Homeಮುಖಪುಟಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ

ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ

- Advertisement -
- Advertisement -

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಫರಕ್ಕಾದಲ್ಲಿ ಶನಿವಾರ ತಡರಾತ್ರಿ ಹೌರಾ-ಹೊಸ ಜಲಪೈಗುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆದಿದೆ. ಒಂದು ತಿಂಗಳ ಹಿಂದಷ್ಟೇ ಅದೇ ರೈಲಿಗೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು.

ಶನಿವಾರ ಸಂಜೆಈ ದಾಳಿ ನಡೆದಿದ್ದು, ಹೈಸ್ಪೀಡ್ ರೈಲಿನ ಕಿಟಕಿ ಗಾಜುಗಳು ಮುರಿದು ಬಿದ್ದಿವೆ. ”ಇದು ಅತ್ಯಂತ ದುರದೃಷ್ಟಕರ ಘಟನೆಯಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೂರ್ವ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಕೌಸಿಕ್ ಮಿತ್ರ ತಿಳಿಸಿದ್ದಾರೆ” ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಹೌರಾ-ಹೊಸ ಜಲ್ಪೈಗುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಜನವರಿಯಲ್ಲಿ ಹೊಸದಾಗಿ ಪ್ರಾರಂಭಿಸಲಾದಗಲೂ  ಕೆಲವು ದುಷ್ಕರ್ಮಿಗಳು ರೈಲಿನ ಮೇಲೆ ದಾಳಿ ಮಾಡಿದ್ದರು. ಇದರಿಂದ ರೈಲಿನ ಕಿಟಕಿಗಳು ಹಾನಿಗೊಂಡಿದ್ದವು. ಇದಕ್ಕೂ ಮೊದಲು, ಕಾರ್ಯಾಚರಣೆಯ ಎರಡನೇ ದಿನ, ಮಾಲ್ಡಾದಲ್ಲಿ ಮತ್ತು ಮರುದಿನ ಕಿಶನ್‌ಗಂಜ್‌ನಲ್ಲಿ ರೈಲಿನ ಎರಡು ಬೋಗಿಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.

ಫೆಬ್ರವರಿಯಲ್ಲಿ ಸಿಕಂದರಾಬಾದ್-ವಿಶಾಖಪಟ್ಟಣಂ ವಂದೇ ಭಾರತ್ ಎಕ್ಸ್‌ಪ್ರೆಸ್ ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ ಮೂಲಕ ಹಾದು ಹೋಗುತ್ತಿದ್ದಾಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಜನವರಿಯಲ್ಲಿ ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ರೈಲಿಗೆ ವಿಶಾಖಪಟ್ಟಣದ ಕಂಚರಪಾಲೆಂನಲ್ಲಿ ಪಾನಮತ್ತರಾಗಿದ್ದ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಹಾನಿಯಾಗಿತ್ತು. ಘಟನೆಯಲ್ಲಿ ರೈಲಿನ ಕಿಟಕಿಗಳು ಮತ್ತು ಗಾಜುಗಳು ಜಖಂಗೊಂಡಿದ್ದವು.

ಫೆಬ್ರವರಿ 23ರಂದು ಕೆಲವು ಕಿಡಿಗೇಡಿಗಳು ರೈಲಿಗೆ ಕಲ್ಲು ತೂರಿದ್ದರಿಂದ ವಂದೇ ಭಾರತ್ ಮೈಸೂರು-ಚೆನ್ನೈ ಎಕ್ಸ್‌ಪ್ರೆಸ್ (20608) ಕೋಚ್‌ನ ಎರಡು ಕಿಟಕಿಗಳು ಹಾನಿಗೊಳಗಾಗಿದ್ದವು. ಕೆಆರ್ ಪುರಂ ಮತ್ತು ಕಂಟೋನ್ಮೆಂಟ್ ರೈಲು ನಿಲ್ದಾಣಗಳ ನಡುವೆ ಸಂಭವಿಸಿದ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.

ಬಿಹಾರದ ಕತಿಹಾರ್ ಮೂಲಕ ರೈಲು ಹಾದು ಹೋಗುತ್ತಿದ್ದಾಗ ಮತ್ತೆ ದಾಳಿ ನಡೆದಿದೆ. 22302 ಡೌನ್ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಎಸ್ಕಾರ್ಟ್ ಪಾರ್ಟಿಯು ಕೋಚ್ 6 ರಲ್ಲಿ ಬರ್ತ್ ನಂ.70 ನಲ್ಲಿದ್ದ ಪ್ರಯಾಣಿಕರು ದಲ್ಖೋಲಾ-ಟೆಲ್ಟಾ ರೈಲು ನಿಲ್ದಾಣವನ್ನು ದಾಟುವಾಗ ಕಲ್ಲು ತೂರಾಟ ನಡೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹೌರಾ-ಹೊಸ ಜಲ್ಪೈಗುರಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...