Homeಕರ್ನಾಟಕಕಳೆದ 10 ವರ್ಷಗಳಲ್ಲಿ ರಾಜ್ಯದ ಶಿಶು ಮರಣ ಪ್ರಮಾಣ 50% ಕ್ಕಿಂತ ಹೆಚ್ಚು ಇಳಿಕೆ: ವರದಿ

ಕಳೆದ 10 ವರ್ಷಗಳಲ್ಲಿ ರಾಜ್ಯದ ಶಿಶು ಮರಣ ಪ್ರಮಾಣ 50% ಕ್ಕಿಂತ ಹೆಚ್ಚು ಇಳಿಕೆ: ವರದಿ

- Advertisement -
- Advertisement -

ಕರ್ನಾಟಕದ ಶಿಶು ಮರಣ ಪ್ರಮಾಣ (IMR) 2021 ರಲ್ಲಿ 17 ರಿಂದ 2022 ರಲ್ಲಿ 15 ಕ್ಕೆ ಎರಡು ಅಂಕಗಳಷ್ಟು ಕುಸಿದಿದೆ ಎಂದು ಕಳೆದ ವಾರ ಬಿಡುಗಡೆಯಾದ ಮಾದರಿ ನೋಂದಣಿ ವ್ಯವಸ್ಥೆಯ ಬುಲೆಟಿನ್ ಹೇಳಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಮಾದರಿ ನೋಂದಣಿ ವ್ಯವಸ್ಥೆ (SRS) ಎನ್ನುವುದು ಭಾರತದಲ್ಲಿ ಜನನ ಮತ್ತು ಮರಣಗಳ ದರಗಳನ್ನು ಅಂದಾಜು ಮಾಡಲು ಬಳಸುವ ಒಂದು ದೊಡ್ಡ ಪ್ರಮಾಣದ ಜನಸಂಖ್ಯಾ ಸಮೀಕ್ಷೆಯಾಗಿದೆ. ಶಿಶು ಮರಣ ಪ್ರಮಾಣ (IMR) ಎಂದರೆ 1,000 ಜೀವಂತ ಜನನಗಳಿಗೆ ಒಂದು ವರ್ಷದೊಳಗಿನ ಶಿಶುಗಳ ಸಾವಿನ ಸಂಖ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ

ಕರ್ನಾಟಕದಲ್ಲಿ, IMR 2020-22 ರಲ್ಲಿ ಹಿಂದಿನ ದಶಕಕ್ಕೆ ಹೋಲಿಸಿದರೆ ಶೇಕಡಾ 50.4 ರಷ್ಟು ಕುಸಿತ ಕಂಡಿದೆ ಎಂದು ವರದಿ ಹೇಳಿದೆ. 2010-12 ರಲ್ಲಿ 34.9 ಇದ್ದ ಐಎಂಆರ್‌ ಸರಾಸರಿ 17.3 ಕ್ಕೆ ಇಳಿದಿದೆ. ಕರ್ನಾಟಕದ ನಗರ ಮತ್ತು ಗ್ರಾಮೀಣ ಪ್ರದೇಶಗಳು ಇದೇ ರೀತಿಯ ಬೆಳವಣಿಗೆಯನ್ನು ಕಂಡಿವೆ, ಸುಮಾರು ಶೇಕಡಾ 50 ರಷ್ಟು ಕುಸಿತ ಕಂಡಿವೆ. ವೈದ್ಯರು ಇದಕ್ಕೆ ಉತ್ತಮ ಆರೋಗ್ಯ ನಿರ್ವಹಣೆ ಮತ್ತು ರಾಜ್ಯದಲ್ಲಿ ಸುಧಾರಿತ ನವಜಾತ ಶಿಶು ಆರೈಕೆ ಕಾರಣ ಎಂದು ಹೇಳುತ್ತಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಪ್ರಮುಖ ನವಜಾತ ಶಿಶುಶಾಸ್ತ್ರಜ್ಞ ಮತ್ತು ಹಿರಿಯ ಸಲಹೆಗಾರ ಡಾ. ರಜತ್ ಆತ್ರೇಯ, ಸರ್ಕಾರಿ ಮತ್ತು ಖಾಸಗಿ ಅರೋಗ್ಯ ಕೇಂದ್ರಗಳು ಇದಕ್ಕೆ ಕಾರಣವಾಗಿವೆ ಎಂದು ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

“ಕಳೆದ ಕೆಲವು ವರ್ಷಗಳಿಂದ, ಸಾಂಸ್ಥಿಕ ಹೆರಿಗೆಗಳು ಮತ್ತು ಸುರಕ್ಷಿತ ಹೆರಿಗೆ ಪದ್ಧತಿಗಳು ಹೆಚ್ಚಿವೆ. ಅನೇಕ ಸರ್ಕಾರಿ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲಾಗಿದೆ ಮತ್ತು ವಿಶೇಷ ನವಜಾತ ಶಿಶು ಆರೈಕೆ ಘಟಕಗಳನ್ನು (SNCU) ಸ್ಥಾಪಿಸಲಾಗಿದೆ. ತಂತ್ರಜ್ಞಾನ ಮತ್ತು ಮೂಲಸೌಕರ್ಯಗಳು ಸಹ ಸುಧಾರಿಸಿವೆ” ಎಂದು ಅವರು ಹೇಳಿದ್ದಾರೆ.

ಸೋಂಕು, ಅಕಾಲಿಕ ಜನನಗಳು ಮತ್ತು ಜನ್ಮಜಾತ ದೋಷಗಳು ಶಿಶು ಮರಣದ ಪ್ರಮುಖ ಕಾರಣಗಳು ಇನ್ನೂ ಸವಾಲುಗಳಾಗಿ ಉಳಿದಿವೆ ಎಂದು ಅವರು ಹೇಳಿದ್ದಾರೆ. “ಸೋಂಕುಗಳನ್ನು ನಿಯಂತ್ರಿಸುವ ಮೂಲಕ ಮತ್ತು ಅಕಾಲಿಕ ಶಿಶುಗಳಿಗೆ ಉತ್ತಮ ಆರೈಕೆಯನ್ನು ನೀಡುವ ಮೂಲಕ ಸಾವುಗಳು ಕಡಿಮೆಯಾಗುತ್ತಿವೆ. ಶ್ರೇಣಿ 2 ಮತ್ತು ಶ್ರೇಣಿ 3 ನಗರಗಳಲ್ಲಿ ಖಾಸಗಿ ಸೌಲಭ್ಯಗಳಿಗೆ ಜನರಿಗೆ ಪ್ರವೇಶ ಸುಧಾರಿಸಿದೆ ಮತ್ತು ಲಸಿಕೆ ವ್ಯಾಪ್ತಿಯೂ ಸುಧಾರಿಸಿದೆ” ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಪ್ರಾದೇಶಿಕ ಅಸಮಾನತೆಯನ್ನು ಕಡಿಮೆ ಮಾಡುವುದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಗಳು ಮತ್ತು ರಾಜ್ಯಗಳಲ್ಲಿ ಮಾಡಿರುವುದನ್ನು ಪುನರಾವರ್ತಿಸುವ ಮೂಲಕ ಮಾನವ ಸಂಪನ್ಮೂಲ ಮತ್ತು ಮೂಲಸೌಕರ್ಯವನ್ನು ಸುಧಾರಿಸುವುದು ಮತ್ತು ಲಭ್ಯವಿರುವ ಹಣವನ್ನು ಸಂಪೂರ್ಣವಾಗಿ ಬಳಸಿಕೊಳ್ಳುವುದು ಸುಧಾರಣೆಯ ಕ್ಷೇತ್ರಗಳಾಗಿರಬೇಕು ಎಂದು ಅವರು ಹೇಳಿದ್ದಾರೆ ಎಂದು ವರದಿ ಹೇಳಿದೆ.

ನವಜಾತ ಶಿಶು ಮರಣವು ಅತ್ಯಂತ ದೊಡ್ಡ ಕಳವಳಕಾರಿ ವಿಷಯವಾಗಿದೆ ಎಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯ ನವಜಾತ ಶಿಶುಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಸುಮನ್ ರಾವ್ ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. 2030 ರ ವೇಳೆಗೆ ನವಜಾತ ಶಿಶು ಮರಣವನ್ನು ಒಂದೇ ಅಂಕಿಗೆ ಇಳಿಸುವ ಗುರಿಯನ್ನು ಸಾಧಿಸಲು ಸರ್ಕಾರದೊಂದಿಗೆ ಸಹಭಾಗಿತ್ವ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನವಜಾತ ಶಿಶು ಮರಣ ಪ್ರಮಾಣ, ಅಂದರೆ ಜನನದ 28 ದಿನಗಳಲ್ಲಿ ಸಾಯುವ ಶಿಶುಗಳ ಸಂಖ್ಯೆ, ಒಂದು ಪ್ರಮುಖ ಕಳವಳಕಾರಿ ವಿಷಯವಾಗಿದೆ. 2021 ರಲ್ಲಿ ಭಾರತದ ನವಜಾತ ಶಿಶು ಮರಣ ಪ್ರಮಾಣ(NMR) 19 ರಷ್ಟಿತ್ತು, ಆದರೆ ಕರ್ನಾಟಕದ ಪ್ರಮಾಣ 13 ರಷ್ಟಿತ್ತು. 2022ರಲ್ಲಿ ಇದು ಭಾರತದಾದ್ಯಂತ ಸರಾಸರಿ 19 ರಷ್ಟಿದ್ದರೆ, ಕರ್ನಾಟಕದಲ್ಲಿ 12 ಕ್ಕೆ ಇಳಿದಿದೆ.

ರಾಜ್ಯದಲ್ಲಿ ಕಾಂಗರೂ ತಾಯಿಯ ಆರೈಕೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಆರೈಕೆಯ ಗುಣಮಟ್ಟದಲ್ಲಿನ ಒಟ್ಟಾರೆ ಸುಧಾರಣೆಯು ಸೋಂಕಿನ ಪ್ರಮಾಣವನ್ನು ಕಡಿಮೆ ಮಾಡಿದೆ ಎಂದು ಅವರು ಹೇಳಿದ್ದಾರೆ. ಕಾಂಗರೂ ಆರೈಕೆ ಅಥವಾ ಕಾಂಗರೂ ತಾಯಿಯ ಆರೈಕೆ ಎಂದರೆ ನವಜಾತ ಶಿಶುಗಳನ್ನು ತಾಯಿಯ ಎದೆಯ ಮೇಲೆ ಇರಿಸಿ ಬೆಚ್ಚಗೆ ಇಡುವ ವಿಧಾನ. ಇದು ವಿಶೇಷವಾಗಿ ಕಡಿಮೆ ತೂಕದ ಅಥವಾ ಅಕಾಲಿಕವಾಗಿ ಜನಿಸಿದ ಶಿಶುಗಳಿಗೆ ಬಹಳ ಮುಖ್ಯವಾಗಿದೆ.

“ಅವಧಿಪೂರ್ವ ಜನನವಾದ ಮಹಿಳೆಯರಿಗೆ ಪ್ರಸವಪೂರ್ವ ಕಾರ್ಟಿಕೊಸ್ಟೆರಾಯ್ಡ್‌ಗಳನ್ನು ಸರಿಯಾದ ಸಮದಯದಲ್ಲಿ ನೀಡುವುದನ್ನು ನಾವು ಸುಧಾರಿಸಬೇಕಾಗಿದೆ. ಇದರಿಂದಾಗಿ ಶಿಶುಗಳು ಬದುಕುಳಿಯುವ ಸಾಧ್ಯತೆ ಹೆಚ್ಚಿರುತ್ತದೆ. ಜನನದ ಸಮಯದಲ್ಲಿ ನವಜಾತ ಶಿಶುಗಳಿಗೆ ನೀಡಲಾಗುವ ಆರೈಕೆ ಸುಧಾರಿಸಬೇಕಾಗಿದೆ. ಪ್ರತಿಯೊಂದು ಹೆರಿಗೆ ಸೌಲಭ್ಯದಲ್ಲಿ ಕನಿಷ್ಠ ಒಬ್ಬ ವ್ಯಕ್ತಿಯಾದರೂ ಮೂಲಭೂತ ನವಜಾತ ಶಿಶು ಪುನರುಜ್ಜೀವನದಲ್ಲಿ ತರಬೇತಿ ಪಡೆಯುವ ಗುರಿಯನ್ನು ನಾವು ಹೊಂದಿದ್ದೇವೆ” ಎಂದು ಅವರು ಹೇಳಿದ್ದಾರೆ.

ಕಾರ್ಟಿಕೊಸ್ಟೆರಾಯ್ಡ್‌ಗಳು ಗರ್ಭಿಣಿಯರಿಗೆ ನೀಡಲಾಗುವ ಔಷಧಿಗಳಾಗಿದ್ದು, ಸಾಮಾನ್ಯವಾಗಿ ಇಂಜೆಕ್ಷನ್ ಮೂಲಕ ಇದನ್ನು ನೀಡಲಾಗುತ್ತದೆ. ವಿಶೇಷವಾಗಿ ಅವಧಿಪೂರ್ವ ಜನನದ ಅಪಾಯವಿದ್ದಾಗ, ಇದು ಭ್ರೂಣದಲ್ಲಿ ಶ್ವಾಸಕೋಶದ ಬೆಳವಣಿಗೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ. ಈ ಸ್ಟೀರಾಯ್ಡ್‌ಗಳು ಅವಧಿಪೂರ್ವ ಜನನವಾಗುವ ಶಿಶುಗಳಿಗೆ ಉಸಿರಾಟದ ತೊಂದರೆಗಳು ಮತ್ತು ಇತರ ತೊಡಕುಗಳ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ. ಕಳೆದ 10 ವರ್ಷಗಳಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಯುಪಿ | ಎಕೆ-47ನ 70 ಗುಂಡುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಸೈನಿಕನ ಬಂಧನ

ಯುಪಿ | ಎಕೆ-47ನ 70 ಗುಂಡುಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಸೈನಿಕನ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...