Homeಮುಖಪುಟಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ

ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ

- Advertisement -
- Advertisement -

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಫರಕ್ಕಾದಲ್ಲಿ ಶನಿವಾರ ತಡರಾತ್ರಿ ಹೌರಾ-ಹೊಸ ಜಲಪೈಗುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆದಿದೆ. ಒಂದು ತಿಂಗಳ ಹಿಂದಷ್ಟೇ ಅದೇ ರೈಲಿಗೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು.

ಶನಿವಾರ ಸಂಜೆಈ ದಾಳಿ ನಡೆದಿದ್ದು, ಹೈಸ್ಪೀಡ್ ರೈಲಿನ ಕಿಟಕಿ ಗಾಜುಗಳು ಮುರಿದು ಬಿದ್ದಿವೆ. ”ಇದು ಅತ್ಯಂತ ದುರದೃಷ್ಟಕರ ಘಟನೆಯಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೂರ್ವ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಕೌಸಿಕ್ ಮಿತ್ರ ತಿಳಿಸಿದ್ದಾರೆ” ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಹೌರಾ-ಹೊಸ ಜಲ್ಪೈಗುರಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಜನವರಿಯಲ್ಲಿ ಹೊಸದಾಗಿ ಪ್ರಾರಂಭಿಸಲಾದಗಲೂ  ಕೆಲವು ದುಷ್ಕರ್ಮಿಗಳು ರೈಲಿನ ಮೇಲೆ ದಾಳಿ ಮಾಡಿದ್ದರು. ಇದರಿಂದ ರೈಲಿನ ಕಿಟಕಿಗಳು ಹಾನಿಗೊಂಡಿದ್ದವು. ಇದಕ್ಕೂ ಮೊದಲು, ಕಾರ್ಯಾಚರಣೆಯ ಎರಡನೇ ದಿನ, ಮಾಲ್ಡಾದಲ್ಲಿ ಮತ್ತು ಮರುದಿನ ಕಿಶನ್‌ಗಂಜ್‌ನಲ್ಲಿ ರೈಲಿನ ಎರಡು ಬೋಗಿಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿತ್ತು.

ಫೆಬ್ರವರಿಯಲ್ಲಿ ಸಿಕಂದರಾಬಾದ್-ವಿಶಾಖಪಟ್ಟಣಂ ವಂದೇ ಭಾರತ್ ಎಕ್ಸ್‌ಪ್ರೆಸ್ ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ ಮೂಲಕ ಹಾದು ಹೋಗುತ್ತಿದ್ದಾಗ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಜನವರಿಯಲ್ಲಿ ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ರೈಲಿಗೆ ವಿಶಾಖಪಟ್ಟಣದ ಕಂಚರಪಾಲೆಂನಲ್ಲಿ ಪಾನಮತ್ತರಾಗಿದ್ದ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಹಾನಿಯಾಗಿತ್ತು. ಘಟನೆಯಲ್ಲಿ ರೈಲಿನ ಕಿಟಕಿಗಳು ಮತ್ತು ಗಾಜುಗಳು ಜಖಂಗೊಂಡಿದ್ದವು.

ಫೆಬ್ರವರಿ 23ರಂದು ಕೆಲವು ಕಿಡಿಗೇಡಿಗಳು ರೈಲಿಗೆ ಕಲ್ಲು ತೂರಿದ್ದರಿಂದ ವಂದೇ ಭಾರತ್ ಮೈಸೂರು-ಚೆನ್ನೈ ಎಕ್ಸ್‌ಪ್ರೆಸ್ (20608) ಕೋಚ್‌ನ ಎರಡು ಕಿಟಕಿಗಳು ಹಾನಿಗೊಳಗಾಗಿದ್ದವು. ಕೆಆರ್ ಪುರಂ ಮತ್ತು ಕಂಟೋನ್ಮೆಂಟ್ ರೈಲು ನಿಲ್ದಾಣಗಳ ನಡುವೆ ಸಂಭವಿಸಿದ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.

ಬಿಹಾರದ ಕತಿಹಾರ್ ಮೂಲಕ ರೈಲು ಹಾದು ಹೋಗುತ್ತಿದ್ದಾಗ ಮತ್ತೆ ದಾಳಿ ನಡೆದಿದೆ. 22302 ಡೌನ್ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಎಸ್ಕಾರ್ಟ್ ಪಾರ್ಟಿಯು ಕೋಚ್ 6 ರಲ್ಲಿ ಬರ್ತ್ ನಂ.70 ನಲ್ಲಿದ್ದ ಪ್ರಯಾಣಿಕರು ದಲ್ಖೋಲಾ-ಟೆಲ್ಟಾ ರೈಲು ನಿಲ್ದಾಣವನ್ನು ದಾಟುವಾಗ ಕಲ್ಲು ತೂರಾಟ ನಡೆದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಡಿಸೆಂಬರ್ 30 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಹೌರಾ-ಹೊಸ ಜಲ್ಪೈಗುರಿ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read