Homeಮುಖಪುಟಷೇರು-ವ್ಯಾಪಾರ ನಿಯಮ ಉಲ್ಲಂಘನೆ: ಅಂಬಾನಿಗೆ 40 ಕೋಟಿ ದಂಡ ವಿಧಿಸಿದ SEBI

ಷೇರು-ವ್ಯಾಪಾರ ನಿಯಮ ಉಲ್ಲಂಘನೆ: ಅಂಬಾನಿಗೆ 40 ಕೋಟಿ ದಂಡ ವಿಧಿಸಿದ SEBI

ಹಣ ಮತ್ತು ಭವಿಷ್ಯದ ಮಾರುಕಟ್ಟೆಗಳೆರಡರಲ್ಲೂ ರಿಲಯನ್ಸ್ ಪೆಟ್ರೋಲಿಯಂ ಲಿಮಿಟೆಡ್‌ನಲ್ಲಿನ ಷೇರುಗಳ ಮಾರಾಟದಿಂದ ಅನಗತ್ಯ ಲಾಭಗಳಿಸಲು ರಿಲಯನ್ಸ್ ಮತ್ತು ಅದರ ಏಜೆಂಟರು ಕಾರ್ಯ ನಿರ್ವಹಿಸಿದ್ದಾರೆ- SEBI

- Advertisement -
- Advertisement -

ಷೇರು-ವ್ಯಾಪಾರ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಉದ್ಯಮಿ ಮುಖೇಶ್ ಅಂಬಾನಿ ಮತ್ತು ಅವರ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ಗೆ ಒಟ್ಟು 400 ಮಿಲಿಯನ್ (40 ಕೋಟಿ) ದಂಡವನ್ನು ಪಾವತಿಸಲು ಭಾರತದ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಆದೇಶಿಸಿದೆ. 13 ವರ್ಷಗಳ ಹಿಂದೆ ಅಂಬಾನಿ ವ್ಯಾಪಾರಿ ನಿಯಮಗಳನ್ನು ಉಲ್ಲಂಘಿಸಿದ್ದರು ಎಂದು ಸಂಸ್ಥೆಯು ಹೇಳಿದೆ.

“ಹಣ ಮತ್ತು ಭವಿಷ್ಯದ ಮಾರುಕಟ್ಟೆಗಳೆರಡರಲ್ಲೂ ರಿಲಯನ್ಸ್ ಪೆಟ್ರೋಲಿಯಂ ಲಿಮಿಟೆಡ್‌ನಲ್ಲಿನ ಷೇರುಗಳ ಮಾರಾಟದಿಂದ ಅನಗತ್ಯ ಲಾಭಗಳಿಸಲು ರಿಲಯನ್ಸ್ ಮತ್ತು ಅದರ ಏಜೆಂಟರು ಕಾರ್ಯ ನಿರ್ವಹಿಸಿದ್ದಾರೆ” ಎಂದು Securities and Exchange Board of India (SEBI) ಜನವರಿ 1 ರ ತನ್ನ ಆದೇಶದಲ್ಲಿ ಹೇಳಿದೆ.

ರಿಲಯನ್ಸ್ ಇಂಡಸ್ಟ್ರೀಸ್ 400 ಮಿಲಿಯನ್ ರೂಪಾಯಿಗಳನ್ನು ಪಾವತಿಸಬೇಕಾಗಿದ್ದು, ಈ ಅಕ್ರಮ ವಹಿವಾಟಿಗೆ ಅದರ ಅಧ್ಯಕ್ಷ ಅಂಬಾನಿಯವರೇ ಹೊಣೆಗಾರರಾಗಿದ್ದಾರೆ ಎಂದು SEBI ಹೇಳಿದೆ.

ಇದನ್ನೂ ಓದಿ: ಹರಿಯಾಣದ ಎಲ್ಲಾ ಪೆಟ್ರೋಲ್ ಪಂಪ್‌ ಮುಚ್ಚುವ ದಿನಾಂಕ ಘೋಷಿಸುತ್ತೇವೆಂದು ಎಚ್ಚರಿಕೆ!

ರಿಲಯನ್ಸ್ ವಕ್ತಾರರು ಈ ಆದೇಶದ ಬಗ್ಗೆ ತಕ್ಷಣಕ್ಕೆ ಪ್ರತಿಕ್ರಿಯಿಸಿಲ್ಲ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ರಿಲಯನ್ಸ್ ಸಂಸ್ಥೆಯು, ಪಟ್ಟಿಮಾಡದ 12 ವ್ಯಾಪಾರ ಸಂಸ್ಥೆಗಳ ಜೊತೆಗೆ ರಿಲಯನ್ಸ್ ಪೆಟ್ರೋಲಿಯಂನ ಷೇರುಗಳಲ್ಲಿ ಕಾನೂನುಬಾಹಿರ ವಹಿವಾಟು ನಡೆಸಿದೆ ಎಂದು ಹಲವು ವರ್ಷಗಳ ತನಿಖೆಯ ನಂತರ 2017 ರಲ್ಲಿ SEBI ಕಂಡುಕೊಂಡಿದೆ.

ರಿಲಯನ್ಸ್ ಪೆಟ್ರೋಲಿಯಂ 2009 ರಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ನೊಂದಿಗೆ ವಿಲೀನಗೊಂಡಿತು. ಪೆಟ್ರೋಲಿಯಂ ಘಟಕವು ಅಂಬಾನಿ ಒಡೆತನದ ಸಂಸ್ಥೆಯ ಪಟ್ಟಿಮಾಡಿದ ಅಂಗಸಂಸ್ಥೆಯಾಗಿದೆ.


ಇದನ್ನೂ ಓದಿ: ಪಕ್ಷಗಳಿಲ್ಲದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ‘ಈ ಪಕ್ಷಗಳ ಬೆಂಬಲಿತರ’ ಸಾಧನೆ ಎಷ್ಟು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...