Homeಮುಖಪುಟ'ಏಕತಾ ಪ್ರತಿಮೆಯಲ್ಲಿ ಬಿರುಕು' ಎಂದು ಸುಳ್ಳು ಸುದ್ದಿ ಪೋಸ್ಟ್‌ | ಪ್ರಕರಣ ದಾಖಲು

‘ಏಕತಾ ಪ್ರತಿಮೆಯಲ್ಲಿ ಬಿರುಕು’ ಎಂದು ಸುಳ್ಳು ಸುದ್ದಿ ಪೋಸ್ಟ್‌ | ಪ್ರಕರಣ ದಾಖಲು

- Advertisement -
- Advertisement -

ಗುಜರಾತ್‌ನ ಏಕತಾ ಪ್ರತಿಮೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು, ಅದರ ಸ್ಥಿರತೆಯ ಬಗ್ಗೆ ಆತಂಕವಿದೆ ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದ ವರದಿಯಾಗಿದೆ. ರಾಜ್ಯದ ನರ್ಮದಾ ಜಿಲ್ಲೆಯ ಕೆವಾಡಿಯಾದಲ್ಲಿ ಇರುವ 182 ಮೀಟರ್ ಎತ್ತರದ ಪ್ರತಿಮೆ ಪ್ರವಾಸಿ ಕೇಂದ್ರವಾಗಿದ್ದು ಸಾವಿರಾರು ಜನರು ಅಲ್ಲಿಗೆ ಭೇಟಿ ನೀಡುತ್ತಾರೆ.

“RaGa4India” ಎಂಬ ಹ್ಯಾಂಡಲ್‌ನಿಂದ ಸೆಪ್ಟೆಂಬರ್ 8, 2024 ರಂದು ಮಾಡಿದ ಪೋಸ್ಟ್‌ನಲ್ಲಿ ಏಕತಾ ಪ್ರತಿಮೆ ಬಿರುಕು ಬಿಟ್ಟಿದೆ ಎಂದು ಪ್ರತಿಪಾದಿಸಿ ಪೋಸ್ಟ್ ಹಾಕಲಾಗಿತ್ತು. ಆದರೆ ನಂತರ ಅದನ್ನು ಅಳಿಸಲಾಗಿದೆ. ಪ್ರತಿಮೆಯಲ್ಲಿ ಇರುವ ಬಿರುಕುಗಳಿಂದಾಗಿ ಪ್ರತಿಮೆ ಕುಸಿಯಬಹುದು ಎಂದು ಅದರಲ್ಲಿ ಹೇಳಲಾಗಿತ್ತು. ಜೊತೆಗೆ ಪೋಸ್ಟ್‌ನಲ್ಲಿ ಪ್ರತಿಮೆಯ ನಿರ್ಮಾಣ ಹಂತದ ಹಳೆಯ ಛಾಯಾಚಿತ್ರವನ್ನು ಕೂಡಾ ಹಾಕಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಯೂನಿಟಿ ಏರಿಯಾ ಡೆವಲಪ್‌ಮೆಂಟ್ ಅಂಡ್ ಟೂರಿಸಂ ಗವರ್ನೆನ್ಸ್ ಅಥಾರಿಟಿಯ ಡೆಪ್ಯೂಟಿ ಕಲೆಕ್ಟರ್ ಅಭಿಷೇಕ್ ರಂಜನ್ ಸಿನ್ಹಾ ಅವರು ಭಾರತೀಯ ನ್ಯಾಯ್ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 353 (1) ಅಡಿಯಲ್ಲಿ ಸುಳ್ಳು ಪೋಸ್ಟ್‌ ಮಾಡಿರುವ ವ್ಯಕ್ತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಇಂತಹ ತಪ್ಪು ಮಾಹಿತಿಯು ಸಾರ್ವಜನಿಕ ಶಾಂತಿಯನ್ನು ಕದಡುವುದು ಮಾತ್ರವಲ್ಲದೆ ಪ್ರಮುಖ ರಾಷ್ಟ್ರೀಯ ಸ್ಮಾರಕಗಳ ಮೇಲಿನ ನಂಬಿಕೆಯನ್ನು ದುರ್ಬಲಗೊಳಿಸುತ್ತದೆ ಎಂದು ಅಧಿಕಾರಿಗಳು ಒತ್ತಿಹೇಳಿದ್ದಾರೆ.

ಸರ್ದಾರ್ ವಲ್ಲಭಾಭಾಯ್ ಪಟೇಲ್ ಅವರ ಈ ಏಕತಾ ಪ್ರತಿಮೆಯನ್ನು 2018ರ ಅಕ್ಟೋಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದರು.

ಇದನ್ನೂ ಓದಿ: ಅನರ್ಹತೆ ಬಳಿಕ ಪ್ಯಾರಿಸ್‌ನಲ್ಲಿ ನನಗೆ ಯಾವುದೇ ಬೆಂಬಲ ಸಿಗಲಿಲ್ಲ: ವಿನೇಶಾ ಫೋಗಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...