Homeಕರ್ನಾಟಕಪ್ರಚಾರದ ವೇಳೆ ಜಿ.ಪರಮೇಶ್ವರ್‌ ಮೇಲೆ ಕಲ್ಲು ತೂರಾಟ; ತಲೆಗೆ ಪೆಟ್ಟು

ಪ್ರಚಾರದ ವೇಳೆ ಜಿ.ಪರಮೇಶ್ವರ್‌ ಮೇಲೆ ಕಲ್ಲು ತೂರಾಟ; ತಲೆಗೆ ಪೆಟ್ಟು

- Advertisement -
- Advertisement -

ಮಾಜಿ ಉಪಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್‌ ಅವರ ಮೇಲೆ ಕಲ್ಲು ತೂರಾಟ ಮಾಡಿರುವ ಘಟನೆ ಕೊರಟೆಗೆರೆ ಕ್ಷೇತ್ರದ ಭೈರೇನಹಳ್ಳಿಯಲ್ಲಿ ನಡೆದಿದೆ.

ಚುನಾವಣಾ ಪ್ರಚಾರಕ್ಕಾಗಿ ಅವರು ಭೈರನೇಹಳ್ಳಿಗೆ ಹೋಗಿದ್ದರು. ಅವರಿಗೆ ಅಭಿಮಾನಿಗಳು ಹೂ ಹಾಕುವ ಸಂದರ್ಭದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ಮಾಡಿದ್ದಾರೆ. ಈ ವೇಳೆ ಪರಮೇಶ್ವರ ಅವರ ತಲೆಗೆ ಪೆಟ್ಟಾಗಿದೆ.

ಕೊರಟಗೆರೆ| ಪ್ರಚಾರದ ವೇಳೆ ಜಿ. ಪರಮೇಶ್ವರ್‌ ತಲೆಗೆ ಕಲ್ಲೇಟು
ಡಾ.ಜಿ.ಪರಮೇಶ್ವರ್‌ ಅವರು ಗಾಯಗೊಂಡಿರುವುದು

ತಕ್ಷಣವೇ ಅವರನ್ನು ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ತುಮಕೂರಿನ ಸಿದ್ದಾರ್ಥ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.

“ಪರಮೇಶ್ವರ್‌ ಅವರು ಚೇತರಿಸಿಕೊಳ್ಳುತ್ತಿದ್ದು, ಅಭಿಮಾನಿಗಳು ಶಾಂತಿಯಿಂದ ಇರಬೇಕು” ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಡಾ. ಜಿ ಪರಮೇಶ್ವರ್ ಅವರು ತಮ್ಮ  ಸಾವಿರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿಯೂ ಕಲ್ಲು ತೂರಾಟ ಮಾಡಲಾಗಿತ್ತು. ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದರು.

ಕೊರಟಗೆರೆ ತಾಲೂಕಿನ ರೆಡ್ಡಿಹಳ್ಳಿ ವೆಂಕಟಾಪುರ ಗ್ರಾಮದ ರಂಗಧಾಮಯ್ಯ ಬಂಧಿತ ಆರೋಪಿಯಾಗಿದ್ದು, ಸದ್ಯ ಆರೋಪಿಯನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಘಟನೆಯಲ್ಲಿ ಮಹಿಳಾ ಪೊಲೀಸ್ ಪೇದೆಯೊಬ್ಬರು ಗಾಯಗೊಂಡಿದ್ದರು. ಆರೋಪಿಯು ಘಟನೆ ನಂತರ ಕಳೆದ ಮೂರು-ನಾಲ್ಕು ದಿನದಿಂದ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದರು. ಈಗ ಮತ್ತೆ ಪರಮೇಶ್ವರ್‌ ಅವರ ಮೇಲೆ ಕಲ್ಲು ತೂರಾಟ ನಡೆದಿದೆ. ಚುನಾವಣೆ ಸಂದರ್ಭದಲ್ಲಿ ಅವರ ಮೇಲೆ ಆಗಿರುವ ಎರಡನೇ ದಾಳಿ ಇದಾಗಿದೆ.

ಡಾ. ಜಿ.ಪರಮೇಶ್ವರ್ 8 ವರ್ಷಗಳ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ವೇಳೆಯಲ್ಲಿ ಉಪ ಮುಖ್ಯಮಂತ್ರಿಯಾಗಿ  ಕಾರ್ಯನಿರ್ವಹಿಸಿದ್ದಾರೆ.

ಈ ಬಾರಿ ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಜೆಡಿಎಸ್‌ನಿಂದ ಸುಧಾಕರ್ ಲಾಲ್ ಸ್ಪರ್ಧಿಸಿದ್ದು, ಕ್ಷೇತ್ರದಲ್ಲಿ ತ್ರಿಕೋನ ಪೈಪೋಟಿ ಏರ್ಪಟ್ಟಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...