ್ತಪಡಿಸಿದೆ.

‘ಕಠ್ಮಂಡು ಪೋಸ್ಟ್’ ಪ್ರಕಾರ, “ಭಾರತದ ನೇಪಾಳಿ ರಾಯಭಾರಿ ನಿಲಾಂಬರ್ ಆಚಾರ್ಯ ಅವರು ಭಾರತದ ವಿದೇಶಾಂಗ ಸಚಿವಾಲಯದ ನೇಪಾಳ ಮತ್ತು ಭೂತಾನ್‌ನ ಜಂಟಿ ಕಾರ್ಯದರ್ಶಿ ಅರಿಂದಮ್ ಬಾಗ್‌ಚಿಗೆ ದೂರವಾಣಿ ಕರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಹೇಳಿಕೆಯ ಕುರಿತು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

“ತ್ರಿಪುರಾ ಮುಖ್ಯಮಂತ್ರಿ ಬಿಪ್ಲವ್ ದೇವ್ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ಭಾರತದ ವಿವಿಧ ಸುದ್ದಿ ಮಾಧ್ಯಮಗಳು ವರದಿ ಪ್ರಸಾರ ಮಾಡುತ್ತಿರುವುದು ದುರದೃಷ್ಟಕರ. ಇದಕ್ಕೆ ಸಂಬಂಧಿಸಿದಂತೆ ಗುರುವಾರದ ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟಪಡಿಸುವುದಾಗಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭರವಸೆ ನೀಡಿದೆ” ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು:1 ಅಪಾರ್ಟ್‌ಮೆಂಟ್, 2 ಪಾರ್ಟಿ, 103 ಕೊರೊನಾ ಕೇಸ್!

ಅಗರ್ತಲಾದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ತ್ರಿಪುರಾ ಮುಖ್ಯಮಂತ್ರಿ, “ಪಕ್ಷವನ್ನು ದೇಶಾದ್ಯಂತ ಮಾತ್ರವಲ್ಲದೆ, ನೆರೆಯ ರಾಷ್ಟ್ರಗಳಲ್ಲೂ ವಿಸ್ತರಿಸುವ ಯೋಜನೆ ಇದೆ. ಗೃಹ ಸಚಿವ ಅಮಿತ್ ಶಾ ಅವರು ನೇಪಾಳ ಮತ್ತು ಶ್ರೀಲಂಕಾದಲ್ಲಿ ಬಿಜೆಪಿ ಸರ್ಕಾರ ಸ್ಥಾಪಿಸುವ ಯೋಜನೆ ಹೊಂದಿದ್ದಾರೆ” ಎಂದು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು.

“2018ರಲ್ಲಿ ತ್ರಿಪುರಾ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಅಮಿತ್ ಶಾ ಅವರು, ಭಾರತದ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಗೆದ್ದು ಬಂದ ಬಳಿಕ ವಿದೇಶಗಳಲ್ಲೂ ಪಕ್ಷವನ್ನು ವಿಸ್ತರಿಸುವ ಬಗ್ಗೆ ನಮ್ಮೊಂದಿಗೆ ಮಾತನಾಡಿದ್ದರು” ಎಂದು ಬಿಪ್ಲವ್ ದೇವ್ ಹೇಳಿದ್ದರು.

ಈ ಹೇಳಿಕೆಯ ವಿರುದ್ಧ ದೇಶದಾದ್ಯಂತ ಖಂಡನೆ ವ್ಯಕ್ತವಾಗಿತ್ತು.

ಇನ್ನು ಈ ಕುರಿತು ಶ್ರೀಲಂಕಾ ಕೂಡ ಪ್ರತಿಕ್ರಿಯಿಸಿದ್ದು, ಶ್ರೀಲಂಕಾ ಚುನಾವಣಾ ಆಯೋಗದ ಅಧ್ಯಕ್ಷ ನಿಮಲ್ ಪುಂಚಿಹೆವಾ ಸೋಮವಾರ, “ದೇಶದ ಚುನಾವಣಾ ಕಾನೂನು ಹೊರಗಿನ ರಾಜಕೀಯ ಪಕ್ಷಗಳಿಗೆ ಅನುಮತಿ ನೀಡುವುದಿಲ್ಲ. ಶ್ರೀಲಂಕಾದ ಯಾವುದೇ ರಾಜಕೀಯ ಪಕ್ಷ ಅಥವಾ ಸಂಘಟನೆಯು ವಿದೇಶದಲ್ಲಿರುವ ಯಾವುದೇ ಪಕ್ಷ ಅಥವಾ ಸಂಘಟನೆಯೊಂದಿಗೆ ಬಾಹ್ಯ ಸಂಪರ್ಕ ಹೊಂದಬಹುದು. ಆದರೆ, ಸಾಗರೋತ್ತರ ರಾಜಕೀಯ ಪಕ್ಷಗಳು ನಮ್ಮ ನೆಲದಲ್ಲಿ ಕಾರ್ಯನಿರ್ವಹಿಸಲು ನಮ್ಮ ಚುನಾವಣಾ ಕಾನೂನುಗಳು ಅನುಮತಿ ನೀಡುವುದಿಲ್ಲ” ಎಂದು ಸ್ಪಷ್ಟನೆ ನೀಡಿದ್ದರು.


ಇದನ್ನೂ ಓದಿ: ಟೂಲ್‌ಕಿಟ್ ಪ್ರಕರಣ: ಮತ್ತೊಬ್ಬ ಆರೋಪಿ ಶಾಂತನು ಮುಲುಕ್‌ಗೆ ನಿರೀಕ್ಷಣಾ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....