Homeಕರ್ನಾಟಕಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆ ನಿಲ್ಲಿಸಿ, ಮಾತುಕತೆ ನಡೆಸಿ: ಕೇಂದ್ರಕ್ಕೆ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯ

ಛತ್ತೀಸ್ ಘಡದಲ್ಲಿ ನಕ್ಸಲರ ಹತ್ಯೆ ನಿಲ್ಲಿಸಿ, ಮಾತುಕತೆ ನಡೆಸಿ: ಕೇಂದ್ರಕ್ಕೆ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯ

- Advertisement -
- Advertisement -

ಬೆಂಗಳೂರು: ಛತ್ತೀಸ್‌ ಘಡದಲ್ಲಿ ಕೇಂದ್ರ ಸರ್ಕಾರ ನಡೆಸಿರುವ ನಕ್ಸಲರ ಹಾಗೂ ಆದಿವಾಸಿಗಳ ಮಾರಣಹೋಮವನ್ನು ಖಂಡಿಸುತ್ತೇವೆ ಮತ್ತು ಅಲ್ಲಿ ಭದ್ರತಾ ಪಡೆಗಳ ನಡೆಸುತ್ತಿರುವ ಕಾರ್ಯಾಚರಣೆ ನಿಲ್ಲಿಸಿ ಮಾತುಕತೆಯ ಮೂಲಕ ಶಾಂತಿ ಮರುಸ್ಥಾಪಿಸಿ ಎಂದು ರಾಜ್ಯದ ಶಾಂತಿಗಾಗಿ ನಾಗರಿಕರ ವೇದಿಕೆ ಒತ್ತಾಯಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವೇದಿಕೆಯು, ಛತ್ತೀಸ್‌ ಘಡದಲ್ಲಿ ಕಳೆದ ಆರು ತಿಂಗಳಿಂದ CRPF, CoBRA, ಗ್ರೇ ಹೌಂಡ್‌ ಮುಂತಾದ ಪಡೆಗಳ ನೇತೃತ್ವದಲ್ಲಿ ನಕ್ಸಲ್‌ ಚಳವಳಿಯನ್ನು ಹತ್ತಿಕ್ಕಲು ತೀವ್ರತರನಾದ ಪ್ರಯತ್ನಗಳು ನಡೆಯುತ್ತಿವೆ. ಇದುವರೆಗೆ ಕಳೆದ 6 ತಿಂಗಳಲ್ಲಿ 300ಕ್ಕೂ ಹೆಚ್ಚು ಜನರು ಕೊಲ್ಲಲ್ಪಟ್ಟಿದ್ದಾರೆ. ಇದರಲ್ಲಿ ಕೆಲವರು ಪ್ರಮುಖ ನಕ್ಸಲರು ಇದ್ದಾರೆ. ಆದರೆ ದೊಡ್ಡ ಸಂಖ್ಯೆಯಲ್ಲಿ ಆದಿವಾಸಿ ಯುವಕರನ್ನೂ ಸಹ ನಕ್ಸಲ್‌ ಹಣೆಪಟ್ಟಿ ಕಟ್ಟಿ ಕೊಲ್ಲಲಾಗಿದೆ. ಇದು ಖಂಡನೀಯ ಎಂದು ಹೇಳಿದೆ.

ಇದೇ ಮಾರ್ಚ್ ಅಂತ್ಯದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಸಿಪಿಐ [ಮಾವೋಯಿಸ್ಸ್‌] ನಕ್ಸಲ್‌ ಸಂಘಟನೆಯ ಕೇಂದ್ರ ಸಮಿತಿಯು, ಜನರ ಹಿತರಕ್ಷಣೆಯ ದೃಷ್ಟಿಯಿಂದ ತಾವು ಮಾತುಕತೆಗೆ ಸಿದ್ಧವಿರುವುದಾಗಿ ತೆಲಂಗಾಣ, ಛತ್ತೀಸ್‌ ಘಡ ರಾಜ್ಯ ಸರ್ಕಾರಗಳಿಗೆ ಹಾಗೂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತು. ಆದರೆ ಮಾತುಕತೆಯನ್ನು ತಳ್ಳಿ ಹಾಕಿರುವ ಕೇಂದ್ರ ಸರ್ಕಾರ ಏಪ್ರಿಲ್‌ 2೦ರಿಂದ ‘ಆಪರೇಷನ್ ಕಗಾರ್‌’ ಅನ್ನು ಆರಂಭಿಸಿದೆ. 24 ಸಾವಿರ ಸಂಖ್ಯೆಯ ಪೋಲೀಸ್‌ ಬಲಗಳನ್ನು ನಿಯೋಜಿಸಿ ನಕ್ಸಲರ ಕೇಂದ್ರ ತಾಣವಾದ ಕರ್ರೆಗುಟ್ಟಲು ಪರ್ವತ ಶ್ರೀಣಿಗಳನ್ನು ಸುತ್ತುವರೆದು ನಕ್ಸಲರ ಮತ್ತು ಆದಿವಾಸಿಗಳ ಹತ್ಯೆಯನ್ನು ಮುಂದುವರೆಸಿದೆ. ಇತ್ತೀಚಿಗೆ ಮಾವೋವಾದಿಗಳ ಪ್ರಧಾನ ಕಾರ್ಯದರ್ಶಿಯಾದ ಬಸವರಾಜು ಅವರನ್ನೂ ಒಳಗೊಂಡಂತೆ ಇನ್ನು ಅನೇಕರನ್ನು ಭೀಕರವಾಗಿ ಹತ್ಯೆಗೈಯ್ಯಲಾಗಿದೆ ಎಂದು ವೇದಿಕೆಯು ತಿಳಿಸಿದೆ.

ಛತ್ತೀಸ್‌ ಘಡದ ಮುಖ್ಯಮಂತ್ರಿ ವಿಷ್ಣು ದೇವ ಮತ್ತು ಕೇಂದ್ರ ಗೃಹಸಚಿವ ಅಮೀತ್‌ ಶಾ ಇಬ್ಬರೂ, “ನಕ್ಸಲರೊಂದಿಗೆ ಮಾತುಕತೆ ಇಲ್ಲ, ಕೇವಲ ನಿರ್ನಾಮ” ಎಂದು ಪ್ರತಿಕ್ರಿಯಿಸಿರುವುದು ಅವರ ರಕ್ತದಾಹಿ ಧೋರಣೆಯನ್ನು ಸೂಚಿಸುತ್ತದೆ. ಮಾತುಕತೆಗೆ ಮುಂದಾದವರನ್ನು ಹತ್ಯೆಗೈಯ್ಯುವುದು ಅನಾಗರೀಕ ಮತ್ತು ಫ್ಯಾಸಿಸ್ಟ್‌ ನಡತೆಯಾಗಿದೆ. ಅಲ್ಲದೆ ನಕ್ಸಲರು ಅನುಸರಿಸುತ್ತಿರುವ ಮಾರ್ಗವನ್ನು ನಾವು ಒಪ್ಪದಿರಬಹುದು. ಆದರೆ ಅವರು ಸಾಮಾಜಿಕ ಬದಲಾವಣೆಗಾಗಿ ಸಶಸ್ತ್ರ ಹಿಡಿದಿರುವ ಸಾಮಾಜಿಕ ಹೋರಾಟಗಾರರು ಎಂಬುದನ್ನು ನಾವು ಮನಗಾಣಬೇಕಿದೆ. ಹೋರಾಟಗಾರರನ್ನು ಕ್ರಿಮಿನಲ್‌ ಗಳಂತೆ ನಡೆಸಿಕೊಳ್ಳುವುದು ಮಹಾಪರಾಧವಾಗುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ದೊಡ್ಡ ಸಂಖ್ಯೆಯಲ್ಲಿ ಆದಿವಾಸಿ ಯುವಕರನ್ನು ಕೊಲ್ಲುವುದನ್ನು ಯಾವ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲದ್ದು. ಕೇಂದ್ರ ಸರ್ಕಾರ ಈ ರಕ್ತಪಿಪಾಸುತನವನ್ನು ಬಿಡಬೇಕು ಮತ್ತು ನಕ್ಸಲರೊಂದಿಗೆ ಮಾತುಕತೆಯನ್ನು ಆರಂಭಿಸಿ ಶಾಂತಿ ಸ್ಥಾಪನೆಗೆ ಮುಂದಾಗಬೇಕೆಂದು ಶಾಂತಿಗಾಗಿ ನಾಗರೀಕ ವೇದಿಕೆ ಆಗ್ರಹಿಸಿದೆ.

ಮಾತುಕತೆಗೆ ಪೂರ್ವಭಾವಿಯಾಗಿ ಕದನವಿರಾಮ ಜಾರಿಗೊಳ್ಳಬೇಕು, ಎರಡೂ ಕಡೆಯವರು ಶಸ್ತ್ರಗಳನ್ನು  ಕೆಳಗಿಟ್ಟು ಮಾತುಕತೆಗಳಿಗೆ ಬೇಕಾದ ವಾತಾವರಣವನ್ನು ನಿರ್ಮಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ. ನಕ್ಸಲರನ್ನು ಪ್ರಜಾತಾಂತ್ರಿಕ ಹಾಗೂ ಮಾನವೀಯ ನೆಲೆಯ ಮೇಲೆ ಮುಖ್ಯವಾಹಿನಿಗೆ ತರುವ ವಿಚಾರದಲ್ಲಿ ಕರ್ನಾಟಕ ಒಂದು ಉತ್ತಮ ಮಾದರಿಯನ್ನು ಕಟ್ಟಿಕೊಟ್ಟಿದೆ. ನಾಗರೀಕ ಸಮಾಜದ ಮಧ್ಯಪ್ರವೇಶದ ಮೂಲಕ ನಡೆದ ಈ ಪ್ರಯತ್ನದಿಂದಾಗಿ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ನಡೆಯುತ್ತಿದ್ದ ಸಶಸ್ತ್ರ ಚಟುವಟಿಕೆ ಸಕರಾತ್ಮಕ ರೀತಿಯಲ್ಲಿ ಸಮಾರೋಪಗೊಂಡಿದೆ. ಕರ್ನಾಟಕದಿಂದ ಕೇಂದ್ರ ಸರ್ಕಾರ ಕಲಿಯಬೇಕು ಮತ್ತು ನಾಗರೀಕ ಸಮಾಜದ ಮಧ್ಯಸ್ತಿಕೆಯೊಂದಿಗೆ ಮಾತುಕತೆಯ ಮೂಲಕ ಈ ಸಂಘರ್ಷವನ್ನು ಸಮಾರೋಪಗೊಳಿಸಬೇಕು ಎಂದು ಶಾಂತಿಗಾಗಿ ನಾಗರೀಕ ವೇದಿಕೆಯ ನಗರಗೆರೆ ರಮೇಶ, ವಿ.ಎಸ್.‌ಶ್ರೀಧರ್, ತಾರಾ ರಾವ್‌, ನೂರ್‌ ‍ಶ್ರೀಧರ್.‌ ಕೆ.ಪಿ. ಶ್ರೀಪಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಳಗಾವಿ| ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮೇಕಳಿ‌ಯ ಲೋಕೇಶ್ವರ ಸ್ವಾಮಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...