Homeಮುಖಪುಟನ್ಯಾಯಾಲಯದ ಕಾರ್ಯಕ್ರಮಗಳಲ್ಲಿ ಪೂಜೆ-ಅರ್ಚನೆ ನಿಲ್ಲಿಸಿ, ಸಂವಿಧಾನಕ್ಕೆ ತಲೆಬಾಗಿ: ನ್ಯಾ. ಅಭಯ್ ಎಸ್ ಓಕಾ

ನ್ಯಾಯಾಲಯದ ಕಾರ್ಯಕ್ರಮಗಳಲ್ಲಿ ಪೂಜೆ-ಅರ್ಚನೆ ನಿಲ್ಲಿಸಿ, ಸಂವಿಧಾನಕ್ಕೆ ತಲೆಬಾಗಿ: ನ್ಯಾ. ಅಭಯ್ ಎಸ್ ಓಕಾ

- Advertisement -
- Advertisement -

ನ್ಯಾಯಾಲಯದ ಕಾರ್ಯಕ್ರಮಗಳಲ್ಲಿ ಧಾರ್ಮಿಕ ಆಚರಣೆಗಳನ್ನು ಕೊನೆಗೊಳಿಸುವಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಅವರು ಕರೆ ನೀಡಿರುವುದಾಗಿ ಬಾರ್ & ಬೆಂಚ್ ವರದಿ ತಿಳಿಸಿದೆ.

ಮಾರ್ಚ್ 3ರಂದು ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ ಹೊಸ ನ್ಯಾಯಾಲಯದ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನದ ಪೀಠಿಕೆಯಲ್ಲಿನ ‘ಜಾತ್ಯತೀತ’ ಮತ್ತು ‘ಪ್ರಜಾಪ್ರಭುತ್ವ’ ಎಂಬ ಪದಗಳು ನನಗೆ ಬಹಳ ಮುಖ್ಯ ಎಂದಿದ್ದಾರೆ.

ಭಾರತದ ಸಂವಿಧಾನವನ್ನು ಅಳವಡಿಸಿಕೊಂಡು 75 ವರ್ಷ ತುಂಬುತ್ತಿದೆ. ಈ ಸಂದರ್ಭದಲ್ಲಿ ಸಂವಿಧಾನದಲ್ಲಿ ಪ್ರತಿಪಾದಿಸಲಾಗಿರುವ ಜಾತ್ಯತೀತತೆಯನ್ನು ಉತ್ತೇಜಿಸಬೇಕು ಎಂದಿರುವ ನ್ಯಾಯಮೂರ್ತಿ, ನ್ಯಾಯಾಲಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಸಂವಿಧಾನದ ಪೀಠಿಕೆಯ ಪ್ರತಿಗೆ ತಲೆಬಾಗುವ ಮೂಲಕ ಪ್ರಾರಂಭಿಸಬಹುದು ಎಂದು ಸಲಹೆ ನೀಡಿದ್ದಾರೆ.

“ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನವನ್ನು ಅಳವಡಿಸಿಕೊಂಡು ಈ ವರ್ಷ ನವೆಂಬರ್ 26 ರಂದು 75 ವರ್ಷಗಳು ತುಂಬಲಿದೆ. ನಮ್ಮ ಸಂವಿಧಾನದ ಪೀಠಿಕೆಯಲ್ಲಿ ಎರಡು ಪ್ರಮುಖ ಪದಗಳಿವೆ. ಅವುಗಳಲ್ಲಿ ಒಂದು ‘ಜಾತ್ಯತೀತ’ ಮತ್ತು ಎರಡನೆಯದ್ದು ‘ಪ್ರಜಾಪ್ರಭುತ್ವ’. ಜಾತ್ಯತೀತತೆ ಎಂದರೆ ಧರ್ಮನಿರ್ಪೇಕ್ಷ ಅಥವಾ ಸರ್ವ ಧರ್ಮ ಸಂಭವ. ನಾನು ಯಾವಾಗಲೂ ನ್ಯಾಯಾಂಗ ವ್ಯವಸ್ಥೆಯ ತಿರುಳು ‘ಸಂವಿಧಾನ’ ಎಂದು ಭಾವಿಸುತ್ತೇನೆ” ಎಂದಿದ್ದಾರೆ.

“ಕೆಲವೊಮ್ಮೆ ನ್ಯಾಯಾಧೀಶರು ಸ್ಪಷ್ಟ ನಿಲುವನ್ನು ತೆಗೆದುಕೊಂಡು ಕೆಲವು ಮಾತುಗಳನ್ನು ಹೇಳಬೇಕಾಗುತ್ತದೆ. ನಾನು ಅಂತದ್ದೆ ನಿಲುವು ತೆಗೆದುಕೊಂಡು ಹೇಳಲಿದ್ದೇನೆ. ನ್ಯಾಯಾಲಯದ ಕಾರ್ಯಕ್ರಮಗಳಲ್ಲಿ ಪೂಜೆ-ಅರ್ಚನೆಯನ್ನು ನಿಲ್ಲಿಸಬೇಕು ಎಂದು ನಾನು ಭಾವಿಸುತ್ತೇನೆ. ಬದಲಿಗೆ, ನಾವು ಸಂವಿಧಾನದ ಪೀಠಿಕೆಯ ಪ್ರತಿಯನ್ನು ಇಟ್ಟುಕೊಂಡು ಅದಕ್ಕೆ ನಮಸ್ಕರಿಸಬೇಕಾಗಿದೆ. ಸಂವಿಧಾನವು ಜಾರಿಯಾಗಿ 75 ವರ್ಷಗಳನ್ನು ಪೂರೈಸಿದಾಗ, ಅದರ ಘನತೆಯನ್ನು ಕಾಪಾಡಿಕೊಳ್ಳಲು, ನಾವು ಈ ಹೊಸ ಪದ್ಧತಿಯನ್ನು ಪ್ರಾರಂಭಿಸಬೇಕು” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅವಧಿಯಲ್ಲಿ ನ್ಯಾಯಾಲಯದ ಆವರಣದಲ್ಲಿ ಧಾರ್ಮಿಕ ಆಚರಣೆಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿದ್ದೆ. ಆದರೆ ಅವುಗಳನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಾಗಲಿಲ್ಲ” ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಇದನ್ನೂ ಓದಿ : ಪ್ರೊ.ಜಿ.ಎನ್‌ ಸಾಯಿಬಾಬಾ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...