Homeಚಳವಳಿಗುಂಪು ಹತ್ಯೆಗಳನ್ನು ನಿಲ್ಲಿಸುವಂತೆ ಪ್ರಧಾನಿಗೆ ಬಹಿರಂಗ ಪತ್ರ ಬರೆದ ಅಪರ್ಣಾ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ...

ಗುಂಪು ಹತ್ಯೆಗಳನ್ನು ನಿಲ್ಲಿಸುವಂತೆ ಪ್ರಧಾನಿಗೆ ಬಹಿರಂಗ ಪತ್ರ ಬರೆದ ಅಪರ್ಣಾ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ ಗುಹಾ

- Advertisement -
- Advertisement -

“ಆತ್ಮೀಯ ಪ್ರಧಾನಿಯವರೆ… ಮುಸ್ಲಿಮರು, ದಲಿತರು ಮತ್ತು ಇತರ ಅಲ್ಪಸಂಖ್ಯಾತರ ಮೇಲಿನ ಗುಂಪು ಹಲ್ಲೆ/ಹತ್ಯೆಯನ್ನು ತಕ್ಷಣವೇ ನಿಲ್ಲಿಸಬೇಕು. ಎನ್‌ಸಿಆರ್‌ಬಿ (ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ) ವರದಿಗಳಿಂದ ತಿಳಿದು ನಾವು ಆಘಾತಕ್ಕೊಳಗಾಗಿದ್ದೇವೆ. 2016ರ ವರ್ಷವೊಂದರಲ್ಲೇ ದಲಿತರ ವಿರುದ್ಧ 840 ಕ್ಕಿಂತಲೂ ಹೆಚ್ಚು ದೌರ್ಜನ್ಯಗಳು ನಡೆದಿವೆ ಮತ್ತು ಅದೇ ಸಂದರ್ಭದಲ್ಲಿ  ಅಪರಾಧಗಳ ಆಗುತ್ತಿರುವ ಶೇಕಡಾವಾರು ಶಿಕ್ಷೆಯ ಪ್ರಮಾಣವು ಕುಸಿಯುತ್ತಿದೆ`”ಎಂದು ನಟ ಅಪರ್ಣ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ ಗುಹಾ ಇತರರು ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾರೆ.

ಚಲನಚಿತ್ರ ನಿರ್ಮಾಪಕ ಅಪರ್ಣಾ ಸೇನ್ ಮತ್ತು ಇತಿಹಾಸಕಾರ ರಾಮಚಂದ್ರ ಗುಹಾ ಸೇರಿದಂತೆ ನಲವತ್ತೊಂಬತ್ತು ಪ್ರಖ್ಯಾತ ವ್ಯಕ್ತಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಬಹಿರಂತ ಪತ್ರ ಬರೆದಿದ್ದಾರೆ. ಇತ್ತೀಚೆಗೆ  ನಡೆಯುತ್ತಿರುವ ಹಲವಾರು ದುರಂತ ಘಟನೆಗಳ ಬಗ್ಗೆ ಗಮನ ಸೆಳೆದಿರುವ ಅವರು, “ಜೈ ಶ್ರೀ ರಾಮ್” ಎಂಬ ಘೋಷಣೆಯ ಮೂಲಕ ಗುಂಪು ಹಲ್ಲೆ/ಹತ್ಯೆಗಳಿಗೆ ಕುಮ್ಮಕ್ಕು ಕೊಡುವ ಒಂದು ರೀತಿಯ “ಯುದ್ಧದ ಕೂಗು” ಆಗಿದೆ ಎಂದು ಆರೋಪಿಸಿದ್ದಾರೆ.

” ಪ್ರಧಾನ ಮಂತ್ರಿಗಳು ಸಂಸತ್ತಿನಲ್ಲಿ ಇದನ್ನು ಟೀಕಿಸಿದ್ದೀರಿ, ಆದರೆ ಅದು ಸಾಕಾಗುವುದಿಲ್ಲ … ಅಂತಹ ಅಪರಾಧಗಳನ್ನು ಜಾಮೀನು ರಹಿತವೆಂದು ಘೋಷಿಸಬೇಕು ಎಂದು ನಾವು ಬಲವಾಗಿ ಭಾವಿಸುತ್ತೇವೆ …” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಜಾರ್ಖಂಡ್‌ನಲ್ಲಿ 24 ವರ್ಷದ ಯುವಕನನ್ನು ಹತ್ಯೆಗೈದಿದ್ದನ್ನು ಪ್ರಧಾನಿ ಮೋದಿ ಜೂನ್‌ನಲ್ಲಿ ಸಂಸತ್ತಿನಲ್ಲಿ ಖಂಡಿಸಿದ್ದರು ಮತ್ತು ಅದು ಜಾರ್ಖಂಡ್ ಆಗಿರಲಿ, ಅಥವಾ ಪಶ್ಚಿಮ ಬಂಗಾಳವಾಗಲಿ, ಕೇರಳವಾಗಲಿ ಹಿಂಸಾಚಾರದ ಘಟನೆಗಳನ್ನು ಅದೇ ರೀತಿ ಪರಿಗಣಿಸಬೇಕು. ಇಡೀ ಜಾರ್ಖಂಡ್ ರಾಜ್ಯವನ್ನೇ ಗುಂಪು ಹತ್ಯೆಯ ರಾಜ್ಯವೆಂದು ಪರಿಗಣಿಸಬಾರದು ಎಂದಿದ್ದರು.

‘ಜೈ ಶ್ರೀ ರಾಮ್’ ಇಂದು ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳಿಗೆ ಕಾರಣವಾಗುವ ಪ್ರಚೋದನಕಾರಿ ‘ಯುದ್ಧ-ಕೂಗು’ ಆಗಿ ಮಾರ್ಪಟ್ಟಿದೆ, ಮತ್ತು ಅದರ ಹೆಸರಿನಲ್ಲಿ ಅನೇಕ ಗುಂಪು ಹತ್ಯೆಗಳು ನಡೆಯುತ್ತವೆ. ಧರ್ಮದ ಹೆಸರಿನಲ್ಲಿ ಇಷ್ಟು ಹಿಂಸಾಚಾರಗಳು ನಡೆಯುತ್ತಿರುವುದು ಆಘಾತಕಾರಿ! ಇವು ಮಧ್ಯಯುಗವಲ್ಲ! ಭಾರತದ ಬಹುಸಂಖ್ಯಾತ ಸಮುದಾಯದಲ್ಲಿ ರಾಮನ ಹೆಸರು ಅನೇಕರಿಗೆ ಪವಿತ್ರವಾಗಿದೆ. ಈ ದೇಶದ ಅತ್ಯುನ್ನತ ಕಾರ್ಯನಿರ್ವಾಹಕರಾಗಿ, ರಾಮ್ ಅವರ ಹೆಸರನ್ನು ಈ ರೀತಿ ಅಪವಿತ್ರಗೊಳಿಸುವುದನ್ನು ನೀವು ನಿಲ್ಲಿಸಬೇಕು “ಎಂದು ಪತ್ರದಲ್ಲಿ ತಿಳಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...