Homeಎಕಾನಮಿಮೋದಿ-2ಗೆ ನೂರು ದಿನ, ಯಾರಿಗೈತೆ ಸಮಾಧಾನ: ಶೇರು ಹೂಡಿಕೆದಾರರ 14 ಲಕ್ಷ ಕೋಟಿಯೂ ಗೋವಿಂದ!

ಮೋದಿ-2ಗೆ ನೂರು ದಿನ, ಯಾರಿಗೈತೆ ಸಮಾಧಾನ: ಶೇರು ಹೂಡಿಕೆದಾರರ 14 ಲಕ್ಷ ಕೋಟಿಯೂ ಗೋವಿಂದ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ಅವಧಿಯ ಸರ್ಕಾರಕ್ಕೆ ಈಗ 100 ದಿನಗಳು ತುಂಬಿವೆ. ಇಲ್ಲಿ ಜನಸಾಮಾನ್ಯರ ಜೀವನ ದುರ್ಗತಿಗೆ ತಲುಪಿದ್ದರೂ ‘ಎಲ್ಲವನ್ನೂ’ ಶೇರು ಮಾರುಕಟ್ಟೆಯ ಆಧಾರದಲ್ಲಿ ಲೆಕ್ಕ ತೋರಿಸುವ ಸಮರ್ಥಕರಿಗೆ ಗೊತ್ತಿರಲಿ, ಈ ನೂರು ದಿನದಲ್ಲಿ ಶೇರು ಹೂಡಿಕೆದಾರರ 14 ಲಕ್ಷ ಕೋಟಿ ರೂ ಸಹ ಹಳ್ಳ ಹಿಡಿದಿದೆ ಎಂಬ ಸತ್ಯ…..

ಮಾಧ್ಯಮಗಳ ಕಾರಣದಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಈ ಎರಡನೇ ಅವಧಿಯ ನೂರು ದಿನಗಳಲ್ಲಿ ಅದ್ಹೇಗೋ ಮಿಂಚುತ್ತ ಬಂದಿರಬಹುದು. ಆದರೆ ಶೇರು ಮಾರುಕಟ್ಟೆಯ ‘ದಲಾಲ್ ಸ್ಟ್ರೀಟ್’ ಅಂತೂ ಆತಂಕಗೊಂಡಿದೆ.

ಎನ್‍ಡಿಎ ಎರಡನೇ ಬಾರಿ ಗೆದ್ದಾಗ ‘ಫೀಲ್ ಗುಡ್’ ಮೂಡ್‍ನಲ್ಲಿ ಇದ್ದ ಶೇರು ಮಾರುಕಟ್ಟೆ ಈ 100 ದಿನಗಳಲ್ಲಿ ತತ್ತರ ಹೊಡೆದಿದೆ. ಶೇರು ವಹಿವಾಟು ಕಂಪನಿಗಳು ಮತ್ತು ದಲ್ಲಾಳಿಗಳನ್ನು ಬಿಡಿ, ಆದರೆ ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಜನ/ಕಂಪನಿಗಳಿಗಳೂ ಈಗ ಗಾಬರಿಗೊಂಡಿವೆ. ಈ ನೂರು ದಿನಗಳಲ್ಲಿ ಶೇರು ಹೂಡಿಕೆದಾರರ 14 ಲಕ್ಷ ಕೋಟಿ ರೂಪಾಯಿ ಕರಗಿ ಮಾಯವಾಗಿದೆ!

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂಥದನ್ನೆಲ್ಲ ಸರಿಪಡಿಸಲು ಕಳೆದ ತಿಂಗಳಿಂದ ಸಾಲುಸಾಲು ಕ್ರಮಗಳನ್ನು ಘೋಷಿಸುತ್ತಿದ್ದರೂ ಶೇರು ಹೂಡಿಕೆದಾರರಿಗೆ ಯಾವುದೇ ಧೈರ್ಯ-ಸ್ಥೈಯ್ ತುಂಬಲು ಸಾಧ್ಯವಾಗಿಲ್ಲ. ಏಕೆಂದರೆ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ.
ಈ ನೂರು ದಿನಗಳಲ್ಲಿ ಬಿಎಸ್‍ಇ (ಬಾಂಬೆ ಸ್ಟಾಕ್ ಎಕ್ಸೆಂಜ್)ಯಲ್ಲಿ 2,290ರ ಪೈಕಿ ಚಾಲ್ತಿಯಾಗಿರುವ 2,264 ಶೇರುಗಳು ಶೇ. 90ರಷ್ಟನ್ನು ಮೌಲ್ಯವನ್ನು ಕಳೆದುಕೊಂಡಿವೆ. ಹೀಗಾಗಿಯೇ ಆರ್ಥಿಕ ತಜ್ಞರು ‘ಈ ಹಿಂಜರಿತ ಈಗಲೇ ಬಗೆಹರಿಯುವಂತದ್ದಲ್ಲ, ಅದಕ್ಕೇ ಶೇರು ಹೂಡಿಕೆದಾರರು ಪರಿಸ್ಥಿತಿ ಸುಧಾರಿಸುವವರೆಗೂ ಕಾಯುವುದು ಉತ್ತಮ’ ಎಂದು ಸಲಹೆ ನೀಡುತ್ತಿದ್ದಾರೆ.

ಮೇ 30ರಂದು ನರೇಂದ್ರ ಮೋದಿ ಮರಳಿ ಅಧಿಕಾರಕ್ಕೆ ಬಂದ ನಂತರ ಕೇವಲ ಶೇ.14ರಷ್ಟು ಶೇರುಗಳು ಮಾತ್ರ ಹೆಣಗಾಡಿ ಮೌಲ್ಯ ಉಳಿಸಿಕೊಂಡಿವೆ.

ಸದಾ ಮೋದಿ ಮತ್ತು ಬಿಜೆಪಿಯ ಆರಾಧಕರಾಗಿದ್ದ ‘ದಲಾಲ್ ಸ್ಟ್ರೀಟ್’ನ ಮಂದಿಗೆ ಈಗೀಗ ಸತ್ಯ ಅರಿವಾಗುತ್ತಿದೆ. ಮಧ್ಯಮ ಮತ್ತು ಮೇಲ್ ಮಧ್ಯಮ ವರ್ಗದ ಜನರಿಗೆ ಇನ್ನೂ ಎಚ್ಚರವಾದಂತಿಲ್ಲ ಎಂಬುದೇ ಆತಂಕದ ವಿಷಯ….. ದೇಶದಲ್ಲಿ ಕೊಂಡುಕೊಳ್ಳುವ ಶಕ್ತಿಯೇ ಕುಸಿದ ಹೊತ್ತಲ್ಲಿ ಯಾವ ಶೇರು ಮಾರ್ಕೆಟ್ಟೂ, ದಲಾಲ್ ಸ್ಟ್ರೀಟೂ ಏನೂ ಮಾಡಲಾಗಲ್ಲ ಅಲ್ಲವೇ?
(ಮಾಹಿತಿ: ಎಕನಾಮಿಕ್ ಟೈಮ್ಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. One time 2008 and 2009 chart Open Madi nodbhuditu
    2008 nali sensex 20000 ninda 9000 GE down aytu amele iga 40000 reach agide Monday 37145 close agide

    Company Share Gold Alla Anta frst tilkoli

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...