Homeಅಂತರಾಷ್ಟ್ರೀಯ'ಯುದ್ಧ ನಿಲ್ಲಿಸಿ': ಹಮಾಸ್ ವಿರುದ್ಧವೇ ಪ್ರತಿಭಟನೆಗಿಳಿದ ಗಾಝಾ ಜನತೆ

‘ಯುದ್ಧ ನಿಲ್ಲಿಸಿ’: ಹಮಾಸ್ ವಿರುದ್ಧವೇ ಪ್ರತಿಭಟನೆಗಿಳಿದ ಗಾಝಾ ಜನತೆ

- Advertisement -
- Advertisement -

ಪ್ರತಿನಿತ್ಯ ಸಾವು-ನೋವುಗಳನ್ನು ನೋಡುತ್ತಾ ಕುಗ್ಗಿ ಹೋಗಿರುವ ಗಾಝಾದ ಜನತೆ ಹಮಾಸ್ ಗುಂಪಿನ ವಿರುದ್ದವೇ ತಿರುಗಿ ಬಿದ್ದಿದ್ದು, ಇಸ್ರೇಲ್ ಜೊತೆಗಿನ ಯುದ್ಧ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟಿಸಿದ್ದಾರೆ ಎಂದು ವರದಿಯಾಗಿದೆ.

ಕದನ ವಿರಾಮ ಒಪ್ಪಂದ ಮುರಿದುಬಿದ್ದ ಕಾರಣ ಇಸ್ರೇಲ್ ಮತ್ತೆ ಆಕ್ರಮಣ ನಡೆಸುತ್ತಿದೆ. ಪ್ರತಿನಿತ್ಯ ನೂರಾರು ಜನರು ಸಾಯುತ್ತಿದ್ದಾರೆ. ಇಸ್ರೇಲ್‌ಗೆ ಏನೂ ಮಾಡಲು ನಮಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ , ಹಮಾಸ್ ಮೇಲೆ ಒತ್ತಡ ಹೇರಲು ಪ್ರತಿಭಟಿಸಿರುವುದಾಗಿ ಉತ್ತರ ಗಾಝಾದ ಜನತೆ ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ.

ಪ್ರಮುಖ ಜನವಸತಿ ಪ್ರದೇಶವಾಗಿದ್ದ ಉತ್ತರ ಗಾಝಾ ಇಸ್ರೇಲ್‌ನ ನಿರಂತರ ದಾಳಿಯಿಂದ ಬರೀ ಕಟ್ಟಡ ಅವಶೇಷಗಳ ರಾಶಿಯಾಗಿ ಪರಿವರ್ತನೆಗೊಂಡಿದೆ. ಇಲ್ಲಿನ ಕಂದಮ್ಮಗಳು ಸೇರಿದಂತೆ ಸಾವಿರಾರು ಜನರನ್ನು ಇಸ್ರೇಲ್‌ ಹತ್ಯೆ ನಡೆಸಿದೆ. ಕಟ್ಟಡಗಳನ್ನು ಧ್ವಂಸ ಮಾಡಿದೆ. ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಹಾಳುಗೆಡವಿದೆ. ಸಾವಿರಾರು ಜನರು ತಮ್ಮದೆಲ್ಲವನ್ನು ಬಿಟ್ಟು ಬೇರೆಡೆಗೆ ಪಲಾಯನ ಮಾಡಿದ್ದಾರೆ.

ಕಳೆದ ಮಂಗಳವಾರ ಉತ್ತರ ಗಾಝಾದ ಬೈತ್ ಲಾಹಿಯಾದ ಬೀದಿಗಳಲ್ಲಿ ಜಮಾಯಿಸಿದ ನೂರಾರು ಜನರು “ದೇವರ ದಯೆಯಿಂದ ಹಮಾಸ್ ತೊಲಗಲಿ, ಹಮಾಸ್‌ನವರು ಭಯೋತ್ಪಾದಕರು, ನಾವು ಯುದ್ದವನ್ನು ಕೊನೆಗೊಳಿಸಲು ಭಯಸುತ್ತೇವೆ” ಎಂಬ ಘೋಷಣೆಗಳನ್ನು ಕೂಗಿ ನೋವು ಹೊರಹಾಕಿದ್ದಾರೆ. ಬುಧವಾರ ಮತ್ತು ಗುರುವಾರ ಕೂಡ ಪ್ರತಿಭಟನೆ ಮುಂದುವರಿದಿದೆ ಎಂದು ವರದಿಯಾಗಿದೆ.

“ಜನರು ನಿರಂತರ ಆಕ್ರಮಣದಿಂದ ಬಸವಳಿದು ಹೋಗಿದ್ದಾರೆ. ಅವರಿಗೆ ಇನ್ನು ಹೋಗಲು ಜಾಗವಿಲ್ಲ. ಹಾಗಾಗಿ, ಯುದ್ದ ನಿಲ್ಲಿಸಿ ಎಂದು ಸ್ವಯಂ ಪ್ರೇರಿತರಾಗಿ ಬೀದಿಗಿಳಿದು ಪ್ರತಿಭಟಿಸಿದ್ದಾರೆ” ಎಂದು ಪ್ರತ್ಯಕ್ಷದರ್ಶಿಯೊಬ್ಬರನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ.

ಬುಧವಾರ ಗಾಝಾದಲ್ಲಿ ಕನಿಷ್ಠ 9 ಪ್ರತಿಭಟನಾ ಮೆರವಣಿಗೆಗಳು ನಡೆದಿವೆ. ” ನಮ್ಮ ರಕ್ತವನ್ನು ಮಾರಿದ ಎಲ್ಲರಿಗೂ ನಮ್ಮ ಧ್ವನಿ ತಲುಪಲಿ” ಎಂಬ ಘೋಷಣೆಗಳನ್ನು ಕೂಗುತ್ತಾ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ತಿಳಿಸಿವೆ.

ಗಾಝಾದಲ್ಲಿ ಹಮಾಸ್ ವಿರುದ್ದ ಪ್ರತಿಭಟನೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು,”ದಾಳಿ ಪುನರಾರಂಭಿಸುವ ನಮ್ಮ ನಿರ್ಧಾರ ಗಾಝಾದಲ್ಲಿ ಕೆಲಸ ಮಾಡುತ್ತಿದೆ. ಹಮಾಸ್ ಕದನ ವಿರಾಮಕ್ಕೆ ಗೌರವ ಕೊಟ್ಟಿಲ್ಲ. ಒಪ್ಪಂದ ಮುರಿಯಲು ಅವರೇ ಕಾರಣ” ಎಂದು ದೂಷಿಸಿದ್ದಾರೆ.

ಅಕ್ಟೋಬರ್ 2023ರಿಂದ ಗಾಝಾದ ಮೇಲೆ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಲ್ಲಿ ಇದುವರೆಗ ಸಾವನ್ನಪ್ಪಿದವರ ಸಂಖ್ಯೆ 50 ಸಾವಿರ ದಾಟಿದೆ.

ಗಾಜಾ ನಗರದ ಜೈಟೌನ್ ಬಳಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಅದರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು. ಕಳೆದ 24 ಗಂಟೆಯಲ್ಲಿ ಯುದ್ಧಪೀಡಿತ ಪ್ರದೇಶದಾದ್ಯಂತ ನಡೆದ ದಾಳಿಗಳಲ್ಲಿ 40 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಆಮದು ಕಾರುಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್ ಆಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...