Homeಮುಖಪುಟಭಾರತ್ ಜೋಡೋ ಯಾತ್ರೆಯಲ್ಲಿ ಲೈಂಗಿಕ ದೌರ್ಜನ್ಯದ ಕುರಿತು ಹೇಳಿಕೆ: ರಾಹುಲ್ ಗಾಂಧಿ ನಿವಾಸದಲ್ಲಿ ಪೊಲೀಸರು

ಭಾರತ್ ಜೋಡೋ ಯಾತ್ರೆಯಲ್ಲಿ ಲೈಂಗಿಕ ದೌರ್ಜನ್ಯದ ಕುರಿತು ಹೇಳಿಕೆ: ರಾಹುಲ್ ಗಾಂಧಿ ನಿವಾಸದಲ್ಲಿ ಪೊಲೀಸರು

- Advertisement -
- Advertisement -

ಈಗಲೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳಾಗುತ್ತಿರುವುದುನ್ನು ನಾನು ಕೇಳಿದ್ದೇನೆ ಎಂದು ಭಾರತ್ ಜೋಡೋ ಸಂದರ್ಭದಲ್ಲಿ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರ ಕುರಿತು ವಿಚಾರಣೆ ನಡೆಸಲು ದೆಹಲಿ ಪೊಲೀಸರು ಅವರ ನಿವಾಸಕ್ಕೆ ದೌಡಾಯಿಸಿದ್ದಾರೆ.

ರಾಹುಲ್ ಗಾಂಧಿಯವರಿಗೆ ಈ ಕುರಿತು ಸಮಗ್ರ ಮಾಹಿತಿ ನೀಡುವಂತೆ ನೋಟಿಸ್ ಕಳುಹಿಸಿದ್ದ ಪೊಲೀಸರು ಇಂದು ಮುಂಜಾನೆಯೆ ಅವರ ನಿವಾಸಕ್ಕೆ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷವು “ಇದು ಕೀಳು ಮಟ್ಟದ ಬೆದರಿಕೆ ತಂತ್ರವಾಗಿದೆ. ಅದಾನಿ ಕುರಿತು ಮೋದಿಯವರ ಮೌನದ ಕುರಿತ ಕಾಂಗ್ರೆಸ್ ಪ್ರಶ್ನೆಗಳಿಗೆ ಬಿಜೆಪಿ ಮತ್ತು ಪ್ರಧಾನಿ ಎಷ್ಟು ಬೆದರಿದ್ದಾರೆ ಎಂಬುದು ಇದರಿಂದ ಗೊತ್ತಾಗುತ್ತದೆ. ಸರ್ಕಾರದ ಈ ಕಿರುಕುಳಕ್ಕೆ ನಾವು ಬೆದರುವುದಿಲ್ಲ. ಬದಲಿಗೆ ಲೈಂಗಿಕ ದೌರ್ಜನ್ಯದಂತಹ ಸಮಸ್ಯೆಗಳಿಗೆ ಉತ್ತರ ಕಂಡು ಹಿಡಿಯಲು ಮತ್ತಷ್ಟು ಯತ್ನಿಸುತ್ತೇವೆ” ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.

“ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಶ್ರೀನಗರದಲ್ಲಿ ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ‘ಲೈಂಗಿಕ ಕಿರುಕುಳ’ ಸಂತ್ರಸ್ತರ ಹೇಳಿಕೆಗಳ ಕುರಿತು ಪ್ರಸ್ತಾಪಿಸಿದ್ದರು. ಆ ಮಹಿಳೆಯರ ವಿವರಗಳನ್ನು ಕೋರಿ ನಾವು ಅವರಿಗೆ ನೋಟಿಸ್ ಕಳುಹಿಸಿದ್ದೇವೆ ಮತ್ತು ಈಗ ಆ ಬಗ್ಗೆ ಅವರನ್ನು ಪ್ರಶ್ನಿಸುತ್ತೇವೆ” ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್‌ “ಪೊಲೀಸರು ವರ್ತಿಸುತ್ತಿರುವ ರೀತಿ ನೋಡಿದರೆ ಮೇಲಿನಿಂದ ಸೂಚನೆಯಿಲ್ಲದೆ ಹೀಗೆ ವರ್ತಿಸಲು ಸಾಧ್ಯವಿಲ್ಲ. ಅಮಿತ್ ಶಾ ಮತ್ತು ಗೃಹ ಸಚಿವಾಲಯದ ನಿರ್ದೇಶನವಿಲ್ಲದೆ ಪೊಲೀಸರು ಈ ಧೈರ್ಯ ಮಾಡುವುದಿಲ್ಲ. ಪೊಲೀಸರ ನೋಟಿಸ್‌ಗೆ ರಾಹುಲ್ ಉತ್ತರಿಸುತ್ತೇನೆ ಎಂದು ಹೇಳಿದ್ದರೂ ಸಹ ಅವರು ಯಾವುದೇ ಕಾರಣವಿಲ್ಲದೆ ನಮ್ಮ ರಾಷ್ಟ್ರೀಯ ನಾಯಕರ ನಿವಾಸಕ್ಕೆ ನುಗ್ಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ವರುಣಾ ಮತ್ತು ಕೋಲಾರ ಎರಡು ಕಡೆ ಸ್ಪರ್ಧೆ ವದಂತಿ: ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ...

0
ಗುಜರಾತ್‌ನ ಅದಾನಿ ಬಂದರಿನ ಮೂಲಕ ಟ್ರಕ್‌ಗಳಲ್ಲಿ ಸಾವಿರಾರು ಹಸುಗಳನ್ನು ತುಂಬಿ ವಧೆಗಾಗಿ ಅರಬ್‌ ದೇಶಗಳಿಗೆ ಕಳಿಸಲಾಗುತ್ತಿದೆ ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿನಾಯಕ್ ಕಟ್ಟಿಕ್ಕರ ಕನ್ನಡಿಗ ಎಂಬ ಫೇಸ್‌ಬುಕ್ ಬಳಕೆದಾರ...