Homeಮುಖಪುಟಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ: ರೈತಹೋರಾಟದ ಇಂದಿನ ಘೋಷಣೆ

ಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ: ರೈತಹೋರಾಟದ ಇಂದಿನ ಘೋಷಣೆ

ಇಂದು ನೀವು ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸಲು ಬಯಸಿದರೆ "ಕಿಸಾನ್ ಮೋರ್ಚಾ" ಎಂಬ ಎರಡು ಸರಳ ಪದಗಳಲ್ಲಿ ವ್ಯಾಖ್ಯಾನಿಸಬಹುದು. ಅಲ್ಲಿ ಎಲ್ಲಾ ಧರ್ಮ ಮತ್ತು ಜಾತಿಗಳ ಜನರು ಒಟ್ಟಾಗಿ ಹೋರಾಡುತ್ತಿದ್ದಾರೆ

- Advertisement -
- Advertisement -

ದಿಲ್ಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ಭರ್ತಿ 60 ದಿನಗಳನ್ನು ಪೂರೈಸಿದೆ. ಈ ನಡುವೆ ಒಂದೂವರೆ ವರ್ಷಗಳ ಕಾಲ ಕೃಷಿ ಕಾಯ್ದೆಗಳನ್ನು ತಡೆಹಿಡಿಯುವುದಾಗಿ ಘೋಷಿಸಿರುವ ಕೇಂದ್ರ ಸರ್ಕಾರದಕ್ಕೆ ನಿರ್ಧಾರಕ್ಕೆ ರೈತರು ಕಿವಿಗೊಟ್ಟಿಲ್ಲ. ಜನವರಿ 26 ರಂದು ಗಣರಾಜ್ಯೋತ್ಸವದಂದು ಬೃಹತ್ ಟ್ರಾಕ್ಟರ್ ಪೆರೇಡ್ ನಡೆಸುವ ಮೂಲಕ ಇಡಿ ವಿಶ್ವಕ್ಕೆ ತಮ್ಮ ಹೋರಾಟವನ್ನು ಪ್ರದರ್ಶಿಸುವತ್ತ ಅವರು ಗಮನ ನೀಡಿದ್ದಾರೆ. ಅಲ್ಲದೇ ರೈತ ಹೋರಾಟದ ಮುಖವಾಣಿ ಕಿಸಾನ್ ಏಕ್ತಾ ಮೋರ್ಚಾ ಪ್ರತಿದಿನವೂ ಒಂದೊಂದು ಹ್ಯಾಷ್‌ಟ್ಯಾಗ್‌ ಅನ್ನು ಟ್ರೆಂಡ್ ಮಾಡುವ ಮೂಲಕ ಗಮನ ಸೆಳೆಯುತ್ತಿದ್ದು ಇಂದು #StopChinaNotFarmers ಎಂಬ ಘೋಷಣೆ ನೀಡಿದೆ.

ಕೇಂದ್ರ ಸರ್ಕಾರ ಹೇಗಾದರೂ ಮಾಡಿ ರೈತ ಹೋರಾಟವನ್ನು ತಡೆಯಬೇಕೆಂದು ಪ್ರಯತ್ನಿಸುತ್ತಿದೆ. ಆದರೆ ಅದೇ ಸಮಯದಲ್ಲಿ ಚೀನಾ ದೇಶವು ಅರುಣಾಚಲ ಪ್ರದೇಶದಲ್ಲಿ ಗಡಿ ಕ್ಯಾತೆ ತೆಗೆದಿದೆ. ಭಾರತದ ಪ್ರದೇಶದೊಳಕ್ಕೆ ನುಗ್ಗಿರುವ ಚೀನಾ ಅರುಣಾಚಲ ಪ್ರದೇಶದಲ್ಲಿ ಪುಟ್ಟ ಗ್ರಾಮವನ್ನೇ ನಿರ್ಮಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮೋದಿ ಸರ್ಕಾರ ಚೀನಾವನ್ನು ತಡೆಯಬೇಕೆ ಹೊರತು ರೈತ ಹೋರಾಟವನ್ನಲ್ಲ ಎಂದು ಕಿಸಾನ್ ಏಕ್ತಾ ಮೋರ್ಚಾ ಪ್ರತಿಪಾದಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಆರಂಭವಾಗಿವೆ.

“ಯುದ್ಧದ ಸಮಯದಲ್ಲಿ, ಕಾನೂನು ಮೌನವಾಗುತ್ತದೆ. ಮೋದಿಯವರೆ ಚೀನಾವನ್ನು ಟಾರ್ಗೆಟ್ ಮಾಡಿ, ರೈತರನ್ನಲ್ಲ. ಮೋದಿ ಸರ್ಕಾರಕ್ಕೆ ನಾಚಿಕೆಯಾಗಬೇಕು” ಎಂದು ರಾಜ್ ಸಂದು ಕಿಸಾನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

‘ಇಂದು ನೀವು ರಾಷ್ಟ್ರೀಯತೆಯನ್ನು ವ್ಯಾಖ್ಯಾನಿಸಲು ಬಯಸಿದರೆ “ಕಿಸಾನ್ ಮೋರ್ಚಾ” ಎಂಬ ಎರಡು ಸರಳ ಪದಗಳಲ್ಲಿ ವ್ಯಾಖ್ಯಾನಿಸಬಹುದು. ಅಲ್ಲಿ ಎಲ್ಲಾ ಧರ್ಮ ಮತ್ತು ಜಾತಿಗಳ ಜನರು ಒಟ್ಟಾಗಿ ಹೋರಾಡುತ್ತಿದ್ದಾರೆ. ಸಹೋದರತ್ವವನ್ನು ಕಾಪಾಡಿಕೊಳ್ಳಬೇಕು’ ಎಂದು ಕಿಸಾನ್ ಏಕ್ತಾ ಮೋರ್ಚಾ ಟ್ವೀಟ್ ಮಾಡಿದೆ. ಅದರಲ್ಲಿ ಬೌಧ್ಧರು, ಸಿಖ್ಖರು, ಮುಸ್ಲಿಂ ಮತ್ತು ಹಿಂದೂಗಳು ಒಟ್ಟಿಗೆ ಹೋರಾಟದಲ್ಲಿರುವ ಚಿತ್ರಗಳನ್ನು ಷೇರ್ ಮಾಡಲಾಗಿದೆ.

ಇಂದಿನ ಹ್ಯಾಷ್‌ಟ್ಯಾಗ್ #StopChinaNotFarmers ಆಗಿದೆ. ಇದನ್ನು ಬಳಸಿ ಷೇರ್ ಮಾಡಿ, ವೈರಲ್ ಮಾಡಿ. ನಮ್ಮ ಧ್ವನಿ ಸರ್ಕಾರಕ್ಕೆ ಕೇಳಲೇಬೇಕು ಮತ್ತು ಅದು ಈ ಕರಾಳ ಕಾನೂನುಗಳನ್ನು ವಾಪಸ್ ಪಡೆಯಲೇಬೇಕು ಎಂದು ರೈತರು ಪಟ್ಟು ಹಿಡಿದಿದ್ದಾರೆ. ರೈತರ ಕರೆ ಸಫಲ ನೀಡಿದ್ದು ಕೆಲವೇ ಗಂಟೆಗಳಲ್ಲಿ ಈ ಹ್ಯಾಷ್‌ಟ್ಯಾಗ್‌ ಇಡೀ ಭಾರತದಲ್ಲಿ ನಂಬರ್ ಒನ್ ಸ್ಥಾನದಲ್ಲಿ ಟ್ರೆಂಡ್‌ ಆಗುತ್ತಿದೆ.

ರೈತರನ್ನು ತಡೆಯಲು ಸಿಂಗು ಗಡಿಯಲ್ಲಿ ಮರಳು ತುಂಬಿದ ಟ್ರಕ್‌ಗಳು, ಮುಳ್ಳುತಂತಿ, ಬ್ಯಾರಿಕೇಡ್‌ಗಳು ಮತ್ತು ಕಂಟೈನರ್‌ಗಳನ್ನು ಅಡ್ಡಲಾಗಿ ನಿಲ್ಲಿಸಲಾಗಿದೆ. ಮೋದಿಯವರು ಇದೇ ಕೋಪವನ್ನು ಚೀನಾದೊಂದಿಗೆ ತೋರಿಸಿದ್ದರೆ ಇಂದು ಅರುಣಾಚಲ ಪ್ರದೇಶದಲ್ಲಿ ಚೀನಾ ಗ್ರಾಮವೊಂದನ್ನು ನಿರ್ಮಿಸುತ್ತಿರಲಿಲ್ಲ ಎಂದು ನವಜೋತ್ ಕೌರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಗಣರಾಜ್ಯೋತ್ಸವವನ್ನು ಆಚರಿಸಲು ದೆಹಲಿಯಲ್ಲಿ ರೈತರು ತಮ್ಮ ಟ್ರ್ಯಾಕ್ಟರ್ ರ್ಯಾಲಿ ಮಾಡುವುದನ್ನು ತಡೆಯಲು ದೆಹಲಿ ಗಡಿಯಲ್ಲಿ ಸರ್ಕಾರದ ಸಿದ್ಧತೆ ಇದು! ಅವರು ಚೀನಾ ಗಡಿಯಲ್ಲಿ ಈ ರೀತಿಯ ತಯಾರಿ ಮಾಡಿದ್ದರೆ, ಅವರು ಲಡಾಖ್ ಮತ್ತು ಅರುಣಾಚಲದಲ್ಲಿ ನಮ್ಮ ಭೂಮಿಯನ್ನು ಚೀನಾ ಆಕ್ರಮಿಸದಂತೆ ತಡೆಯಬಹುದಿತ್ತು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

ನಮ್ಮ ವರ್ತಮಾನವು ನಮ್ಮ ಭವಿಷ್ಯದ ಹಿಂದಿನದು. ಇದು ನಮ್ಮ ಐತಿಹಾಸಿಕ ಕ್ಷಣ. ನಾವು ಅದನ್ನು ಹೇಗೆ ಗೆದ್ದೆವೆ ಎಂಬುದನ್ನು ಜಗತ್ತಿಗೆ ತೋರಿಸುತ್ತೇವೆ ಎಂದು ಮಣಿ ಕೌರ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಯಾರನ್ನೂ ಗೆಲ್ಲಲು ಅಥವಾ ಸೋಲಿಸಲು ನಾವು ಇಲ್ಲಿಲ್ಲ. ನಾವು ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ !! ಎಲ್ಲಾ 3 ಮಸೂದೆಗಳನ್ನು ರದ್ದುಪಡಿಸಬೇಕೆಂದು ನಾವು ಬಯಸುತ್ತೇವೆಯೇ ಹೊರತು ಮುಂದೂಡಲೆಂದಲ್ಲ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೃಷಿ ಕಾನೂನುಗಳಿಗೆ ಒಂದೂವರೆ ವರ್ಷ ತಡೆ – ಕೇಂದ್ರದ ಪ್ರಸ್ತಾವ ತಿರಸ್ಕರಿಸಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...