Homeಅಂತರಾಷ್ಟ್ರೀಯಪ್ರತಿಭಟನಾಕಾರರ ಕೊಲೆಗಳನ್ನು ನಿಲ್ಲಿಸಿ: ಮ್ಯಾನ್ಮಾರ್ ಸೈನ್ಯಕ್ಕೆ ವಿಶ್ವಸಂಸ್ಥೆ ಒತ್ತಾಯ

ಪ್ರತಿಭಟನಾಕಾರರ ಕೊಲೆಗಳನ್ನು ನಿಲ್ಲಿಸಿ: ಮ್ಯಾನ್ಮಾರ್ ಸೈನ್ಯಕ್ಕೆ ವಿಶ್ವಸಂಸ್ಥೆ ಒತ್ತಾಯ

- Advertisement -
- Advertisement -

ವಿಶ್ವಸಂಸ್ಥೆ ಹಕ್ಕುಗಳ ಕಚೇರಿಯ ಮುಖ್ಯಸ್ಥ ಮಿಚೆಲ್ ಬ್ಯಾಚೆಲೆಟ್ ಶಾಂತಿಯುತ ಪ್ರತಿಭಟನಾಕಾರರ ಮೇಲಿನ ದೌರ್ಜನ್ಯವನ್ನು ನಿಲ್ಲಿಸಲು ಮ್ಯಾನ್ಮಾರ್ ಭದ್ರತಾ ಪಡೆಗಳನ್ನು ಒತ್ತಾಯಿಸಿದ್ದಾರೆ.

ಮ್ಯಾನ್ಮಾರ್‌ನ ಫೆಬ್ರವರಿ 1 ರ ದಂಗೆಯ ನಂತರ ಕನಿಷ್ಠ 54 ಜನರು ಕೊಲ್ಲಲ್ಪಟ್ಟಿದ್ದಾರೆ ಮತ್ತು 1,700 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವಿಶ್ವಸಂಸ್ಥೆ ಹಕ್ಕುಗಳ ಮುಖ್ಯಸ್ಥರು ಗುರುವಾರ ಹೇಳಿದ್ದಾರೆ. ಮಿಲಿಟರಿಯು ಪ್ರತಿಭಟನಾಕಾರರನ್ನು ಕೊಲ್ಲುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ. ಮ್ಯಾನ್ಮಾರ್‌ನಲ್ಲಿ ಬುಧವಾರ ನಡೆದ ಪ್ರತಿಭಟನೆಯ ನಂತರ ಈ ಪ್ರತಿಕ್ರಿಯೆಗಳು ಬಂದಿವೆ. ಪ್ರತಿಭಟನಾನಿರತ ಜನಸಂದಣಿಯ ಮೇಲೆ ಭದ್ರತಾ ಪಡೆಗಳು ಗುಂಡುಗಳನ್ನು ಹಾರಿಸಿದ ಪರಿಣಾಮ ಬುಧವಾರ ಕನಿಷ್ಠ 38 ಮಂದಿ ಮೃತಪಟ್ಟಿದ್ದಾರೆ.

“ಮ್ಯಾನ್ಮಾರ್‌ನ ಮಿಲಿಟರಿಯು ಪ್ರತಿಭಟನಾಕಾರರನ್ನು ಕೊಲೆ ಮಾಡುವುದು ಮತ್ತು ಜೈಲಿಗೆ ಹಾಕುವುದನ್ನು ನಿಲ್ಲಿಸಬೇಕು” ಎಂದು ಮಿಚೆಲ್ ಬ್ಯಾಚೆಲೆಟ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಭದ್ರತಾ ಪಡೆಗಳು ದೇಶಾದ್ಯಂತ ಶಾಂತಿಯುತ ಪ್ರತಿಭಟನಾಕಾರರ ವಿರುದ್ಧ ನೇರ ಮದ್ದುಗುಂಡುಗಳನ್ನು ಹಾರಿಸುತ್ತಿರುವುದು ಸಂಪೂರ್ಣವಾಗಿ ಅಸಹ್ಯಕರವಾಗಿದೆ. ತುರ್ತು ವೈದ್ಯಕೀಯ ಸಿಬ್ಬಂದಿ ಮತ್ತು ಆಂಬುಲೆನ್ಸ್‌ಗಳ ವಿರುದ್ಧ ನಡೆದ ದಾಳಿಗಳ ಬಗ್ಗೆಯೂ ದಿಗಿಲುಗೊಂಡಿದ್ದೇವೆ” ಎಂದು ಅವರು ಹೇಳಿದರು.

‘ಫೆಬ್ರವರಿ 1 ರಿಂದ ಕನಿಷ್ಠ 54 ಜನರನ್ನು ಪೊಲೀಸ್ ಮತ್ತು ಮಿಲಿಟರಿ ಅಧಿಕಾರಿಗಳು ಕೊಂದಿದ್ದಾರೆ ಎಂಬ ಮಾಹಿತಿಯನ್ನು ದೃಢಪಡಿಸಲಾಗಿದೆ ಎಂದು ಯುಎನ್ ಹಕ್ಕುಗಳ ಕಚೇರಿ ತಿಳಿಸಿದೆ. ಆದರೂ ನಿಜವಾದ ಸಾವಿನ ಸಂಖ್ಯೆ ಹೆಚ್ಚಿರನಹುದು. ಈಗ ಲಭ್ಯವಾದ ಅಂಕಿಸಂಖ್ಯೆಯನ್ನು ಮಾತ್ರ ಪರಿಶೀಲಿಸಲು ಸಾಧ್ಯವಾಗಿದೆ’ ಎಂದು ಅದು ಒತ್ತಿ ಹೇಳಿದೆ.

ಯುಎನ್‌ನ ಇತರ ಸಂಸ್ಥೆಗಳು ಬುಧವಾರ ವರದಿ ಮಾಡಿದ 38 ಸಾವುಗಳಲ್ಲಿ 30 ಪ್ರಕರಣಗಳನ್ನು ಹಕ್ಕುಗಳ ಕಚೇರಿ ಪರಿಶೀಲಿಸಿದೆ. ಭದ್ರತಾ ಪಡೆಗಳ ಹತ್ಯೆಗಳು ಯಾಂಗೊನ್, ಮಾಂಡಲೆ, ಸಾಗಿಂಗ್, ಮ್ಯಾಗ್ವೇ ಮತ್ತು ಸೋಮಗಳಲ್ಲಿ ನಡೆದಿವೆ ಎಂದು ಅದು ಹೇಳಿದೆ.
ಇನ್ನೊಬ್ಬ ವ್ಯಕ್ತಿಯನ್ನು ಮಂಗಳವಾರ ಮತ್ತು 18 ಜನರನ್ನು ಭಾನುವಾರ ಕೊಲ್ಲಲಾಗಿದೆ ಎಂದು ದಾಖಲಿಸಲಾಗಿದೆ.

ದಂಗೆಯ ನಂತರ, 1,700 ಕ್ಕೂ ಹೆಚ್ಚು ಜನರನ್ನು “ಪ್ರತಿಭಟನೆಯಲ್ಲಿ ಪಾಲ್ಗೊಂಡ ಅಥವಾ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ಆರೋಪದಲ್ಲಿ ನಿರಂಕುಶವಾಗಿ ಬಂಧಿಸಲಾಗಿದೆ” ಎಂದು ಹೇಳಿಕೆ ತಿಳಿಸಿದೆ. ಸೈನಿಕರು ಮತ್ತು ಪೊಲೀಸರು ಮನೆ ಮನೆಗೆ ತೆರಳಿ ಶೋಧ ನಡೆಸಿದ್ದರಿಂದ ಕನಿಷ್ಠ 700 ಜನರನ್ನು ಬುಧವಾರ ಒಂದೇ ದಿನ ವಶಕ್ಕೆ ಪಡೆಯಲಾಗಿದೆ.

ಮಿಲಿಟರಿ ದೌರ್ಜನ್ಯ ಕೊನೆಗೊಳಿಸಿ ಪ್ರತಿಭಟನೆಯ ಬಂಧಿತರಲ್ಲಿ ಸಂಸದರು, ರಾಜಕೀಯ ಮತ್ತು ಹಕ್ಕುಗಳ ಕಾರ್ಯಕರ್ತರು, ಚುನಾವಣಾ ಅಧಿಕಾರಿಗಳು, ಶಿಕ್ಷಕರು, ಆರೋಗ್ಯ ಕಾರ್ಯಕರ್ತರು, ಪತ್ರಕರ್ತರು ಮತ್ತು ಸನ್ಯಾಸಿಗಳು ಸೇರಿದ್ದಾರೆ ಎಂದು ಅದು ಹೇಳಿದೆ.

ಇತ್ತೀಚಿನ ದಿನಗಳಲ್ಲಿ ಕನಿಷ್ಠ 29 ಪತ್ರಕರ್ತರನ್ನು ಬಂಧಿಸಲಾಗಿದೆ, ಅವರಲ್ಲಿ ಎಂಟು ಮಂದಿಯ ಮೇಲೆ ಸರ್ಕಾರದ ವಿರೋಧ ಅಥವಾ ದ್ವೇಷವನ್ನು ಪ್ರಚೋದಿಸುವುದು ಮತ್ತು ಕಾನೂನುಬಾಹಿರ ಸಭೆಗಳಿಗೆ ಹಾಜರಾಗುವುದು ಸೇರಿದಂತೆ ಇತರ ಅಪರಾಧದ ಆರೋಪಗಳನ್ನು ಹೊರಿಸಲಾಗಿದೆ.

“ಮಾಹಿತಿ ಮತ್ತು ಪ್ರಭಾವ ಹೊಂದಿರುವ ಎಲ್ಲರನ್ನೂ ನಾನು ಕೋರುತ್ತೇನೆ … ಈಗ ಮತ್ತು ಹಿಂದೆ ನಡೆದಿರುವ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಗೆ ಮಿಲಿಟರಿ ನಾಯಕರನ್ನು ಹೊಣೆಗಾರರನ್ನಾಗಿ ಮಾಡುವ ಅಂತರರಾಷ್ಟ್ರೀಯ ಪ್ರಯತ್ನಗಳನ್ನು ಬೆಂಬಲಿಸಬೇಕು” ಎಂದು ಬ್ಯಾಚೆಲೆಟ್ ಹೇಳಿದರು.

“ಆಡಳಿತವನ್ನು ನ್ಯಾಯದ ಕಡೆಗೆ ತಿರುಗಿಸಲು ಮತ್ತು ಮ್ಯಾನ್ಮಾರ್‌ನಲ್ಲಿ ಪ್ರಜಾಪ್ರಭುತ್ವದ ಮೇಲೆ ಮಿಲಿಟರಿಯ ಕತ್ತು ಹಿಸುಕುವಿಕೆಯನ್ನು ಕೊನೆಗೊಳಿಸಲು ಇದು ಸೂಕ್ತ ಸಂದರ್ಭವಾಗಿದೆ’ ಎಂದು ಅವರು ತಿಳಿಸಿದರು.


ಇದನ್ನೂ ಓದಿ: ಆಧಾರರಹಿತ ಕ್ಷುಲ್ಲಕ ದೇಶದ್ರೋಹ ಪ್ರಕರಣಗಳ ಇತ್ತೀಚಿನ 10 ಉದಾಹರಣೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...