Homeಕರ್ನಾಟಕಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ತಡೆ: ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲ್ಲ ಎಂದ ಸುಪ್ರೀಂ

ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ತಡೆ: ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲ್ಲ ಎಂದ ಸುಪ್ರೀಂ

- Advertisement -
- Advertisement -

ಭ್ರಷ್ಟಾಚಾರ ಪ್ರಕರಣದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ಹೈಕೋರ್ಟ್‌ ನೀಡಿರುವ ಮಧ್ಯಂತರ ತಡೆಯನ್ನು ರದ್ದು ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಆ ಮೂಲಕ ಡಿ.ಕೆ ಶಿವಕುಮಾರ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಈ ಪ್ರಕರಣದಲ್ಲಿ ಫೆಬ್ರವರಿ 10ರಂದು ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿ ಸಿ.ಟಿ.ರವಿಕುಮಾರ್ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ಪೀಠ ವಜಾಗೊಳಿಸಿದೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಮಾತನಾಡಿ, ಸಂಸ್ಥೆಯ ಪರವಾಗಿ ಆದೇಶವಿದ್ದರೂ ಹೈಕೋರ್ಟ್ ವಿಭಾಗೀಯ ಪೀಠವು ವಿಚಾರಣೆಗೆ ಮಧ್ಯಂತರ ತಡೆ ನೀಡಿದೆ ಎಂದು ಹೇಳಿದ್ದಾರೆ.

ಡಿಕೆಶಿ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ”ಹೈಕೋರ್ಟ್‌ನ ಮಧ್ಯಂತರ ಆದೇಶದ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದೆ ಆದರೆ ಹೈಕೋರ್ಟ್‌ನ ವಿಭಾಗೀಯ ಪೀಠ ನೀಡಿದ ಮಧ್ಯಂತರ ಆದೇಶಗಳನ್ನು ಪ್ರಶ್ನಿಸಲು ನಿರಾಕರಿಸಿದೆ” ಎಂದು ಹೇಳಿದರು.

ಆಗ ಸುಪ್ರೀಂ ಕೋರ್ಟ್ ಪೀಠವು ತಾನು ಮಧ್ಯಪ್ರವೇಶಿಸಲು ಹೋಗುವುದಿಲ್ಲ ಎಂದು ಹೇಳಿತು ಮತ್ತು ತನ್ನ ಮುಂದಿರುವ ಪ್ರಕರಣವನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಹೈಕೋರ್ಟ್‌ಗೆ ಮನವಿ ಮಾಡಲು ಸಿಬಿಐಗೆ ಸ್ವಾತಂತ್ರ್ಯವನ್ನು ನೀಡಿತು.

ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ವಿಚಾರಣೆಗೆ ಫೆಬ್ರವರಿ 10 ರಂದು ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಂಡಿರುವ ವರದಿಯನ್ನು ಸಲ್ಲಿಸುವಂತೆಯೂ ತನಿಖಾ ಸಂಸ್ಥೆಗೆ ಹೈಕೋರ್ಟ್ ಸೂಚಿಸಿದೆ.

ಕಳೆದ ಎರಡು ವರ್ಷಗಳ ತನಿಖೆಯ ಪ್ರಗತಿಯ ಕುರಿತು ಹೈಕೋರ್ಟ್ ಸಿಬಿಐಯನ್ನು ಪ್ರಶ್ನಿಸಿದೆ. ಅಂತಿಮ ವರದಿಯನ್ನು ಯಾವಾಗ ಸಲ್ಲಿಸುತ್ತೀರಿ? ಎಂದು ಕೇಳಿದೆ.

ಇದನ್ನೂ ಓದಿ: ಮಣಿಪುರ ವಿಚಾರಕ್ಕೆ ಸಿಜೆಐ ಚಂದ್ರಚೂಡ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಲೇಖಕ ಬದ್ರಿ ಶೇಷಾದ್ರಿ ಅರೆಸ್ಟ್‌

ಪ್ರಕರಣದ ಹಿನ್ನೆಲೆ

ಆದಾಯ ತೆರಿಗೆ ಇಲಾಖೆಯು 2017ರಲ್ಲಿ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ಕೂಡ ಅವರ ವಿರುದ್ಧ ತನಿಖೆ ಆರಂಭಿಸಿತ್ತು.

ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಪ್ರಕರಣ ಇದಾಗಿದ್ದು, ಈ ಸಂಬಂಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ಏಕಸದಸ್ಯ ನ್ಯಾಯಪೀಠದ ವಜಾಗೊಳಿಸಿತ್ತು.

ಇದರ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದ ಡಿ.ಕೆ ಶಿವಕುಮಾ‌ರ್ ಅವರ ಅರ್ಜಿಯನ್ನು ಪುರಸ್ಕರಿಸಿದ್ದ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಜುಲೈ 17ರಂದು ಅದನ್ನು ಮೂರು ವಾರಗಳ ಕಾಲ ವಿಸ್ತರಣೆ ಮಾಡಿತ್ತು.

ಇದು ಆದಾಯ ತೆರಿಗೆ ಕಾನೂನುಗಳ ಪ್ರಕಾರ ದಾಖಲಾಗಿಸಿರುವ ವಿಶೇಷ ಕ್ರಿಮಿನಲ್‌ ಪ್ರಕರಣ’ ಎಂಬ ಸಿಬಿಐ ವಾದಾಂಶವನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠ ಶಿವಕುಮಾರ್‌ ಅರ್ಜಿಯನ್ನು ವಜಾಗೊಳಿಸಿತ್ತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆಯೂ ಯೋಚಿಸಬಹುದು: ಸುಪ್ರೀಂ ಕೋರ್ಟ್‌

0
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಕೂಡ ನಾವು ಯೋಚಿಸಬಹುದು ಎಂದು ಸುಪ್ರೀಂ ಕೋರ್ಟ್ ನಿನ್ನೆ ಹೇಳಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ...