Homeಮುಖಪುಟತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

ತಮಾಷೆಗಾಗಿ ಕೆರೆಗೆ ಕಲ್ಲೆಸೆದ ವ್ಯಕ್ತಿ: ತುಂಬಿದ ಕೆರೆ ಖಾಲಿ ಮಾಡಿ ಪರಿತಪಿಸುತ್ತಿರುವ ಜನ!

- Advertisement -
- Advertisement -

ರಾಯಚೂರು ಜಿಲ್ಲೆಗೆ ಇತ್ತೀಚೆಗೆ ನೀರಾವರಿ ವ್ಯವಸ್ಥೆ ಆಗಿ ನಿಟ್ಟುಸಿರು ಬಿಡುತ್ತಿದ್ದಾರೆ. ಆದರೂ ಕುಡಿಯವ ನೀರಿಗೆ ತಾಪತ್ರಯ ಇದ್ದುದ್ದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತುಸು ಹೆಚ್ಚೇ ಇರುತ್ತದೆ. ಇಂತಹ ಸಂದರ್ಭದಲ್ಲಿ ನಾಲೆಗೆ ನೀರುಬಿಡಿ, ಕೆರೆ ಕಟ್ಟೆಗಳನ್ನು ತುಂಬಿಸಿ ಎಂಬ ಪ್ರತಿಭಟನೆ ಮನವಿಗಳಿಗೇನು ಕಮ್ಮಿ ಇಲ್ಲ. ಇಂತಹ ಸಂಕಷ್ಟದ ಸಂದರ್ಭದಲ್ಲಿ ತುಂಬಿದ ಕುಡಿಯುವ ನೀರಿನ ಕೆರೆಯೊಂದನ್ನು ಖಾಲಿ ಮಾಡಿಸಿ ಪರಿತಪಿಸುವಂತಹ ವಿಲಕ್ಷಣ ಘಟನೆಯೊಂದಕ್ಕೆ ಜಿಲ್ಲೆಯ ಶಾಖಾಪುರ ಗ್ರಾಮ ಸಾಕ್ಷಿಯಾಗಿದೆ.

ನಡೆದುದ್ದೇನು?

ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಅತ್ತನೂರು, ಶಾಖಾಪುರ ಮತ್ತು ಗಣದಿನ್ನಿ ಒಂದಕ್ಕೊಂದು ಅಂಟಿಕೊಂಡಿರುವ ಗ್ರಾಮಗಳು. ಈ ಮೂರು ಗ್ರಾಮಗಳಿಗೆ ಸೇರಿ ಅತ್ತನೂರು ಕೆರೆ ಮತ್ತು ಶಾಖಾಪುರ ಕೆರೆಯೇ ಕುಡಿಯುವ ನೀರು ಒದಗಿಸುತ್ತದೆ. ಇಂತಹ ಸಂದರ್ಭದಲ್ಲಿ ಅತ್ತನೂರು ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ಮಾಡುವ ಮಹಮ್ಮದ್‌ ಎಂಬುವವರು ಶಾಖಾಪುರ ಕೆರೆಯಲ್ಲಿ ನೀರು ಕುಡಿದ ನಂತರ ತಮಾಷೆಗಾಗಿ ಕಲ್ಲೊಂದನ್ನು ಎಸೆದು ಅಲ್ಲಿಂದ ಹೊರಟಿದ್ದಾರೆ.

ಇದನ್ನು ಗಮನಿಸಿದ ಕೆಲ ಗ್ರಾಮಸ್ಥರು ಆತ ನೀರಿಗೆ ವಿಷದ ಕಲ್ಲು ಎಸೆದಿದ್ದಾನೆ, ಆ ನೀರು ಕುಡಿಯಬೇಡಿ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದಾರೆ. ಒಬ್ಬರಿಂದ ಒಬ್ಬರಿಗೆ ಈ ವಿಷಯ ಹರಡಿ ಗ್ರಾಮದಲ್ಲಿ ದೊಡ್ಡ ಕೋಲಾಹಲವೇ ಉಂಟಾಗಿದೆ. ಕಲ್ಲು ಎಸೆದ ಘಟನೆ ಕುಡಿಯುವ ನೀರಿಗೆ ವಿಷ ಬೆರೆಸಿದ್ದಾರೆ ಎಂಬಲ್ಲಿಗೆ ಹೋಗಿ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ. ಕೊನೆಗೆ ಗ್ರಾಮಸ್ಥರೆಲ್ಲರೂ ಸೇರಿ ಇಡೀ ಕೆರೆ ನೀರನ್ನು ಖಾಲಿ ಮಾಡುವ ನಿರ್ಧಾರಕ್ಕೆ ಬಂದಿದ್ದೆ ತಡ ಮೋಟರ್‌ ತರಿಸಿ ನೀರು ಖಾಲಿ ಮಾಡಿಸುತ್ತಿದ್ದಾರೆ.

ನೀರು ಖಾಲಿ ಮಾಡುತ್ತಿರುವುದು

ನೀರು ತುಂಬಿಸಲು ಹೋರಾಟ ಮಾಡಿದ್ದರು!

ಆಶ್ಚರ್‍ಯ ಎಂದರೆ ಶಾಖಾಪುರ ಕೆರೆಗೆ ಕುಡಿಯುವ ನೀರು ತುಂಬಿಸಬೇಕು ಎಂದು ಆಗ್ರಹಿಸಿ ಇದೇ ಗ್ರಾಮಸ್ಥರು ಹಲವು ವರ್ಷಗಳಿಂದ ಹೋರಾಟ ನಡೆಸಿದ್ದಾರೆ. ಹಿಂದೆ ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಗ್ರಾಮಸ್ಥರು “ಕುಡಿಯುವ ನೀರು ಕಲುಷಿತಗೊಂಡು ಸಮಸ್ಯೆಯಾಗಿದೆ ಎಂದು ಆರೋಪಿಸಿದ್ದರು. ಹಾಗಾಗಿ ಕೆರೆಗೆ ಶುದ್ದನೀರು ತುಂಬಿಸಬೇಕು, ಇಲ್ಲ ಪರ್ಯಾಯ ವ್ಯವಸ್ಥೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಆನಂತರ ಪ್ರತಿ ವರ್ಷ ನೀರು ತುಂಬಿಸಲಾಗುತ್ತಿದೆ. ಅಂತೆಯೇ ಈ ವರ್ಷವೂ ಸಹ ತಿಂಗಳ ಹಿಂದೆಯಷ್ಟೇ ತುಂಗಭದ್ರಾ ಎಡದಂಡೆ ನಾಲೆಯಿಂದ ನೀರು ತುಂಬಿಸಲಾಗಿತ್ತು.

 ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

ಈಗ ಕೆರೆಗೆ ಕಲ್ಲೆಸೆದ ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದ ನಂತರ ಪೊಲೀಸರು ಗ್ರಾಮಸ್ಥರು ಮತ್ತು ಕಲ್ಲು ಎಸೆದ ಮಹಮ್ಮದ್‌ ಎಂಬುವವರನ್ನು ಕರೆಸಿ ಸಭೆ ನಡೆಸಿದ್ದಾರೆ. ಆಗ ಮಹಮ್ಮದ್‌ ನಾನು ತಮಾಷೆಗಾಗಿ ಕಲ್ಲು ಎಸೆದಿದ್ದೇನೆಯೇ ಹೊರತು ಮತ್ತೇನಿಲ್ಲ ಎಂದು ಪದೇ ಪದೇ ಸ್ಪಷ್ಟಪಡಿಸಿದ್ದಾನೆ. ಗ್ರಾಮಸ್ಥರು ಅದೇ ಕೆರೆಯ ನೀರನ್ನು ತಂದು ಕುಡಿ ಎಂದಾಗ ಆತ ನೀರು ಕುಡಿದು, ಅದೇ ನೀರಿನಲ್ಲಿ ಸ್ನಾನ ಮಾಡಿ ತಾನು ವಿಷ ಬೆರೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾನೆ. ಕೊನೆಗೆ ಪೊಲೀಸರು ಅವನು ಎಸೆದಿರುವುದು ಕೇವಲ ಕಲ್ಲು ಮಾತ್ರ, ವಿಷ ಅಲ್ಲ ಎಂದು ಮನವರಿಕೆ ಮಾಡಿಕೊಟ್ಟರೂ ಸಹ ಅದನ್ನು ನಂಬಲು ಗ್ರಾಮಸ್ಥರು ಸಿದ್ಧರಿಲ್ಲ.

ಮತ್ತೆ ನೀರು ಕುಡಿಯುತ್ತಿರುವ ಮಹಮ್ಮದ್

ಅನುಮಾನಕ್ಕೆ ಕಾರಣಗಳು

ಕೇವಲ ಕಲ್ಲು ಎಸೆದುದ್ದಕ್ಕೆ ಜನ ಇಷ್ಟೊಂದು ಅನುಮಾನಪಡಲು ಕೊರೊನಾ ಸೋಂಕು ಸಹ ಒಂದು ಕಾರಣವಾಗಿದೆ. ಮಾಧ್ಯಮಗಳಲ್ಲಿ ಅದರಲ್ಲಿಯೂ ಮುಖ್ಯವಾಗಿ ಟಿವಿ ಚಾನೆಲ್‌ಗಳು ಪ್ರತಿದಿನ, ಪ್ರತಿಕ್ಷಣ ಕೊರೊನಾ ಕುರಿತು ಭೀತಿ ಸೃಷ್ಟಿಸುತ್ತಿವೆ. ಇದರ ಪರಿಣಾಮವಾಗಿ ಶಾಖಾಪುರದ ಜನರೂ ಸಹ ಆತಂಕಗೊಂಡಿದ್ದಾರೆ ಎನ್ನಲಾಗಿದೆ. ಅದರಲ್ಲೂ ಕಲ್ಲು ಎಸೆದ ವ್ಯಕ್ತಿ ಮುಸ್ಲಿಂ ಆಗಿದ್ದುದು ಮತ್ತಷ್ಟು ಅನುಮಾನಿಸಲು ಕಾರಣವಾಗಿದೆ ಎನ್ನುತ್ತಾರೆ ಸ್ಥಳೀಯರು. ಇನ್ನು ಕೆರೆಯ ನೀರು ಕಲುಷಿತಗೊಳ್ಳುತ್ತಿದ್ದು, ಕುಡಿಯಲು ಅಷ್ಟು ಯೋಗ್ಯವಲ್ಲ ಎಂದು ಕೆಲವರು ಆರೋಪಿಸಿದ್ದಾರೆ. ಅದಕ್ಕಾಗಿಯೇ ಕೆರೆ ಪಕ್ಕದಲ್ಲಿ ನೀರು ಶುದ್ದೀಕರಣ ಯಂತ್ರ ಸಹ ಅಳವಡಿಸಲಾಗಿದೆ. ಜೊತೆಗೆ ಹುಡುಗಿ ವಿಚಾರಕ್ಕೆ ಸಂಬಂಧಿಸಿದಂತೆ ಅತ್ತನೂರು ಮತ್ತು ಶಾಖಾಪುರ ಜನರ ನಡುವೆ ಸಣ್ಣ ಜಗಳವಾಗಿತ್ತು. ಅದೇ ಕಾರಣಕ್ಕೇನಾದರೂ ಅತ್ತನೂರಿನ ವ್ಯಕ್ತಿ ವಿಷ ಬೆರೆಸಿರಬಹುದು ಎಂದು ಶಾಖಾಪುರದ ಜನ ಅನುಮಾನಿಸಿದ್ದಾರೆ.

ಮತ್ತೆ ನೀರಿಗಾಗಿ ಪರದಾಟ

ಅನುಮಾನದ ಉಮೇದಿನಲ್ಲಿ ಕೆರೆಯ ನೀರನ್ನು ಖಾಲಿ ಮಾಡಿಸುತ್ತಿರುವ ಜನ ಈಗ ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. 450 ಮನೆಗಳಿದ್ದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಶಾಖಾಪುರಕ್ಕೆ ಕುಡಿಯುವ ನೀರಿಗಾಗಿ ಇದ್ದಿದ್ದು ಇದೊಂದೆ ನೀರಿನಮೂಲವಾಗಿತ್ತು. ಈಗ ಅಲ್ಲಿ ನೀರನ್ನು ಕುಡಿಯಲು ಆಗದೇ, ಬೇರೆ ನೀರು ಸಿಗದೇ ಗ್ರಾಮಪಂಚಾಯ್ತಿಯಿಂದ ಬೇಗ ಕುಡಿಯುವ ನೀರು ಸರಬರಾಜು ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ.

ನೀರು ಖಾಲಿ ಮಾಡುತ್ತಿರುವುದು

ಈ ಕುರಿತು ನಾನುಗೌರಿ.ಕಾಂ ವತಿಯಿಂದ ಈ ಗ್ರಾಮಗಳ ಒಡನಾಡವಿರುವ ಮಾರಪ್ಪ ಹರವಿರವರನ್ನು ಮಾತನಾಡಿಸಿತು. ಅವರು “ಕಳೆದ ತಿಂಗಳು ನಡೆದಿದ್ದ ಸಣ್ಣ ಜಗಳ, ಕೊರೊನಾ ಭೀತಿ ಮತ್ತು ಮುಸ್ಲಿಂ ಎಂಬ ಭಯಕ್ಕೆ ಶಾಖಾನೂರಿನ ಜನ ಅನುಮಾನಗೊಂಡು ಕೆರೆ ನೀರು ಖಾಲಿ ಮಾಡಿಸಿ ಈಗ ಪಶ್ಚಾತಾಪ ಪಡುತ್ತಿದ್ದಾರೆ. ಜನಗಳಲ್ಲಿ ಜಾಗೃತಿ ಇಲ್ಲದಿರುವುದೇ ಈ ಘಟನೆ ನಡೆಯಲು ಕಾರಣವಾಗಿದೆ. ಈಗ ನೀರು ಖಾಲಿಮಾಡಿಕೊಂಡು ಕೆಲವರು ನಾವು ದುಡುಕಬಾರದಿತ್ತು ಎಂದು ಅಭಿಪ್ರಾಯಪಟ್ಟರೆ ಇನ್ನು ಕೆಲವರು ನಾವು ಮಾಡಿದ್ದೆ ಸರಿ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಘಟನೆಗೆ ನಾವು ಯಾರನ್ನು ದೂರುವುದು? ಮಾಧ್ಯಮಗಳನ್ನೋ ಅಥವಾ ಜನರ ಅಜ್ಞಾನವನ್ನೋ? ಒಟ್ಟಿನಲ್ಲಿ ಅನುಮಾನ ಮತ್ತು ದುಡುಕುತನ ದೊಡ್ಡ ಸಮಸ್ಯೆಗೆ ದಾರಿಮಾಡಿಕೊಡುತ್ತದೆ ಎಂಬುದನ್ನು ಈ ಪ್ರಕರಣ ಸಾಬೀತು ಮಾಡಿದೆ.


ಇದನ್ನೂ ಓದಿ: ಹೆಬ್ಬಾವಿಗೆ ಬಡಿದು ಜಿಂಕೆ ಉಳಿಸಿದ ಘಟನೆಯ ಸುತ್ತ; ನೀತಿಶಾಸ್ತ್ರ ಮತ್ತು ಪ್ರಕೃತಿ ನಿಯಮಗಳು ಒಂದಕ್ಕೊಂದು ಪೂರಕವೇ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...