Homeಮುಖಪುಟಬಿಹಾರ: ಮಹಾವೀರ ಯಾತ್ರೆಯ ವೇಳೆ ಘರ್ಷಣೆ; ನಿಷೇಧಾಜ್ಞೆ

ಬಿಹಾರ: ಮಹಾವೀರ ಯಾತ್ರೆಯ ವೇಳೆ ಘರ್ಷಣೆ; ನಿಷೇಧಾಜ್ಞೆ

- Advertisement -
- Advertisement -

ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ನಾಗರ ಪಂಚಮಿ ಹಿನ್ನೆಲೆ  ಮಹಾವೀರ ಯಾತ್ರೆಯ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಕಲ್ಲು ತೂರಾಟ ನಡೆದು ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದೆ ಎಂದು FREE PRESS JOURNAL ವರದಿ ಮಾಡಿದೆ.

ಮೆರವಣಿಗೆ ವೇಳೆ ಘರ್ಷಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಮಹಾವೀರ ಯಾತ್ರೆಯ  ಮೆರವಣಿಗೆಯು ಬಗಾಹ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ರತನ್ಮಾಲಾ ಪ್ರದೇಶವನ್ನು ಪ್ರವೇಶಿಸುತ್ತಿದ್ದಂತೆ ಕಲ್ಲು ತೂರಾಟ ಪ್ರಾರಂಭವಾಗಿದೆ.

ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಮ್ಯಾಜಿಸ್ಟ್ರೇಟರ್ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ನಾವು ಹೆಚ್ಚಿನ ಕಣ್ಗಾವಲು ಇಟ್ಟಿದ್ದೇವೆ. ಯಾತ್ರೆಯಲ್ಲಿ ಭಾಗವಹಿಸುವ ಎಲ್ಲರಲ್ಲೂ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ  ಎಂದು ಎಸ್ ಡಿಪಿಓ ನಂದ ಪ್ರಸಾದ್ ಅವರು ಹೇಳಿದ್ದಾರೆ.

ವೈರಲ್ ವಿಡಿಯೋದಲ್ಲಿ ಕಟ್ಟಡವೊಂದರ ಮೇಲಿನಿಂದ ಕೆಳಗೆ ಕಲ್ಲು ಎಸೆಯುವುದು ಕಂಡ ಬಂದಿದೆ. ಕೆಲವರು ಕೆಳಗಿನಿಂದ ಮೇಲೆ ಕೂಡ ಕಲ್ಲು ಎಸೆದಿದ್ದಾರೆ.  ಘಟನೆಯಲ್ಲಿ ಮೂವರು ಪೊಲೀಸರು ಸೇರಿ 12 ಮಂದಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ ಎಂದು FINANCIAL EXPRESS ವರದಿ ಮಾಡಿದೆ.

ಕಲ್ಲು ತೂರಾಟ ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿದೆ. ದ್ವಿಚಕ್ರ ವಾಹನಗಳಿಗೆ ಬೆಂಕಿ ಕೂಡ ಹಚ್ಚಿರುವ ಬಗ್ಗೆ ವರದಿಯಾಗಿದೆ.

ಇದನ್ನು ಓದಿ: ಹರ್ಯಾಣ: ಮುಸ್ಲಿಮರಿಗೆ ಪ್ರವೇಶ ಬ್ಯಾನ್; ಪಂಚಾಯತ್‌ಗೆ ನೋಟಿಸ್ ನೀಡಿದ್ದ ಅಧಿಕಾರಿಯ ವರ್ಗಾವಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

0
'ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಹರಿಸಲಿದೆ' ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ...